Breaking: ಅನುಮಾನಾಸ್ಪದ ರೀತಿಯಲ್ಲಿ ಚಿಲುಮೆ ಮಠದ ಸ್ವಾಮೀಜಿ ಶವ ಪತ್ತೆ

ರಾಮನಗರ, ಡಿಸೆಂಬರ್ 20: ಮಾಗಡಿಯ ಚಿಲುಮೆ ಮಠದ ಬಸವಲಿಂಗ ಶ್ರೀಗಳ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ವಾಮೀಜಿಯ ಅನುಮಾನಾಸ್ಪ ಸಾವು ಭಕ್ತರಲ್ಲಿ ಆತಂಕ ಮೂಡಿಸಿದೆ.

ರಾಮನಗರ ಜಿಲ್ಲೆ ಮಾಗಡಿಯ ಸೋಲೂರು ಬಳಿಯಿರುವ ಚಿಲುಮೆ ಮಠದ ಆವರಣದಲ್ಲಿ ನೇಣು ಬಿಗಿದ ರೀತಿಯಲ್ಲಿ ಸ್ವಾಮೀಜಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ವಿವಿಧ ಮಠದ ಶ್ರೀಗಳು ಆಗಮಿಸುತ್ತಿದ್ದಾರೆ.

ರಾಮನಗರ ಜಿಲ್ಲೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Ramanagara: Chilume Math Basavalinga Swamiji Death in Suspicious Manner

ಚಿಲುಮೆ‌ ಮಠದ ಬಸವಲಿಂಗ ಸ್ವಾಮೀಜಿಯ ಅಂತಿಮ ದರ್ಶನಕ್ಕಾಗಿ ಹಲವು ಮಠಾಧೀಶರು ಆಗಮಿಸಿದ್ದರು. ಜಮೀನು ವಿಚಾರವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ರಾಮನಗರ ಎಸ್ಪಿ ಎಸ್. ಗಿರೀಶ್ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ರಾಮನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಡೆದಿದೆ. ರಾಮನಗರ 1ನೇ ವಾರ್ಡ್‌ನ ಚಾಮುಂಡಿಪುರ ಹರೀಶ್ (26), ಕಸಬಾ ಹೋಬಳಿ ಗುಡ್ಡದಹಳ್ಳಿ ಗ್ರಾಮದ ಕಾವ್ಯ (16) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳಾಗಿದ್ದಾರೆ.

Recommended Video

      ಕೊಹ್ಲಿ-ದ್ರಾವಿಡ್ ಇಬ್ಬರ ಮಧ್ಯೆ ಫುಟ್​ವಾಲಿ ಫೈಟ್ ಸಖತ್ ವೈರಲ್ | Oneindia Kannada

      ಪ್ರೇಮಿಗಳ ಮದುವೆಗೆ ಹುಡುಗಿ ಮನೆಯಲ್ಲಿ ಒಪ್ಪದ ಕಾರಣಕ್ಕೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾವ್ಯ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಹರೀಶ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ.

      ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ರಾಮನಗರ ಜಿಲ್ಲಾಸ್ಪತ್ರೆಗೆ ಪ್ರೇಮಿಗಳ ಮೃತ ದೇಹ ರವಾನಿಸಲಾಗಿದೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+