Channapatna By Election: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ?

ರಾಮನಗರ, ಆಗಸ್ಟ್ 25: ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪ ಚುನಾವಣೆ ಯಾವಾಗ?, ಅಭ್ಯರ್ಥಿಗಳು ಯಾರು? ಇದು ಸದ್ಯ ಕರ್ನಾಟಕದಲ್ಲಿ ಕುತೂಹಲ ಮೂಡಿಸಿರುವ ಪ್ರಶ್ನೆ. ಕಾಂಗ್ರೆಸ್ ಪಕ್ಷದಿಂದ ಉಪ ಚುನಾವಣೆಗೆ "ನಾನೇ ಅಭ್ಯರ್ಥಿ" ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಘೋಷಣೆ ಮಾಡಿರುವುದು ಚುನಾವಣಾ ಕಾವು ಹೆಚ್ಚಿಸಿದೆ. ಆದರೆ ಎದುರಾಳಿಗಳು ಯಾರು? ಎಂಬ ಪ್ರಶ್ನೆಗೆ ಉತ್ತರವಿಲ್ಲ.

ಬಿಜೆಪಿ-ಜೆಡಿಎಸ್ ಮೈತ್ರಿಕೂಟದಲ್ಲಿ ಚನ್ನಪಟ್ಟಣ ಯಾರಿಗೆ?. ಬಿಜೆಪಿ ಅಥವ ಜೆಡಿಎಸ್‌ನಿಂದ ಕಣಕ್ಕಿಳಿಯುವ ಅಭ್ಯರ್ಥಿ ಯಾರು? ಎಂಬುದು ಇನ್ನೂ ನಿಗೂಢವಾಗಿದೆ. ಆದರೆ ಈಗ ಚನ್ನಪಟ್ಟಣದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಆದರೆ ಯಾವುದೇ ಪಕ್ಷದ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡಿಲ್ಲ.

Channapatna By Election May Witness For Triangular Battle

'ಮೈಸೂರು ಚಲೋ' ಬೆಂಗಳೂರು-ಮೈಸೂರು ಪಾದಯಾತ್ರೆ ಬಳಿಕ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜಕೀಯದಲ್ಲಿ ಸಕ್ರಿಯವಾಗಿದ್ದಾರೆ. ಚನ್ನಪಟ್ಟಣದಲ್ಲಿ ಅವರು ಪಕ್ಷದ ಕಾರ್ಯಕರ್ತರನ್ನು ಉಪ ಚುನಾವಣೆಗೆ ಸಿದ್ಧಗೊಳಿಸುತ್ತಿದ್ದಾರೆ. ಆದರೆ ಮೈತ್ರಿಕೂಟ ಅಭ್ಯರ್ಥಿ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ.

ತ್ರಿಕೋನ ಸ್ಪರ್ಧೆ?: ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಟಿಕೆಟ್ ಸಿ. ಪಿ. ಯೋಗೇಶ್ವರ ಕೈ ತಪ್ಪಿದರೆ ಮುಂದೇನು? ಎಂಬ ಪ್ರಶ್ನೆಗೆ ತ್ರಿಕೋನ ಸ್ಪರ್ಧೆಯೇ ಉತ್ತರ. ಸಿ. ಪಿ. ಯೋಗೇಶ್ವರ, ನಿಖಿಲ್ ಕುಮಾರಸ್ವಾಮಿ, ಡಿ. ಕೆ. ಶಿವಕುಮಾರ್ ಅಭ್ಯರ್ಥಿಗಳು ಎಂಬ ಮಾತು ಕೇಳಿ ಬರುತ್ತಿದೆ. ಸಿ. ಪಿ. ಯೋಗೇಶ್ವರಗೆ ಟಿಕೆಟ್ ನೀಡಲು ಎಚ್. ಡಿ. ಕುಮಾರಸ್ವಾಮಿ ಇನ್ನೂ ಅಂತಿಮ ಒಪ್ಪಿಗೆ ನೀಡಿಲ್ಲ. ಈ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ.

ಎಚ್. ಡಿ. ಕುಮಾರಸ್ವಾಮಿ 2024ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಕಣಕ್ಕಿಳಿದು ಗೆಲವು ಸಾಧಿಸಿದ ಬಳಿಕ ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು. ಆಗ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಈಗ ಲೆಕ್ಕಾಚಾರವೇ ಬೇರೆಯಾಗಿದೆ. ಅದರಲ್ಲೂ 'ಮೈಸೂರು ಚಲೋ' ಪಾದಯಾತ್ರೆಯ ಬಳಿಕ ಚನ್ನಪಟ್ಟಣವನ್ನು ಉಳಿಸಿಕೊಳ್ಳಬೇಕು, ನಿಖಿಲ್ ಅಭ್ಯರ್ಥಿಯಾಗಬೇಕು ಎಂದು ಜೆಡಿಎಸ್ ನಾಯಕರು ಕುಮಾರಸ್ವಾಮಿಯನ್ನು ಒತ್ತಾಯಿಸುತ್ತಿದ್ದಾರೆ.

ಎಂಎಲ್‌ಸಿ ಮತ್ತು ಬಿಜೆಪಿ ನಾಯಕ ಸಿ. ಪಿ. ಯೋಗೇಶ್ವರ ಉಪ ಚುನಾವಣೆ ಬಿಜೆಪಿ ಟಿಕೆಟ್‌ಗಾಗಿ ಪ್ರಯತ್ನ ನಡೆಸುತ್ತಲೇ ಇದ್ದಾರೆ. ಆದರೆ ಟಿಕೆಟ್ ಸಿಗುವ ಭರವಸೆ ಹೈಕಮಾಂಡ್ ನಾಯಕರಿಂದ ಇನ್ನೂ ಸಿಕ್ಕಿಲ್ಲ. ಟಿಕೆಟ್ ಕೈತಪ್ಪಿದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಎಂಬ ಸಂದೇಶವನ್ನು ಅವರು ಈಗಾಗಲೇ ಕೊಟ್ಟಿದ್ದಾರೆ.

ಆದ್ದರಿಂದಲೇ ಸಿ. ಪಿ. ಯೋಗೇಶ್ವರ ಪಕ್ಷೇತರ, ಬಿಜೆಪಿ-ಜೆಡಿಎಸ್‌ನಿಂದ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ನಿಂದ ಡಿ. ಕೆ. ಶಿವಕುಮಾರ್ ಎಂಬ ತ್ರಿಕೋನ ಲೆಕ್ಕಾಚಾರವನ್ನು ಹಾಕಲಾಗುತ್ತಿದೆ. ಆದರೆ ಸಿ. ಪಿ. ಯೋಗೇಶ್ವರಗೆ ಚನ್ನಪಟ್ಟಣದ ಬಿಜೆಪಿ ಟಿಕೆಟ್‌ ಸಿಕ್ಕರೆ ಚುನಾವಣಾ ಚಿತ್ರಣವೇ ಬದಲಾಗಲಿದೆ.

2019ರ ಮಂಡ್ಯ ಲೋಕಸಭೆ ಚುನಾವಣೆ, 2023ರ ಚುನಾವಣೆಯಲ್ಲಿ ರಾಮನಗರದಲ್ಲಿ ಸೋತ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ರಾಜಕೀಯ ಭವಿಷ್ಯ ಗಟ್ಟಿ ಮಾಡಬೇಕಿದೆ. ಕುಮಾರಸ್ವಾಮಿ ರಾಷ್ಟ್ರ ರಾಜಕೀಯದಲ್ಲಿದ್ದಾರೆ. ಪ್ರಜ್ವಲ್ ರೇವಣ್ಣ ಜೈಲಿನಲ್ಲಿದ್ದಾರೆ. ಆದ್ದರಿಂದ ಭವಿಷ್ಯದಲ್ಲಿ ರಾಜ್ಯ ರಾಜಕೀಯದಲ್ಲಿ ನಿಖಿಲ್ ಉಳಿಯಬೇಕಾದರೆ ಉಪ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂಬುದು ಕುಮಾರಸ್ವಾಮಿ ಲೆಕ್ಕಾಚಾರವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+