ಡಿ.ಕೆ. ಶಿವಕುಮಾರ್ ಸ್ವಗ್ರಾಮ ದೊಡ್ಡ ಆಲೂರಿನಲ್ಲಿ ಮೋದಿ- ಶಾ ವಿರುದ್ಧ ಪ್ರತಿಭಟನೆ
ರಾಮನಗರ, ಸೆಪ್ಟೆಂಬರ್ 1: ರಾಮನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಚಿವ- ಕಾಂಗ್ರೆಸ್ ಹಿರಿಯ ನಾಯಕ ಡಿ. ಕೆ. ಶಿವಕುಮಾರ್ ಅವರ ಸ್ವಗ್ರಾಮ ರಾಮನಗರ ಜಿಲ್ಲೆಯ ದೊಡ್ಡ ಆಲಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿ. ಕೆ. ಶಿವಕುಮಾರ್ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.
ಕನಕಪುರ- ಸಂಗಮ ಮುಖ್ಯ ರಸ್ತೆಯನ್ನು ತಡೆದು, ಆಕ್ರೋಶ ವ್ಯಕ್ತಪದಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾವಚಿತ್ರಕ್ಕೆ ಬೆಂಕಿ ಇಟ್ಟು, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಆ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತೀಕಾರದ- ದ್ವೇಷದ ರಾಜಕಾರಣವನ್ನು ಮಾಡುತ್ತಿದೆ. ಆದಾಯ ತೆರಿಗೆ ಇಲಾಖೆ (ಐ.ಟಿ.) ಹಾಗೂ ಜಾರಿ ನಿರ್ದೇಶನಾಲಯವನ್ನು (ಇ.ಡಿ.) ಬಳಸಿಕೊಂಡು ಡಿ. ಕೆ. ಶಿವಕುಮಾರ್ ಅವರಿಗೆ ಕಿರುಕುಳು ನೀಡುತ್ತಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.