CP Yogeshwar: ಚನ್ನಪಟ್ಟಣ ಸಿಪಿ ಯೋಗೇಶ್ವರ ಭದ್ರಕೋಟೆ, ಅಂಕಿ-ಅಂಶಗಳು
ರಾಮನಗರ, ಅಕ್ಟೋಬರ್ 23: ಬಿಜೆಪಿ ನಾಯಕ ಸಿ. ಪಿ. ಯೋಗೇಶ್ವರ ಕಾಂಗ್ರೆಸ್ ಸೇರಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಚನ್ನಪಟ್ಟಣ ಸಿ. ಪಿ. ಯೋಗೇಶ್ವರ ಭದ್ರಕೋಟೆ. ಅವರು ಅಲ್ಲಿ ಪಕ್ಷದ ಹೊರತಾಗಿಯೂ ವೈಯಕ್ತಿಕ ಮತಬ್ಯಾಂಕ್ ಹೊಂದಿದ್ದಾರೆ. ನವೆಂಬರ್ 13ರಂದು ನಡೆಯುವ ಉಪ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು? ಎಂಬುದು ಸದ್ಯದ ಪ್ರಶ್ನೆಯಾಗಿದೆ.
ಚನ್ನಪಟ್ಟಣದಲ್ಲಿ ಆಧುನಿಕ ಭಗೀರಥ, ಸೈನಿಕ ಎಂದೆಲ್ಲ ಕರೆಸಿಕೊಳ್ಳುವ ಸಿ. ಪಿ. ಯೋಗೇಶ್ವರ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಚನ್ನಪಟ್ಟಣ ಗೆಲ್ಲಲೇಬೇಕು ಎಂದು ಪಣತೊಟ್ಟಿದ್ದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಗೆಲುವಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.

ಚನ್ನಪಟ್ಟಣದ ಚುನಾವಣೆ ಎಂದರೆ ಅದು ಸಿ. ಪಿ. ಯೋಗೇಶ್ವರ ಮತ್ತು ಎಚ್. ಡಿ. ಕುಮಾರಸ್ವಾಮಿ ನಡುವಿನ ಹೋರಾಟ. ಈ ಬಾರಿ ಉಪ ಚುನಾವಣೆಯಲ್ಲಿಯೂ ಅದೇ ಪುನರಾವರ್ತನೆಯಾಗಿದೆ. ಡಿ. ಕೆ. ಶಿವಕುಮಾರ್ ಸಹ ಎಚ್. ಡಿ. ಕುಮಾರಸ್ವಾಮಿಗೆ ಸೋಲಿಸಬೇಕು ಎಂದು ಕಾಯುತ್ತಿದ್ದು, ಅದಕ್ಕೆ ಸಿ. ಪಿ. ಯೋಗೇಶ್ವರ ಬೆಂಬಲವೂ ಸಿಕ್ಕಿದೆ.
ವಿವಿಧ ಪಕ್ಷಗಳಿಂದ ಚನ್ನಪಟ್ಟಣದಲ್ಲಿ ಚುನಾವಣೆ ಎದುರಿಸಿ ಸಿ. ಪಿ. ಯೋಗೇಶ್ವರ ಸೋಲು, ಗೆಲುವು ಕಂಡಿದ್ದಾರೆ. ಕ್ಷೇತ್ರದಲ್ಲಿ ಅನಿತಾ ಕುಮಾರಸ್ವಾಮಿಯನ್ನು ಸೋಲಿಸಿದ್ದ ಸಿ. ಪಿ. ಯೋಗೇಶ್ವರ, ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಸೋಲು ಕಂಡಿದ್ದಾರೆ. ಈಗ ಉಪ ಚುನಾವಣೆ ಕಣ ಕುತೂಹಲಕ್ಕೆ ಕಾರಣವಾಗಿದೆ. ಯಾರಿಗೆ ಗೆಲುವು ಎಂದು ಕೇಂದ್ರದ ಬಿಜೆಪಿ ನಾಯಕರು ಕಾದು ನೋಡುವಂತೆ ಮಾಡಿದ್ದಾರೆ ಸಿ. ಪಿ. ಯೋಗೇಶ್ವರ.
ಸಿ. ಪಿ. ಯೋಗೇಶ್ವರ ಅಂಕಿ ಅಂಶಗಳು: 1999 ರಿಂದ 2023ರ ಚನ್ನಪಟ್ಟಣ ಚುನಾವಣೆ ನೋಡುವುದಾದರೆ ಸಿ. ಪಿ. ಯೋಗೇಶ್ವರ ಸೋಲು, ಗೆಲುವು ಕಂಡಿದ್ದಾರೆ. ಆದರೆ ಅವರು ಪ್ರತಿ ಚುನಾವಣೆಯಲ್ಲಿಯೂ 50,000 ಮತಗಳನ್ನು ಪಡೆದಿದ್ದು, ಈ ಬಾರಿಯ ಉಪ ಚುನಾವಣೆ ಕುತೂಹಲವನ್ನು ಹೆಚ್ಚಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಯಾರನ್ನು ಅಭ್ಯರ್ಥಿ ಮಾಡಲಿದೆ? ಎಂಬುವುದು ಈಗಿನ ಲೆಕ್ಕಾಚಾರ.
ಸಿ. ಪಿ. ಯೋಗೇಶ್ವರ 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚನ್ನಪಟ್ಟಣದಲ್ಲಿ ಕಣಕ್ಕಿಳಿದರು. 50,716 ಮತಗಳನ್ನು ಪಡೆದು ಕಾಂಗ್ರೆಸ್‌ನ ಸಾದತ್ ಅಲಿಖಾನ್ (31,888 ಮತ) ಸೋಲಿಸಿದರು. 2004ರಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದರು. 64,162 ಮತಗಳನ್ನು ಪಡೆದು ಜೆಡಿಎಸ್‌ನ ಅಶ್ವಥ್ ಎಂ. ಸಿ. (47,993) ಸೋಲಿಸಿದರು.
2008ರಲ್ಲಿ ಮತ್ತೆ ಸಿ. ಪಿ. ಯೋಗೇಶ್ವರ ಕಾಂಗ್ರೆಸ್‌ನಿಂದ ಕಣಕ್ಕಿಳಿದರು. 69,356 ಮತಗಳನ್ನು ಪಡೆದು, ಜೆಡಿಎಸ್‌ನ ಅಶ್ವಥ್ ಎಂ. ಸಿ. (64,426 ಮತ) ಸೋಲಿಸಿದರು. 2013ರಲ್ಲಿ ಸಮಾಜವಾದಿ ಪಕ್ಷದಿಂದ ಸಿ. ಪಿ. ಯೋಗೇಶ್ವರ ಕಣಕ್ಕಿಳಿದರು. 80,099 ಮತಗಳನ್ನು ಪಡೆದು, ಜೆಡಿಎಸ್‌ನ ಅನಿತಾ ಕುಮಾರಸ್ವಾಮಿ (73,635 ಮತ) ಸೋಲಿಸಿದರು.
ಆದರೆ 2018, 2023ರಲ್ಲಿ ಎರಡು ಬಾರಿಯೂ ಸಿ. ಪಿ. ಯೋಗೇಶ್ವರ ಚನ್ನಪಟ್ಟಣದಲ್ಲಿ ಎಚ್. ಡಿ. ಕುಮಾರಸ್ವಾಮಿ ಮುಂದೆ ಸೋತಿದ್ದಾರೆ. ಆದರೆ 2013ರಲ್ಲಿ ಸಿ. ಪಿ. ಯೋಗೇಶ್ವರ ಬಿಜೆಪಿ ಅಭ್ಯರ್ಥಿಯಾಗಿ 66,465 ಮತಗಳನ್ನು ಪಡೆದಿದ್ದರು. ಗೆಲುವು ಸಾಧಿಸಿದ ಎಚ್. ಡಿ. ಕುಮಾರಸ್ವಾಮಿ ಪಡೆದಿದ್ದು 87,995 ಮತಗಳು.
2023ರಲ್ಲಿಯೂ ಬಿಜೆಪಿಯಿಂದ ಸಿ. ಪಿ. ಯೋಗೇಶ್ವರ ಜೆಡಿಎಸ್‌ನ ಎಚ್. ಡಿ. ಕುಮಾರಸ್ವಾಮಿ ಎದುರಾಳಿಯಾದರು. ಸಿ. ಪಿ. ಯೋಗೇಶ್ವರ 80,677 ಮತಗಳನ್ನು ಪಡೆದು ಸೋಲುಕಂಡರು, ಕುಮಾರಸ್ವಾಮಿ 96,592 ಮತಗಳನ್ನು ಪಡೆದು ಗೆಲುವು ಸಾಧಿಸಿದರು.
2024ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಗೆಲುವು ಸಾಧಿಸಿದ ಎಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ ಈಗ ಉಪ ಚುನಾವಣೆ ಎದುರಾಗಿದೆ. ಸಿ. ಪಿ. ಯೋಗೇಶ್ವರ ಕಾಂಗ್ರೆಸ್ ಅಭ್ಯರ್ಥಿ. ಈ ಬಾರಿ ಕುಮಾರಸ್ವಾಮಿ ಕ್ಷೇತ್ರ ಉಳಿಸಿಕೊಳ್ಳಲು ಯಾವ ಅಭ್ಯರ್ಥಿ ಕಣಕ್ಕಿಳಿಸಲಿದ್ದಾರೆ? ಕಾದು ನೋಡಬೇಕಿದೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್‌ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications