ಕನಕಪುರ ನಗರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ರಾಮನಗರ, ಅಕ್ಟೋಬರ್ 29: ಕನಕಪುರ ಪಟ್ಟಣದ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷರಾಗಿ ಮೊಹಮದ್ ಮುಕ್ಬಲ್ ಹಾಗೂ ಉಪಾಧ್ಯಕ್ಷರಾಗಿ ಗುಂಡಣ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಮೊಹಮದ್ ಮುಕ್ಬಲ್ ವಾರ್ಡ್ ನಂ.19 ಮುಸ್ಲಿಂ ಬ್ಲಾಕ್ ಪ್ರತಿನಿಧಿಸಿದ್ದರು. ಇನ್ನು ಉಪಾಧ್ಯಕ್ಷರಾಗಿ ಆಯ್ಕೆಯಾದ ಗುಂಡಣ್ಣ ವಾರ್ಡ್ ನಂ.9 ಅಂಬೇಡ್ಕರ್ ನಗರ ಪ್ರತಿನಿಧಿಸುತ್ತಿದ್ದಾರೆ.

Kanakapura: Congress Candidates Elected For City Municipal Council President Vice President Post

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇವರನ್ನು ಹೊರತುಪಡಿಸಿ ಬೇರೆ ಯಾರೂ ಸ್ಪರ್ಧಿಸದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಯಾಗಿದ್ದ ಜಿಲ್ಲಾ ಉಪ ವಿಭಾಗಾಧಿಕಾರಿ ದಾಕ್ಷಾಯಿಣಿ ಅವರು ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಒಟ್ಟು 31 ಸದಸ್ಯ ಬಲದ ಕನಕಪುರ ನಗರಸಭೆಯಲ್ಲಿ ಕಾಂಗ್ರೆಸ್-26, ಜೆಡಿಎಸ್ -4 ಹಾಗೂ ಬಿಜೆಪಿ -1 ಸದಸ್ಯರ ಬಲ ಹೊಂದಿದೆ. ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ನ.10ರ ಒಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನಿರ್ದೇಶನ ಮಾಡಿದ ಹಿನ್ನೆಲೆಯಲ್ಲಿ ಕನಕಪುರ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+