ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ನಾನು ಬಿಜೆಪಿ ಸೇರಿದ ದಿನದಿಂದ ಕಾಂಗ್ರೆಸ್ಸಿನಿಂದ ಕಿರುಕುಳ ಹೆಚ್ಚಾಗಿದೆ'

Congress leaders giving a harassment, when I joined the BJP, so we will protest against congress government in the upcoming days, said Channapatna MLA CP Yogeshwar in Ramanagara on Tuesday.

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ. ಡಿಸೆಂಬರ್ 12: ಚನ್ನಪಟ್ಟಣದ ಅಭಿವೃದ್ದಿಗೆ ಡಿಕೆ ಸಹೋದರರು ಅಡ್ಡಿಪಡಿಸುತ್ತಿದ್ದಾರೆ ಎಂದು ಶಾಸಕ ಸಿಪಿ ಯೋಗೀಶ್ವರ್ ಆರೋಪಿಸಿದ್ದಾರೆ.

ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಗರಿಗೆದರಿದ ಚನ್ನಪಟ್ಟಣ ಪಾಲಿಟಿಕ್ಸ್ ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಗರಿಗೆದರಿದ ಚನ್ನಪಟ್ಟಣ ಪಾಲಿಟಿಕ್ಸ್

ರಾಮನಗರದ ಜಾನಪದಲೋಕದ ಬಳಿಯ ಕಾಮತ್ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ನಾನು ಬಿಜೆಪಿ ಸೇರಿದ ದಿನಗಳಿಂದ ತಾಲ್ಲೂಕಿನಲ್ಲಿ ಕಾಂಗ್ರೆಸ್ ಮುಖಂಡರಿಂದ ಕಿರುಕುಳ ಹೆಚ್ಚಾಗಿದೆ. ಈ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ" ಎಂದು ಎಚ್ಚರಿಕೆ ನೀಡಿದರು.

Congress leaders giving harassment says MLA Yogeshwar

ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಬಿದ್ದೊಗಿದೆ. ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷರೇ ರಾಜರೊಷವಾಗಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಮುಖಂಡರ ಅಕ್ರಮಗಳಿಗೆ ಸಂಸದ ಡಿ.ಕೆ.ಸುರೇಶ್ ಅವರ ಕುಮ್ಮಕ್ಕು ಇದೆ ಎಂದು ಆರೋಪಿಸಿದರು.

ರಾಮನಗರ ಜಿಲ್ಲೆಗೆ ಬಂದಿರುವ ಕೇಂದ್ರದ ವಿವಿಧ ಅನುದಾನಗಳನ್ನ ಕನಕಪುರ ತಾಲ್ಲೂಕಿಗೆ ಹೆಚ್ಚು ಬಳಸಿಕೊಂಡಿದ್ದಾರೆ. ಸಂಸದರ ಕ್ಷೇತ್ರದ ಎಲ್ಲಾ ತಾಲ್ಲೂಕುಗಳಿಗೂ ಅನುದಾನ ಕೊಟ್ಟಿದ್ದಾರೆ. ಅದರೆ, ಚನ್ನಪಟ್ಟಣ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡದೆ ಮಲತಾಯಿ ದೋರಣೆ ಅನುಸರಿಸುತ್ತಿದ್ದಾರೆ ಎಂದು ಹೇಳಿದರು.

ರಾಮನಗರ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಅವರ ತಮ್ಮ ಸಂಸದ ಡಿ.ಕೆ.ಸುರೇಶ್ ಅವರು ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿರುವ ರಸ್ತೆ ಕಾಮಗಾರಿಗಳ ಗುತ್ತಿಗೆದಾರರಿಗೆ ಬೆದರಿಕೆ ಹಾಕಿ ತಡೆಯೊಡ್ಡಿದ್ದಾರೆ ಎಂದು ಯೋಗೀಶ್ವರ್ ಆಕ್ರೋಶ ವ್ಯಕ್ತಪಡಿಸಿದರು.

English summary
Congress leaders giving a harassment, when I joined the BJP, so we will protest against congress government in the upcoming days, said Channapatna MLA CP Yogeshwar in Ramanagara on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X