ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಪ್ರಾಪ್ತ ಮಕ್ಕಳಿಗೆ ಮದ್ಯ ಕುಡಿಸಿದ ಇಬ್ಬರು ಆರೋಪಿಗಳ ಬಂಧನ, ಮತ್ತೋರ್ವ ನಾಪತ್ತೆ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜೂನ್ 7: ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಚಿಣ್ಣರಿಗೆ ಮದ್ಯ ಕುಡಿಸಿ ವಿಕೃತಿ ಮೆರೆದ ಪ್ರಕರಣದಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಮತ್ತೋರ್ವ ಪ್ರಮುಖ ಆರೋಪಿ ನಾಪತ್ತೆಯಾಗಿದ್ದಾನೆ.

ಹತ್ತು ವರ್ಷದ ಕೆಳಗಿನ ಅಪ್ರಾಪ್ತ ಮಕ್ಕಳಿಗೆ ಬಾಡೂಟ ಹಾಕಿ, ಮದ್ಯ ಕುಡಿಸಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗಡಿ ಭಾಗದ ಮರಳಿಪುರ ಎಂಬ ಗ್ರಾಮದಲ್ಲಿ ನಡೆದಿದೆ. ಕಳೆದ ಹತ್ತು ದಿನಗಳ ಹಿಂದೆ ಗ್ರಾಮದ ಬಾಳೆ ತೋಟವೊಂದರಲ್ಲಿ ಬಾಡೂಟ ಆಯೋಜನೆ ಮಾಡಿದ್ದರು.

ರಾಮನಗರ; ಮಕ್ಕಳಿಗೆ ಮದ್ಯ ಕುಡಿಸಿದ ದುಷ್ಕರ್ಮಿಗಳುರಾಮನಗರ; ಮಕ್ಕಳಿಗೆ ಮದ್ಯ ಕುಡಿಸಿದ ದುಷ್ಕರ್ಮಿಗಳು

ಬಾಳೆ ತೋಟದಲ್ಲಿ 7 ಮಕ್ಕಳು ಬಾಡೂಟದ ಜತೆಗೆ ಮದ್ಯ ಕುಡಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಮದ್ಯ‌ ಕುಡಿದ ಮಕ್ಕಳು ಅವಾಚ್ಯ ಶಬ್ದಗಳಿಂದ ಬೈದಾಡಿಕೊಳ್ಳುತ್ತಾರೆ. ಮದ್ಯ ಕುಡಿದ ಬಾಲಕನೊಬ್ಬ ನನಗೆ ಮತ್ತಷ್ಟು ಮದ್ಯ ಬೇಕು‌ ಎಂದು ಕೂಗಾಡುವ ದೃಶ್ಯಗಳು ಎಲ್ಲರ ಮೊಬೈಲ್‌ಗಳಲ್ಲಿ ಹರಿದಾಡುತ್ತಿವೆ.

Ramanagara: Children Drunk Alcohol Case: Two Accused Arrest

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡ ಪೊಲೀಸರು ಘಟನೆಯನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕೋಡಿಹಳ್ಳಿ ಠಾಣೆಯ ಪೊಲೀಸರು, ಪ್ರಕರಣ ಸಂಬಂಧ ಗಣೇಶ್ ಮತ್ತು ಕರಿಯಪ್ಪ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮತ್ತೊಬ್ಬ ಆರೋಪಿ ಸೋಮಸುಂದರ್ ಎಂಬುವವನು ತಲೆ ಮರೆಸಿಕೊಂಡಿದ್ದು, ಆತನ ಹುಡುಕಾಟಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್ ಸ್ಪಷ್ಟಪಡಿಸಿದರು.

Ramanagara: Children Drunk Alcohol Case: Two Accused Arrest

Recommended Video

ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಡಿರೋ ಎಡವಟ್ಟು ನೋಡಿ! | Oneindia Kannada

ಒಟ್ಟಾರೆಯಾಗಿ, ಏನೂ ಅರಿಯದ ಮುದ್ದು ಮಕ್ಕಳ ಜತೆ ಚೆಲ್ಲಾಟವಾಡಲು ಹೋಗಿ ಆರೋಪಿಗಳು ಅಂದರ್ ಆಗಿದ್ದಾರೆ. ಮಕ್ಕಳ ಉಜ್ವಲ ಭವಿಷ್ಯದೊಂದಿಗೆ ಚೆಲ್ಲಾಟವಾಗಿರುವ ಯುವಕರಿಗೆ ಕಠಿಣ ಶಿಕ್ಷೆಯಾಗಬೇಕು ಎಂಬುದು ಸಾರ್ವಜನಿಕರು ಆಗ್ರಹವಾಗಿದೆ.

English summary
The police have registered a voluntary complaint and arrested the two men in connection with the liquor case of children in Kanakapura taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X