ಚನ್ನಪಟ್ಟಣ ವಿಧಾನಸಭಾ ಚುನಾವಣೆ ಫಲಿತಾಂಶ 2023: 15974 ಮತಗಳ ಅಂತರದಲ್ಲಿ ಗೆದ್ದ ಹೆಚ್‌ಡಿ ಕುಮಾರಸ್ವಾಮಿ

ರಾಮನಗರ, ಮೇ 13: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಮುಕ್ತಾಯವಾಗಿದ್ದು, ಹೆಚ್‌ಡಿ ಕುಮಾರಸ್ವಾಮಿ ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಿರುದ್ಧ 15974 ಮತಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ.

ಗೊಂಬೆ ನಾಡು ಚನ್ನಪಟ್ಟಣ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್‌ ಕ್ಷೇತ್ರವಾಗಿದ್ದು, ಸಿಎಂ ಅಭ್ಯರ್ಥಿಯ ಶಾಸಕ ಸ್ಥಾನದ ಭವಿಷ್ಯ ಈ ಕ್ಷೇತ್ರದಲ್ಲೇ ನಿರ್ಣಾಯಕವಾಗಬೇಕಿದೆ. ಚನ್ನಪಟ್ಟಣದ ಗೊಂಬೆ ಆಡಿಸುವವರು ಯಾರು? ಎನ್ನುವ ಕುತೂಹಲ ಎಲ್ಲರಲ್ಲಿತ್ತು, ಈಗ ಜನ ಕುಮಾರಣ್ಣ ಗೆಲುವು ಸಾಧಿಸಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾಕ್ಷೇತ್ರ ತೀವ್ರ ರಾಜಕೀಯ ಜಿದ್ದಾಜಿದ್ದಿನ ಕ್ಷೇತ್ರವಾಗಿ ಬಿಂಬಿತವಾಗುತ್ತಿದೆ. ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರಾ ನೇರ ಪೈಪೋಟಿ ಇತ್ತು. ಈ ಬಾರಿ ಕಾಂಗ್ರೆಸ್ ಗಂಗಾಧರ್ ಅವರನ್ನು ಕಣಕ್ಕಿಳಿಸಿದ್ದು, ಪ್ರಭಾವಿ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಿ.ಪಿಯೋಗೇಶ್ವರ್ ಅವರನ್ನು ಎದುರಿಸಿ ಗೆದ್ದಿದ್ದಾರೆ.

channapattana election results

ಕ್ಷೇತ್ರದ ಶಾಸಕರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಭವಿಷ್ಯದ ಮುಖ್ಯಮಂತ್ರಿ ಎಂದೇ ಬಿಂಬಿಸಲಾಗುತ್ತಿದೆ. ಹೀಗಾಗಿ ಇವರಿಗೆ ಕ್ಷೇತ್ರದಲ್ಲಿ ಗೆಲುವು ಅನಿವಾರ್ಯವಾಗಿದೆ. ಇನ್ನು ಬಿಜೆಪಿ ಅಭ್ಯರ್ಥಿಯಾಗಿರುವ ಸಿ.ಪಿಯೋಗೇಶ್ವರ್‌ಗೆ ಚನ್ನಪಟ್ಟಣದಲ್ಲಿ ಗೆಲುವು ಬಹುಮುಖ್ಯವಾಗಿದೆ.

ನಟನಾಗಿ ಸಾಕಷ್ಟು ಹೆಸರು ಗಳಿಸಿದ್ದ ಸಿ.ಪಿ.ಯೋಗೇಶ್ವರ್ ಮೊದಲ ಬಾರಿಗೆ 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದರು. 2004, 2008ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜೆಡಿಎಸ್‌ನ ಎಂ.ಸಿ.ಅಶ್ವಥ್ ಅವರನ್ನು 2 ಬಾರಿ ಮಣಿಸಿದ್ದರು. 2009ರಲ್ಲಿ ಸಿ.ಪಿ.ಯೋಗೇಶ್ವರ್ ಬಿಜೆಪಿ ಸೇರಿದ ಹಿನ್ನೆಲೆ ಉಪ ಚುನಾವಣೆ ನಡೆಯಿತು. ಜೆಡಿಎಸ್ ಅಭ್ಯರ್ಥಿ ಎಂ.ಸಿ. ಅಶ್ವಥ್ ಗೆದ್ದರು ಕೂಡ ಮುಂದಿನ ದಿನಗಳಲ್ಲಿ ಅವರೂ ಬಿಜೆಪಿ ಸೇರಿದರು. 2011ರಲ್ಲಿ ಚನ್ನಪಟ್ಟಣ ಕ್ಷೇತ್ರ ಮತ್ತೊಂದು ಉಪ ಚುನಾವಣೆ ಎದುರಿಸಿತು. ಆಗ ಜೆಡಿಎಸ್‌ ಅಭ್ಯರ್ಥಿ ಎಸ್.ಎಲ್. ನಾಗರಾಜ್ ಅವರನ್ನು ಬಿಜೆಪಿ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಮಣಿಸಿದರು.

2013ರ ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಬೇರೆ ಪಕ್ಷದತ್ತ ಮುಖಮಾಡಿ 2013ರ ಚುನಾವಣೆಯಲ್ಲಿ ಜಯ ಸಾಧಿಸಿದರು. ನಂತರ 2018ರ ಚುನಾವಣೆ ವೇಳೆಗೆ ಬಿಜೆಪಿಗೆ ಮರಳಿದ ಸಿ.ಪಿ. ಯೋಗೇಶ್ವರ್‌ಗೆ ಶಾಕ್ ಕಾದಿತ್ತು. ಜೆಡಿಎಸ್‌ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಎದುರು ಸಿ.ಪಿ.ಯೋಗೇಶ್ವರ್ 2018ರಲ್ಲಿ ಸೋಲು ಕಂಡರು. ಆ ಕ್ಷಣದಿಂದಲೂ ಚೆನ್ನಪಟ್ಟಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಕಾದಾಟ ಆರಂಭವಾಗಿತ್ತು.

ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೂ ಈ ಚುನಾವಣೆ ಅಗ್ನಿಪರೀಕ್ಷೆಯಾಗಿದ್ದು, ಕುಮಾರಸ್ವಾಮಿ ಅವರನ್ನು ಸೋಲಿಸಲು ಪಣತೊಟ್ಟಿದ್ದ ಬಿಜೆಪಿ ನಾಯಕರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದರು. ಜೆಡಿಎಸ್‌ ಕೂಡ ಪಂಚರತ್ನ ಯಾತ್ರೆ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸಿದ್ದು, ಕ್ಷೇತ್ರದ ಮತದಾರರು ಕುಮಾರಸ್ವಾಮಿ ಅವರ ಕೈ ಹಿಡಿಯುತ್ತಾರೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ.

ಕಳೆದ ಬಾರಿ ಇವರು ಪಡೆದಿದ್ದ ಮತವನ್ನು ನೋಡುವುದಾದರೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು 87,995 ಮತ ಪಡೆದಿದ್ದರೆ, ಬಿಜೆಪಿಯ ಸಿ.ಪಿ.ಯೋಗೇಶ್ವರ್ 66,465 ಮತ್ತು ಕಾಂಗ್ರೆಸ್‌ನ ಎಚ್.ಎಂ.ರೇವಣ್ಣ 30,208 ಮತ ಪಡೆದಿದ್ದರು. ಈ ಬಾರಿ ಕಾಂಗ್ರೆಸ್ ನಿಂದ ಎಚ್.ಎಂ.ರೇವಣ್ಣರ ಬದಲಿಗೆ ಗಂಗಾಧರ್ ಕಣದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+