ಕಮಲಕ್ಕೆ ಕೈ ತೆನೆ ಒಡಕಿನ ಲಾಭ ಪಡೆದ ಕಮಲ, ಲಿಂಗಪ್ಪರ ಮಗ ಬಿಜೆಪಿಗೆ
Recommended Video

ರಾಮನಗರ, ಅಕ್ಟೋಬರ್ 10: ವಿಧಾನಸಭೆ, ಬಿಬಿಎಂಪಿ ಚುನಾವಣೆಯಲ್ಲಿ ಸಿಗದ ಪ್ರತಿಫಲ ಇದೀಗ ಕಮಲ ಪಕ್ಷದ ನಾಯಕರಿಗೆ ದಕ್ಕಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಒಡಕಿನ ಲಾಭವನ್ನು ಬಿಜೆಪಿ ಪಡೆದುಕೊಂಡಿದೆ. ಶಾಸಕ ಸಿ.ಎಂ ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ಅವರನ್ನು ಬಿಜೆಪಿ ಸೆಳೆದುಕೊಂಡಿದೆ.
ರಾಮನಗರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ತಿಕ್ಕಾಟದಿಂದಾಗಿ ಸರಿಯಾಗಿ ಅಭ್ಯರ್ಥಿ ಘೋಷಿಸಲು ಆಗದೆ ಪರದಾಟ ಶುರುವಾಗಿದೆ. ಈ ನಡುವೆ ವಿಧಾನಪರಿಷತ್ ಸದಸ್ಯ ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ಅವರು ಇಂದು ಮಾಜಿ ಶಾಸಕ ಸಿಪಿ ಯೋಗೇಶ್ವರ್, ಬಿಜೆಪಿ ಜಿಲ್ಲಾಧ್ಯಕ್ಷ ಬಿ ರುದ್ರೇಶ್ ಅವರ ಜತೆ ಮಾತುಕತೆ ನಡೆಸಿ, ಕೊನೆಗೂ ಕಮಲ ಪಕ್ಷಕ್ಕೆ ಕಾಲಿಟ್ಟಿದ್ದಾರೆ.
2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ರಾಮನಗರದಿಂದ ಕಣಕ್ಕಿಳಿದು ಜಯಗಳಿಸಿದ್ದರು. ರಾಮನಗರ, ಚನ್ನಪಟ್ಟಣ ಎರಡೂ ಕ್ಷೇತ್ರದಲ್ಲಿ ಗೆದ್ದಿದ್ದ ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಆದ್ದರಿಂದ, ಉಪ ಚುನಾವಣೆ ಎದುರಾಗಿದೆ.

ರಾಮನಗರ ಉಪಚುನಾವಣೆಯಲ್ಲಿ ಬಿಜೆಪಿಗೆ ನಾವು ಬೆಂಬಲ ನೀಡುವುದಿಲ್ಲ. ಇತ್ತ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರ ಪರವಾಗಿಯೂ ಪ್ರಚಾರ ಮಾಡುವುದಿಲ್ಲ ಎಂದು ಸಿಎಂ ಲಿಂಗಪ್ಪ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಇಲ್ಲಿಯವರೆಗೂ ಬಿಜೆಪಿಯ ಯಾವುದೇ ನಾಯಕರೂ ನಮ್ಮನ್ನು ಸಂಪರ್ಕಿಸಿಲ್ಲ. ಒಂದು ವೇಳೆ ಸಂಪರ್ಕಕ್ಕೆ ಪ್ರಯತ್ನಿಸಿದರೂ ನಿರ್ಧಾರವನ್ನು ಬದಲಿಸುವುದಿಲ್ಲ ಎಂದು ಹೇಳಿದ್ದರು. ಆದರೆ, ಬಿಜೆಪಿ ಅವರ ಮಗ ಸೇರ್ಪಡೆಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿ, ಸ್ವಂತ ನಿರ್ಧಾರ ಕೈಗೊಳ್ಳುವ ಹಕ್ಕು ಅವನಿಗಿದೆ ಎಂದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications