ರಾಮನಗರ ಉಪ ಚುನಾವಣೆ : ಕೊನೆ ಕ್ಷಣದಲ್ಲಿ ಕಾಂಗ್ರೆಸ್ ತಂತ್ರ ಬದಲು!

Recommended Video

      Ramanagara By-Elections 2018 : ರಾಮನಗರ ಉಪಚುನಾವಣೆ ಹಿನ್ನೆಲೆ ಕೊನೆ ಕ್ಷಣದಲ್ಲಿ ಕೈ ತಂತ್ರ ಬದಲು

      ರಾಮನಗರ, ಅಕ್ಟೋಬರ್ 21 : ರಾಮನಗರ ಕ್ಷೇತ್ರದ ಉಪ ಚುನಾವಣೆಯ ತಂತ್ರವನ್ನು ಕಾಂಗ್ರೆಸ್ ಕೊನೆ ಕ್ಷಣದಲ್ಲಿ ಬದಲಾವಣೆ ಮಾಡಿದೆ. ಇದರಿಂದಾಗಿ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಅವರಿಗೆ ಹಿನ್ನಡೆಯಾಗುವ ನಿರೀಕ್ಷೆ ಇದೆ.

      ಕೆಪಿಸಿಸಿ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರನ್ನು ಬಳ್ಳಾರಿ ಲೋಕಸಭಾ ಉಪ ಚುನಾವಣೆಯ ಪ್ರಚಾರದ ಉಸ್ತುವಾರಿಯಾಗಿ ನೇಮಕ ಮಾಡಿದೆ. ಇದರಿಂದಾಗಿ ಅವರು ರಾಮನಗರ ಬಿಟ್ಟು ಬಳ್ಳಾರಿಗೆ ತೆರಳಬೇಕಾಗಿದೆ.

      ರಾಮನಗರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಸಿ.ಎಂ.ಲಿಂಗಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಯಾವುದೇ ಕಾರಣಕ್ಕೂ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು. ಇದರಿಂದಾಗಿ ಪಕ್ಷದ ನಾಯಕರು ಸಹ ಆತಂಕಗೊಂಡಿದ್ದರು.

      ನವೆಂಬರ್ 3ರಂದು ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್‌-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ, ಬಿಜೆಪಿಯಿಂದ ಎಲ್.ಚಂದ್ರಶೇಖರ್ ಕಣದಲ್ಲಿದ್ದಾರೆ.

      ಕಾಂಗ್ರೆಸ್ ತಂತ್ರ ಬದಲು

      ಕಾಂಗ್ರೆಸ್ ತಂತ್ರ ಬದಲು

      ಸಿ.ಎಂ.ಲಿಂಗಪ್ಪ ಕಾಂಗ್ರೆಸ್‌-ಜೆಡಿಎಸ್ ಮೈತ್ರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಯಾವುದೇ ಕಾರಣಕ್ಕೂ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು. ಆದ್ದರಿಂದ, ಕಾಂಗ್ರೆಸ್ ನಾಯಕರು ಅವರನ್ನು ಬಳ್ಳಾರಿ ಲೋಕಸಭೆ ಉಪ ಚುನಾವಣೆ ಪ್ರಚಾರದ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ.

      ಮಗನ ಪರ ಪ್ರಚಾರ?

      ಮಗನ ಪರ ಪ್ರಚಾರ?

      ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಪುತ್ರ ಎಲ್. ಚಂದ್ರಶೇಖರ್ ಅವರು ರಾಮನಗರ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ. ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ವಿರೋಧಿಸಿದ್ದ ಅವರು ಮಗನ ಪರವಾಗಿ ಆಂತರಿಕವಾಗಿ ಪ್ರಚಾರ ನಡೆಸಬಹುದು ಎಂಬ ಅನುಮಾನವಿತ್ತು. ಆದ್ದರಿಂದ, ಅವರಿಗೆ ಬಳ್ಳಾರಿ ಉಸ್ತುವಾರಿ ನೀಡಲಾಗಿದೆ.

      ಬಿಜೆಪಿಗೆ ಹಿನ್ನಡೆ

      ಬಿಜೆಪಿಗೆ ಹಿನ್ನಡೆ

      ಸಿ.ಎಂ.ಲಿಂಗಪ್ಪ ಅವರನ್ನು ಬಳ್ಳಾರಿ ಉಸ್ತುವಾರಿಯಾಗಿ ನೇಮಕ ಮಾಡಿರುವುದಿರಂದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಅವರಿಗೆ ಹಿನ್ನಡೆಯಾಗುವ ನಿರೀಕ್ಷೆ ಇದೆ. ಸಿ.ಎಂ.ಲಿಂಗಪ್ಪ ಅವರು ಕಾಂಗ್ರೆಸ್‌ನಲ್ಲಿದ್ದರೂ ತಂದೆಯ ಅಭಿಮಾನದ ಮತಗಳು ಚಂದ್ರಶೇಖರ್ ಅವರಿಗೆ ಸಿಗುವ ನಿರೀಕ್ಷೆ ಇತ್ತು. ಆದರೆ, ಕಾಂಗ್ರೆಸ್ ಕೊನೆ ಕ್ಷಣದಲ್ಲಿ ತಂತ್ರ ಬದಲಿಸಿದೆ.

      ಜೆಡಿಎಸ್-ಬಿಜೆಪಿ ಹೋರಾಟ

      ಜೆಡಿಎಸ್-ಬಿಜೆಪಿ ಹೋರಾಟ

      ನವೆಂಬರ್ 3ರಂದು ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಜೆಡಿಎಸ್-ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ. ಜೆಡಿಎಸ್‌ನಿಂದ ಅನಿತಾ ಕುಮಾರಸ್ವಾಮಿ ಮತ್ತು ಬಿಜೆಪಿಯಿಂದ ಎಲ್.ಚಂದ್ರಶೇಖರ್ ಅವರು ಅಭ್ಯರ್ಥಿಯಾಗಿದ್ದಾರೆ. ನವೆಂಬರ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+