ರಾಮನಗರ, ಚನ್ನಪಟ್ಟಣದಲ್ಲಿ ಲಾಕ್ ಡೌನ್; ಕುಮಾರಸ್ವಾಮಿ ಪತ್ರ
ರಾಮನಗರ, ಜೂನ್ 24 : ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
Recommended Video
ಬುಧವಾರ ಚನ್ನಪಟ್ಟಣ ಶಾಸಕ ಎಚ್. ಡಿ. ಕುಮಾರಸ್ವಾಮಿ ರಾಮನಗರ ಜಿಲ್ಲಾಧಿಕಾರಿಗಳಿಗೆ ಈ ಕುರಿತು ಪತ್ರ ಬರೆದಿದ್ದಾರೆ. ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕೊರೊನಾ ವೈರಸ್ ಸೋಂಕು ಸಮುದಾಯಕ್ಕೆ ಹಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಬೆಳಗ್ಗೆ 7 ರಿಂದ 11 ಗಂಟೆಯ ತನಕ ಜನರು ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಬೇಕು. 11ರಿಂದ 7 ಗಂಟೆಯ ತನಕ ಸಾರ್ವಜನಿಕ ಸಂಚಾರ ನಿರ್ಬಂಧಿಸಬೇಕು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಬೇಕು ಎಂದು ಪತ್ರದಲ್ಲಿ ವಿವರಣೆ ನೀಡಿದ್ದಾರೆ.
ಸಾರ್ವಜನಿಕ ಸಂಪರ್ಕ ವ್ಯವಸ್ಥೆಯನ್ನು ತಡೆಗಟ್ಟಲು ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲು ಕ್ರಮವನ್ನು ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಬುಧವಾರ 22 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 114. ಸಕ್ರಿಯ ಪ್ರಕರಣಗಳು 104. ಎಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣ ಶಾಸಕರಾಗಿದ್ದು, ಅನಿತಾ ಕುಮಾರಸ್ವಾಮಿ ರಾಮನಗರದ ಶಾಸಕರು.
ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪುನಃ ಲಾಕ್ ಡೌನ್ ಜಾರಿಗೊಳಿಸಬೇಕು ಎಂದು ಎಚ್. ಡಿ. ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದರು.












Click it and Unblock the Notifications