ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ: ಕಾಂಗ್ರೆಸ್ ಐಕ್ಯತಾ ಪಾದಯಾತ್ರೆಗೆ ರೇಷ್ಮೆನಗರಿ ಸಜ್ಜು, ಭಾರೀ ಭದ್ರತೆ
ರಾಮನಗರ, ಸೆಪ್ಟೆಂಬರ್, 07: ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ಪೂರ್ಣ ಹಿನ್ನೆಲೆ, ಯಾತ್ರೆಯ ಸವಿನೆನಪಿಗಾಗಿ ರಾಮನಗರದಲ್ಲಿ ಒಂದು ಘಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ರಾಮನಗರ ನಗರದಲ್ಲಿ ಪಾದಯಾತ್ರೆ ನಡೆಸಲಿದ್ದಾರೆ. ಪಾದಯಾತ್ರೆ ಯಶಸ್ವಿ ಮಾಡಲು ಜಿಲ್ಲಾ ಕಾಂಗ್ರೆಸ್ ನಾಯಕರು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ.
ಈಗಾಗಲೇ ನಗರದಾದ್ಯಂತ ಕಾಂಗ್ರೆಸ್ ರಾಷ್ಟ್ರೀಯ ಮಟ್ಟದ ನಾಯಕರ ಬೃಹತ್ ಪ್ಲೆಕ್ಸ್, ಬಾವುಟಗಳು, ಬ್ಯಾನರ್‌ಗಳು ನಗರದ ತುಂಬೆಲ್ಲ ರಾರಾಜಿಸುತ್ತಿವೆ. ಅಲ್ಲದೆ ವಿದ್ಯುತ್ ದೀಪಾಲಂಕಾರಗಳಿಂದ ನಗರ ಕಂಗೊಳಿಸುತ್ತಿದೆ. ಇಂದು ಸಂಜೆ 5 ಗಂಟೆಯಿಂದ 7ರವರೆಗೂ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೂ ಮುನ್ನ ಕೈ ನಾಯಕರು ಸುಮಾರು 3 ರಿಂದ 4 ಕಿಲೋ ಮೀಟರ್ ಪಾದಯಾತ್ರೆ ನಡೆಸಲಿದ್ದಾರೆ.

ರಾಮನಗರ ಡಿಸಿ ಕಛೇರಿಯಿಂದ ಐಜೂರು ಸರ್ಕಲ್‌ವರೆಗೂ ಪಾದಯಾತ್ರೆ ನಡೆಸಲಿದ್ದಾರೆ. ಡಿಸಿ ಕಛೇರಿಯಿಂದ ಡಿಪಿಒ ಸರ್ಕಲ್, ವಾಟರ್ ಟ್ಯಾಂಕ್ ಸರ್ಕಲ್, ಎಂ.ರಸ್ತೆ, ಅಂಬೇಡ್ಕರ್ ಸರ್ಕಲ್, ನಂತರ ಐಜೂರು ವೃತ್ತದಲ್ಲಿ ಸಮಾರೋಪ ಸಮಾರಂಭದಲ್ಲಿ ಐಕ್ಯತಾ ಕಾರ್ಯಕ್ರಮಕ್ಕೆ ತೆರೆ ಬೀಳಲಿದೆ. ಇನ್ನು ಪಾದಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಸಚಿವರು, ಶಾಸಕರು ಸೇರಿದಂತೆ ಸುಮಾರು 20 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಲಿದ್ದಾರೆ ಎಂದು ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಸ್ಪಷ್ಟಪಡಿಸಿದ್ದಾರೆ.
ಒಂದು ರಾಷ್ಟ್ರ ಒಂದು ಚುನಾವಣೆಗೆ ವಿರೋಧ; ಪ್ರಧಾನಿ ಮೋದಿಗೆ ಸಂತೋಷ್ ಲಾಡ್ ಕೊಟ್ಟ ಸಲಹೆ ಏನು?
ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ ನಗರದಲ್ಲಿ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಎಸ್ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ, 5 ಡಿವೈಎಸ್ಪಿ, 15 ಇನ್ಸ್‌ಪೆಕ್ಟರ್, 40 ಜನ ಸಬ್ ಇನ್ಸ್‌ಪೆಕ್ಟರ್ ಸೇರಿ 800 ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನು ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಿದ್ದಾರೆ. ನಾಳೆ ಮೆಡಿಕಲ್ ಕಾಲೇಜು ಸ್ಥಳಾಂತರದ ವಿರುದ್ಧ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ. ಪಾದಯಾತ್ರೆಗೆ ಯಾವುದೇ ಅಡೆಚಣೆ ಆಗದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಈ ಬಗ್ಗೆ ಮಾತನಾಡಿದ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಅವರು, ರಾಮನಗರದಲ್ಲಿ ಸಿಎಂ, ಡಿಸಿಎಂ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಹಿನ್ನೆಲೆ ಎಲ್ಲಾ ರೀತಿಯ ಸಿದ್ಧತೆ ಹಾಗೂ ಭದ್ರತೆ ಮಾಡಿಕೊಳ್ಳಲಾಗಿದೆ. ಐಜೂರು ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಹಿನ್ನೆಲೆ ಸಂಚಾರಿ ಮಾರ್ಗ ಬದಲಾವಣೆ ಮಾಡಲಾಗಿದೆ. ರಾಮನಗರದ ಸಂಗಬಸವನದೊಡ್ಡಿ ಹಾಗೂ ಚನ್ನಪಟ್ಟಣದ ಬಳಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.












Click it and Unblock the Notifications