• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನೀರಿನ ಸಂಪ್ ಗೆ ಬಿದ್ದು ಚನ್ನಪಟ್ಟಣ ಕಾನ್ ಸ್ಟೆಬಲ್ ಆತ್ಮಹತ್ಯೆ

By ರಾಮನಗರ ಪ್ರತಿನಿಧಿ
|

ರಾಮನಗರ, ಆಗಸ್ಟ್‌ 08: ನೀರಿನ ಸಂಪ್ ಗೆ ಬಿದ್ದು ಪೊಲೀಸ್ ಕಾನ್‌ ಸ್ಟೆಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಚನ್ನಪಟ್ಟಣದಲ್ಲಿ ಇಂದು ನಡೆದಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೆಬಲ್ ಆಗಿದ್ದ ರವಿ ಬಿರಾದಾರ್ (30) ಆತ್ಮಹತ್ಯೆ ಮಾಡಿಕೊಂಡವರು.

ಬಿಜಾಪುರ ಸಿಂದಗಿ ಮೂಲದ ರವಿ ಬಿರಾದಾರ್ ಗ್ರಾಮಾಂತರ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪೊಲೀಸ್ ವಸತಿ ಗೃಹದಲ್ಲಿ ವಾಸವಿದ್ದರು. ವಸತಿ ಗೃಹದಲ್ಲೇ ಇದ್ದ ನೀರಿನ ಸಂಪ್ ನಲ್ಲಿ ಬಿದ್ದು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ವರ್ಷಗಳ ಹಿಂದೆ ಕಾನ್ ಸ್ಟೆಬಲ್ ಆಗಿ ಸೇವೆಗೆ ಸೇರಿದ್ದರು. ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಚನ್ನರಾಯಪಟ್ಟಣ ಠಾಣೆ ಪಿಎಸ್ ಐ ಕಿರಣ್ ಆತ್ಮಹತ್ಯೆ

ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.

English summary
A police constable committed suicide by falling into a water sump in Channapatna of Ramanagara today,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X