ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download
LIVE

Mekedatu Padayatra Live: ವಿಪಕ್ಷ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಠಿ

|
Google Oneindia Kannada News

ರಾಮನಗರ, ಜನವರಿ 09; ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ 19 ರ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ. ಮೇಕೆದಾಟುವಿನಿಂದ ಬೆಂಗಳೂರು ತನಕ ಪಾದಯಾತ್ರೆ ನಡೆಯಲಿದೆ.

ಕರ್ನಾಟಕ ಸರ್ಕಾರ ಕೋವಿಡ್ ಹರಡುವಿಕೆ ತಡೆಯಲು ವಾರಾಂತ್ಯದ ಕರ್ಫ್ಯೂ ಘೋಷಣೆ ಮಾಡಿದೆ. ರಾಮನಗರ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದೆ. ಆದರೂ ಸಹ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

ವಿಶೇಷ ವರದಿ: 'ಕೈ’ನ ಮೇಕೆದಾಟು ಪಾದಯಾತ್ರೆಗೆ ಅಡ್ಡಗಾಲಾಗಿದ್ದು ಯಾರು?ವಿಶೇಷ ವರದಿ: 'ಕೈ’ನ ಮೇಕೆದಾಟು ಪಾದಯಾತ್ರೆಗೆ ಅಡ್ಡಗಾಲಾಗಿದ್ದು ಯಾರು?

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕನಕಪುರ ನಿವಾಸದಲ್ಲಿ ಶನಿವಾರ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಮೇಕೆದಾಟು ಪಾದಯಾತ್ರೆ ಆರಂಭಿಸುವುದಾಗಿ ಡಿ. ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮೇಕೆದಾಟು; ಕಾಂಗ್ರೆಸ್ ನಾಯಕರ ಪಾದಯಾತ್ರೆ ಮಾರ್ಗ ಮೇಕೆದಾಟು; ಕಾಂಗ್ರೆಸ್ ನಾಯಕರ ಪಾದಯಾತ್ರೆ ಮಾರ್ಗ

ಕಾಂಗ್ರೆಸ್ ನಾಯಕರ ಪಾದಯಾತ್ರೆ ಹಿನ್ನಲೆಯಲ್ಲಿ ರಾಮನಗರ ಜಿಲ್ಲಾ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಸುಮಾರು 2 ಸಾವಿರ ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಕೋವಿಡ್ ನಿಯಮಗಳ ಅನ್ವಯ ಪಾದಯಾತ್ರೆ ಮಾಡಲು ಅವಕಾಶವಿಲ್ಲ. ಆದರೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಆರಂಭಿಸಲಿದ್ದಾರೆ. ಸರ್ಕಾರ ಏನು ಮಾಡಲಿದೆ? ಎಂದು ಕಾದು ನೋಡಬೇಕಿದೆ.

ಮೇಕೆದಾಟು ಯೋಜನೆ; ಸರ್ಕಾರದ ಬದ್ಧತೆ ಪ್ರಶ್ನಿಸಿದ ಸಿದ್ದರಾಮಯ್ಯ! ಮೇಕೆದಾಟು ಯೋಜನೆ; ಸರ್ಕಾರದ ಬದ್ಧತೆ ಪ್ರಶ್ನಿಸಿದ ಸಿದ್ದರಾಮಯ್ಯ!

Mekedatu

Newest FirstOldest First
1:18 PM, 13 Jan

ನಾವು ಮೇಕೆದಾಟು ಹೋರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ ಹೊರತು, ಸಂಪೂರ್ಣವಾಗಿ ನಿಲ್ಲಿಸಿಲ್ಲ; ಡಿ.ಕೆ. ಶಿವಕುಮಾರ್
1:17 PM, 13 Jan

ನ್ಯಾಯಾಲಯಕ್ಕೆ ನಾವು ಗೌರವ ನೀಡುತ್ತೇವೆ; ಡಿ.ಕೆ. ಶಿವಕುಮಾರ್
1:15 PM, 13 Jan

ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಹರಿಹಾಯ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್.
1:12 PM, 13 Jan

ನಾನು ಮೌನವಾಗಿರಬೇಕಾದ ಪರಿಸ್ಥಿತಿ ಬಂದಿದೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
1:08 PM, 13 Jan

ಕೊರೊನಾ ಸೋಂಕು ಇಳಿಕೆಯಾದ ಮೇಲೆ ರಾಮನಗರದಿಂದಲೇ ಮತ್ತೆ ಪಾದಯಾತ್ರೆ ಆರಂಭಿಸುತ್ತೇವೆ, ಬೆಂಗಳೂರಿನಲ್ಲಿ ಸಮಾರೋಪ ಮಾಡುತ್ತೇವೆ: ವಿಪಕ್ಷ ನಾಯಕ ಸಿದ್ದರಾಮಯ್ಯ
1:03 PM, 13 Jan

ಕೋವಿಡ್ ಕಾಲದಲ್ಲಿ ಬಿಜೆಪಿಯ ಕೇಂದ್ರ ಸಚಿವರು ಜನಾಶೀರ್ವಾದ ಯಾತ್ರೆ ಹಮ್ಮಿಕೊಂಡಿದ್ದರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
1:01 PM, 13 Jan

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಲು ಬಿಜೆಪಿ ಸರ್ಕಾರ ಕಾರಣ; ವಿಪಕ್ಷ ನಾಯಕ ಸಿದ್ದರಾಮಯ್ಯ
Advertisement
1:00 PM, 13 Jan

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾದರೂ ಸಿಎಂ ಬಸವರಾಜ ಬೊಮ್ಮಾಯಿ ಸಾರ್ವಜನಿಕ ಸಭೆ ನಡೆಸಿದರು ಎಂದು ಸಿದ್ದರಾಮಯ್ಯ ಆರೋಪಿಸಿದರು.
12:59 PM, 13 Jan

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇಕೆದಾಟು ಪಾದಯಾತ್ರೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಹೇಳಿದರು.
12:52 PM, 13 Jan

ಪಾದಯಾತ್ರೆ ಸ್ಥಗಿತಗೊಳಿಸುವ ವಿಚಾರವಾಗಿ ರಾಮನಗರ ಕಾಂಗ್ರೆಸ್ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಇತರ ನಾಯಕರು ಪಾಲ್ಗೊಂಡಿದ್ದರು.
12:47 PM, 13 Jan

ಪಾದಯಾತ್ರೆ ಬಿಟ್ಟು ಕೊರೊನಾ ಎದುರಿಸೋಣ. ಮುಂಬರುವ ದಿನಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಜನ ಸೇರಿಸಿ ಪಾದಯಾತ್ರೆ ಮಾಡುವುದು ಆರೋಗ್ಯ ದೃಷ್ಟಿಯಿಂದ ಸರಿಯಲ್ಲ. ಕೊರೊನಾ 3ನೇ ಅಲೆ ಮಕ್ಕಳ ಮೇಲೆ ತೀವ್ರವಾಗಿ ಅಪ್ಪಳಿಸಿದೆ. ಹಾಗಾಗಿ ಪಾದಯಾತ್ರೆ ಕೈಬಿಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಪತ್ರದ ಮೂಲಕ ಮನವಿ ಮಾಡಿದ್ದರು.
12:32 PM, 13 Jan

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಸ್ಥಗಿತಗೊಳಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ರಾಮನಗರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಇತರ ನಾಯಕರು ಪಾಲ್ಗೊಂಡಿದ್ದರು.
Advertisement
12:30 PM, 13 Jan

ರಾಜ್ಯ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ನಿಲ್ಲಿಸುವಂತೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮೂಲಕ ಹೈಕಮಾಂಡ್ ಸಂದೇಶ ರವಾನಿಸಿದೆ ಎನ್ನಲಾಗಿದೆ.
12:29 PM, 13 Jan

ಮೇಕೆದಾಟು ಪಾದಯಾತ್ರೆ ನಿಲ್ಲಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪತ್ರ ಬರೆದಿದ್ದಾರೆ.
11:29 AM, 9 Jan

ಕೋವಿಡ್ ರೂಪಾಂತರಿ ಓಮಿಕ್ರಾನ್ ಬಹಳ ವೇಗವಾಗಿ ಹಬ್ಬುತ್ತಿದೆ. ಅಮೆರಿಕದಲ್ಲಿ ಒಂದು ದಿನಕ್ಕೆ 10 ಲಕ್ಷ ಕೇಸ್ ಪತ್ತೆಯಾಗುತ್ತಿದೆ. ಕಾಂಗ್ರೆಸ್ ನಾಯಕರಿಗೆ ಇದೆಲ್ಲ ಗೊತ್ತಿದೆ. ಆದರೆ ಜಾಣಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
11:21 AM, 9 Jan

ವೇದಿಕೆ ಕಾರ್ಯಕ್ರಮ ಮುಕ್ತಾಯವಾಗಿದೆ. ಕಾಂಗ್ರೆಸ್ ನಾಯಕರ ಪಾದಯಾತ್ರೆ ಆರಂಭವಾಗಿದೆ.
11:14 AM, 9 Jan

ಕಾಂಗ್ರೆಸ್‌ನ ಕಪಟ ಬೀದಿ ನಾಟಕವನ್ನು ಜನರು ನೋಡುತ್ತಿದ್ದಾರೆ. ಮೇಕೆದಾಟು ಯೋಜನೆಯನ್ನು ಸರ್ಕಾರ ಜಾರಿ ಮಾಡುತ್ತದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
11:08 AM, 9 Jan

ನಾವು ಬಡ ಜನರಿಗಾಗಿ ಹೋರಾಟ ಮಾಡುತ್ತಿದ್ದೇವೆ. ಊಟ, ಉಪಹಾರ ಸಿಗುತ್ತದೋ ಬಿಡುತ್ತದೋ ಗೊತ್ತಿಲ್ಲ ಎಲ್ಲರೂ ಪಾದಯಾತ್ರೆ ಮಾಡಿ ಎಂದು ಡಿ. ಕೆ. ಶಿವಕುಮಾರ್ ಕರೆ ನೀಡಿದರು.
10:59 AM, 9 Jan

ಇದು ರಾಜಕೀಯ ಪ್ರೇರಿತ ಪಾದಯಾತ್ರೆ, ಜನರನ್ನು ಮರಳು ಮಾಡಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.
10:53 AM, 9 Jan

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಿದ್ದಾರೆ.
10:47 AM, 9 Jan

ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಿ. ಮಾಸ್ಕ್ ಹಾಕಿಕೊಳ್ಳದಿರುವವರನ್ನು ವಾಪಸ್ ಕಳಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
10:37 AM, 9 Jan

ಮೇಕೆದಾಟು ಯೋಜನೆ ಜಾರಿಗೊಳಿಸದ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಡಬಲ್ ಎಂಜಿನ್ ಸರ್ಕಾರ ಏನು ಮಾಡುತ್ತಿದೆ? ಎಂದು ಪ್ರಶ್ನೆ ಮಾಡಿದರು.
10:09 AM, 9 Jan

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವೇದಿಕೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
9:54 AM, 9 Jan

ಮೇಕೆದಾಟು ಯೋಜನೆಗೆ ಕರ್ನಾಟಕದ ಎಲ್ಲಾ ಜಿಲ್ಲೆಗಳ ಜನರ ಬೆಂಬಲ ಸಿಗಲಿದೆ ಎಂಬ ನಿರೀಕ್ಷೆ ನಮ್ಮದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
9:52 AM, 9 Jan

ಮೇಕೆದಾಟು ಯೋಜನೆ ಬೆಂಗಳೂರಿಗೆ ಕುಡಿಯುವ ನೀರು ಕೊಡುವ ಯೋಜನೆಯಾಗಿದೆ.
9:49 AM, 9 Jan

ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಿದ್ದಾರೆ.
9:41 AM, 9 Jan

ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಇಂಧನ ಸಚಿವ ಸುನೀಲ್ ಕುಮಾರ್ ಪ್ರಶ್ನೆ ಮಾಡಿ ಟ್ವೀಟ್ ಮಾಡಿದ್ದಾರೆ.
9:40 AM, 9 Jan

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಗಾರಿ ಬಾರಿಸುವ ಮೂಲಕ ಪಾದಯಾತ್ರೆ ಉದ್ಘಾಟಿಸಿದರು.
9:39 AM, 9 Jan

ಗಿಡಗಳಿಗೆ ನೀರು ಹಾಕುವ ಮೂಲಕ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಲಾಗಿದೆ.
9:28 AM, 9 Jan

ವಿವಿಧ ಜಾನಪದ ಕಲಾತಂಡಗಳು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮೇಕೆದಾಟು ಬಳಿಯ ಸಂಗಮಕ್ಕೆ ಆಗಮಿಸಿವೆ.
READ MORE

English summary

ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ 19 ರ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ. ಮೇಕೆದಾಟುವಿನಿಂದ ಬೆಂಗಳೂರು ತನಕ ಪಾದಯಾತ್ರೆ ನಡೆಯಲಿದೆ. ಕರ್ನಾಟಕ ಸರ್ಕಾರ ಕೋವಿಡ್ ಹರಡುವಿಕೆ ತಡೆಯಲು ವಾರಾಂತ್ಯದ ಕರ್ಫ್ಯೂ ಘೋಷಣೆ ಮಾಡಿದೆ. ರಾಮನಗರ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದೆ. ಆದರೂ ಸಹ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕನಕಪುರ ನಿವಾಸದಲ್ಲಿ ಶನಿವಾರ ರಾತ್ರಿ ನಡೆದ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X