ರಾಮನಗರದಲ್ಲಿ ಡ್ಯಾನ್ಸರ್ ಹುಡುಗಿ ಮೇಲೆ ಹಣ ತೂರಾಡಿ ಕುಣಿದು ಕುಪ್ಪಳಿಸಿದ ಕಾಂಗ್ರೆಸ್ ನಾಯಕರು
ರಾಮನಗರ, ನವೆಂಬರ್, 26: ಕಾಂಗ್ರೆಸ್ ಮುಖಂಡ ದೌಲತ್ ಷರೀಫ್ ಹುಟ್ಟಹಬ್ಬ ಹಿನ್ನೆಲೆ, ನಗರದ ರೈಲ್ವೆ ನಿಲ್ದಾಣ ಸಮೀಪದ ಹಾಲ್‌ವೊಂದರಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಕಾಂಗ್ರೆಸ್ ನಗರಸಭಾ ಸದಸ್ಯರಿಂದಲೇ ಪಾರ್ಟಿ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಹುಡುಗಿಯರನ್ನು ಕರೆಸಿ ಅವರ ಮೇಲೆ ಹಣ ತೂರಾಡುತ್ತಿರುವ ಕಾಂಗ್ರೆಸ್ ಸದಸ್ಯರ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.
ರಾಮನಗರದ 19ನೇ ವಾರ್ಡ್‌ನ ನಗರಸಭಾ ಸದಸ್ಯ ದೌಲತ್ ಷರೀಫ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಹಾಲ್‌ವೊಂದರಲ್ಲಿ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು. ಕಾಂಗ್ರೆಸ್ ನಾಯಕರು ಕರೆಸಿದಂತಹ ಹುಡುಗಿಯರು ನೃತ್ಯ ಮಾಡಿದ್ದು, ಇವರ ಜೊತೆಗೆ ಕಾಂಗ್ರೆಸ್ ಕೆಲ ನಾಯಕರು ಕೂಡ ಹಣವನ್ನು ತೂರಾಡಿದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಸಾರ್ವಜನಿಕ ವಲಯದಲ್ಲೂ ಭಾರಿ ಆಕ್ರೋಶಗಳು ಭುಗಿಲೆದ್ದಿವೆ. ಅದರಲ್ಲಿಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತವರೂರಿನಲ್ಲಿಯೇ ನಂಗನಾಚ್ ನಡೆದಿದ್ದು, ಡ್ಯಾನ್ಸರ್ ಹುಡುಗಿಯರ ಜೊತೆ ಕಾಂಗ್ರೆಸ್ ನಾಯಕರು ಮದ್ಯಪಾನ ಮಾಡಿ ಕುಣಿದು ಕುಪ್ಪಳಿಸಿದ್ದಾರೆ. ಈ ದೊಂಬರಾಟದ ವಿರುದ್ಧ ಜನರು ಕಿಡಿಕಾರಿದ್ದು, ಇವರು ಜನರ ಸಮಸ್ಯೆಗೆ ಸ್ಪಂದಿಸುವ ಬದಲು ಮೋಜುಮಸ್ತಿ ಮಾಡಲು ಹೊರಟಿದ್ದಾರೆ ಎಂದು ಖಂಡಿಸಿದ್ದಾರೆ.
ಪಾರ್ಟಿಯಲ್ಲಿ ನಗರಸಭಾ ಮಾಜಿ ಅಧ್ಯಕ್ಷ, ಹಿರಿಯ ಮುಖಂಡ ಕೆ.ಶೇಷಾದ್ರಿ, ಮಾಜಿ ಉಪಾಧ್ಯಕ್ಷ ಮುತ್ತುರಾಜ್, ದೌಲತ್ ಷರೀಫ್, ಆಜ್ಮತ್ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು.

ಲಂಚದ ಹಣದಲ್ಲೇ ಬಿಜೆಪಿಯವರು ಜನಸ್ಪಂದನಾ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸುವುದನ್ನು ಬಿಟ್ಟು ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಇತ್ತೀಚೆಗಷ್ಟೇ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದರು. ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಅವರು, ಬಿಜೆಪಿಯವರು ಲಂಚದ ಹಣದಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದಾರೆ. ರಾಜ್ಯದಲ್ಲಿ ಮಳೆ ಬಂದು ಸಾಕಷ್ಟು ಸಮಸ್ಯೆ ಆಗಿದೆ. ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಬೆಂಗಳೂರಿನಲ್ಲೂ ಸಹ ಮಳೆಯಿಂದಾಗಿ ಸಮಸ್ಯೆಯಾಗಿದೆ. ಇಂತಹ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸುವುದನ್ನು ಬಿಟ್ಟು ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು. ಆದರೆ ಇಂದು ರಾಮನಗರದಲ್ಲಿ ದೌಲತ್ ಷರೀಫ್ ಹುಟ್ಟಹಬ್ಬ ಹಿನ್ನೆಲೆ, ಕಾಂಗ್ರೆಸ್ ನಾಯಕರು ಡ್ಯನ್ಸರ್ ಹುಡುಗಿ ಜೊತೆ ಹಣವನ್ನು ತೂರಾಡುತ್ತಾ ಕುಣಿದು ಕುಪ್ಪಳಿಸಿದ್ದಾರೆ.
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications