ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಧುನಿಕ ಅವಳಿ ನಗರಗಳಾಗಿ ರಾಮನಗರ-ಚನ್ನಪಟ್ಟಣ: ಡಿಸಿಎಂ ಅಶ್ವಥ್

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಏಪ್ರಿಲ್ 7: ರಾಜಧಾನಿ ಬೆಂಗಳೂರು ಹಾಗೂ ಆರಮನೆ ನಗರಿ ಮೈಸೂರು ಮಾರ್ಗದ ಆಯಕಟ್ಟಿನ ಜಾಗದಲ್ಲಿರುವ ರಾಮನಗರ ಮತ್ತು ಚನ್ನಪಟ್ಟಣ ಎರಡು ನಗರಗಳನ್ನು ಅತ್ಯಾಧುನಿಕ ಸೌಲಭ್ಯಗಳುಳ್ಳ ಆಧುನಿಕ ಅವಳಿ ನಗರಗಳನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ತಿಳಿಸಿದರು.

ರಾಮನಗರ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಮಂಗಳವಾರ‌ ಬೆಂಗಳೂರಿನಲ್ಲಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.

ರಾಮನಗರ; ವರ್ಷ ಕಳೆದರೂ ಅನಾವರಣಗೊಳ್ಳದ ಪುತ್ಥಳಿಗಳು! ರಾಮನಗರ; ವರ್ಷ ಕಳೆದರೂ ಅನಾವರಣಗೊಳ್ಳದ ಪುತ್ಥಳಿಗಳು!

ಬೆಂಗಳೂರು ಅಭಿವೃದ್ಧಿಯ ಮಾದರಿಯನ್ನು ಇಟ್ಟುಕೊಂಡು ಇವೆರಡೂ ಪಟ್ಟಣಗಳನ್ನು ಅಭಿವೃದ್ಧಿಪಡಿಸುವುದು ಸರಕಾರದ ಉದ್ದೇಶವಾಗಿದೆ. ಅತ್ಯುತ್ತಮ ಮೂಲಸೌಕರ್ಯ, ಒಳಚರಂಡಿ ಹಾಗೂ ಕುಡಿಯುವ ನೀರು ಸರಬರಾಜು ವ್ಯವಸ್ಥೆ, ಆಕರ್ಷಕ ವಿಶಾಲ ಉದ್ಯಾನವನಗಳ ನಿರ್ಮಾಣ, ಕ್ರೀಡಾಂಗಣಗಳ ನಿರ್ಮಾಣ ಸೇರಿದಂತೆ ಅಗತ್ಯವಾದ ಕಾಮಾಗಾರಿಗಳನ್ನು ಕಾಲಮಿತಿಯೊಳಗೆ ಕೈಗೊಂಡು ಮುಗಿಸುವ ಬಗ್ಗೆ ಡಿಸಿಎಂ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಆಮೂಲಾಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ

ಆಮೂಲಾಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ

ಸಭೆಯ ನಂತರ ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಅವರು, "ಈಗಾಗಲೇ ಸಮಗ್ರ ಅಭಿವೃದ್ಧಿ ಯೋಜನಾ ವರದಿ ಸಿದ್ಧಪಡಿಸಲು 37 ಲಕ್ಷ ರೂ. ನೀಡಲಾಗಿದೆ. ಆರೇಳು ತಿಂಗಳಲ್ಲಿ ಈ ಕೆಲಸ ಆಗಲಿದೆ. ಈ ಮೂಲಕ ಸುಸಜ್ಜಿತ ನಗರಗಳ ನಿರ್ಮಾಣಕ್ಕೆ ನಾಂದಿ ಹಾಡಲಿದ್ದೇವೆ' ಎಂದರು. ರಾಮನಗರ ಮತ್ತು ಚನ್ನಪಟ್ಟಣ ಅಭಿವೃದ್ಧಿ ಪ್ರಾಧಿಕಾರಗಳಿಗೆ ಇನ್ನಷ್ಟು ಶಕ್ತಿ ತುಂಬಲಾಗುವುದು. ಎರಡೂ ಪಟ್ಟಣಗಳ ಆಮೂಲಾಗ್ರ ಅಭಿವೃದ್ಧಿಗೆ ಏನೆಲ್ಲ ಅಗತ್ಯವೋ ಎಲ್ಲವನ್ನೂ ಸರಕಾರ ಒದಗಿಸುತ್ತಿದೆ ಎಂದ ಅವರು, ಚನ್ನಪಟ್ಟಣದಲ್ಲಿ ಇನ್ನೊಂದು ಬಸ್‌ ನಿಲ್ದಾಣದ ಅಗತ್ಯವಿದೆ ಎಂಬ ಬೇಡಿಕೆ ಬಂದಿದೆ. ಅದನ್ನೂ ತ್ವರಿತವಾಗಿ ಕಾರ್ಯಗತ ಮಾಡಲಾಗುವುದು ಎಂದು ಡಿಸಿಎಂ ತಿಳಿಸಿದರು.

ಸ್ವಚ್ಛ ಭಾರತ ಪರಿಕಲ್ಪನೆ

ಸ್ವಚ್ಛ ಭಾರತ ಪರಿಕಲ್ಪನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಪರಿಕಲ್ಪನೆಯಂತೆ ಅವಳಿ ನಗರಗಳ ಸ್ವಚ್ಛತೆಯ ಬಗ್ಗೆ ಅದ್ಯತೆ ನೀಡಲಾಗುವುದು. ಕಸ ವಿಂಗಡಣೆ ಮತ್ತು ವಿಲೇವಾರಿಗೆ ಒತ್ತು ನೀಡುವುದರ ಜತೆಗೆ, ನಗರಗಳ ಸೌಂದರ್ಯ ಸಂರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು. ವಿಶಾಲವಾದ ಉದ್ಯಾನವನಗಳನ್ನು ನಿರ್ಮಾಣ ಮಾಡುವುದರ ಜತೆಗೆ, ಅವುಗಳ ನಿರ್ವಹಣೆಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ಡಾ.ಅಶ್ವಥ್ ನಾರಾಯಣ ತಿಳಿಸಿದರು.

ನದಿ ಮೂಲಗಳಿಂದ ಕುಡಿಯುವ ನೀರು

ನದಿ ಮೂಲಗಳಿಂದ ಕುಡಿಯುವ ನೀರು

ಮುಖ್ಯವಾಗಿ, ಎರಡೂ ಕಡೆ ಒಳಚರಂಡಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ಜಾರಿ ಮಾಡಲಾಗುವುದು. ಬೆಂಗಳೂರು ಮಾದರಿಯಲ್ಲಿ ಒಳಚರಂಡಿ ವ್ಯವಸ್ಥೆ ಮಾಡಲಾಗುವುದು. ಇನ್ನು, ನದಿ ಮೂಲಗಳಿಂದ ರಾಮನಗರ-ಚನ್ನಪಟ್ಟಣ ಮಾತ್ರವಲ್ಲದೆ ಇಡೀ ಜಿಲ್ಲೆಯ ಎಲ್ಲ ಗ್ರಾಮಗಳ ಎಲ್ಲ ಮನೆಗಳಿಗೂ ಪೈಪುಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಪ್ರಗತಿಯಲ್ಲಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

Recommended Video

ಲಸಿಕೆ ಪಡೆದ ಬಳಿಕ ಕೊರೊನಾ ಸೋಂಕು , ಕೇಂದ್ರದಿಂದ ಅಧ್ಯಯನ | Oneindia Kannada
ಅಧಿಕಾರಿಗಳ ಜೊತೆ ಮಹತ್ವದ ಸಭೆ

ಅಧಿಕಾರಿಗಳ ಜೊತೆ ಮಹತ್ವದ ಸಭೆ

ಸಭೆಯಲ್ಲಿ ಚನ್ನಪಟ್ಟಣ-ರಾಮನಗರ ನಗರ ಸಭೆಗಳ ಆಯುಕ್ತರು, ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರು, ತಾಂತ್ರಿಕ ಅಧಿಕಾರಿಗಳು ಹಾಗೂ ನಗರಸಭೆಗಳ ಅಧಿಕಾರಿಗಳೂ ಹಾಜರಿದ್ದರು. ಸೇರಿದಂತೆ ಉಪ ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಮುಖ್ಯ ಎಂಜಿನಿಯರ್‌ ಎಸ್.ಎನ್. ದಿನೇಶ್‌ ಇದ್ದರು.

English summary
The Government is planning to develop the two cities of Ramanagara and Channapattana into modern twin cities with sophisticated facilities, DCM Ashwath Narayan Said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X