ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನುಮೋದನೆ ನಂತರ ಮೇಕೆದಾಟು ಅಣೆಕಟ್ಟು ನಿರ್ಮಾಣ; ರಮೇಶ್ ಜಾರಕಿಹೊಳಿ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್ 14: ವ್ಯರ್ಥವಾಗಿ ಹರಿದು ಹೋಗುತ್ತಿದ್ದ ಕಾವೇರಿ ನದಿ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಇಲ್ಲಿ ಅಣೆಕಟ್ಟು ನಿರ್ಮಿಸುವ ಉದ್ದೇಶವನ್ನು ಹೊಂದಲಾಗಿದೆ. ಸಮಗ್ರ ಕುಡಿಯುವ ನೀರಿನ ಯೋಜನೆಗಾಗಿ ಅರ್ಕಾವತಿ ಮತ್ತು ಕಾವೇರಿ ನದಿಯ ಸಂಗಮದ ಸಮೀಪದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಸಮತೋಲನ ಜಲಾಶಯವನ್ನು ನಿರ್ಮಿಸಲಾಗುತ್ತಿದೆ. ಭವಿಷ್ಯದಲ್ಲಿ ಬೆಂಗಳೂರು ನಗರಕ್ಕೆ ಇಲ್ಲಿಂದ ಕುಡಿಯುವ ನೀರನ್ನು ಪೂರೈಸಲಾಗುವುದು ಎಂದರು.

ಯೋಜನೆಗೆ ಸಂಬಂಧಿಸಿದಂತೆ ಅರ್ಕಾವತಿ ಮತ್ತು ಕಾವೇರಿ ಸೇರುವ ಸಂಗಮ ಹಾಗೂ ಜಲಾಶಯ ನಿರ್ಮಿಸಲಾಗುವ ಉದ್ದೇಶಿತ ಒಂಟಿಗುಂಡ್ಲು ಪ್ರದೇಶಕ್ಕೆ ಇಂದು ಭೇಟಿ ನೀಡಿ, ಸ್ಥಳ ಪರಿಶೀಲಿಸಿದ ಬಳಿಕ ಮಾತನಾಡಿದ ಸಚಿವರು, ಅಣೆಕಟ್ಟು ನಿರ್ಮಾಣವಾಗುವುದರಿಂದ ಸುಮಾರು 5051 ಹೆಕ್ಟೇರ್ ಅರಣ್ಯ ಭೂಮಿ ಮುಳುಗಡೆಯಾಗಲಿದೆ. ಹೀಗಾಗಿ, ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮೋದನೆ ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದರು.

ರಾಮನಗರ: ಉಕ್ಕಿ ಹರಿಯುತ್ತಿದೆ ಕಾವೇರಿ ಸಂಗಮ, ಜಿಲ್ಲಾಧಿಕಾರಿ ಎಚ್ಚರಿಕೆರಾಮನಗರ: ಉಕ್ಕಿ ಹರಿಯುತ್ತಿದೆ ಕಾವೇರಿ ಸಂಗಮ, ಜಿಲ್ಲಾಧಿಕಾರಿ ಎಚ್ಚರಿಕೆ

ಪ್ರಸ್ತಾಪಿತ ಯೋಜನೆಗಾಗಿ ಒಟ್ಟಾರೆಯಾಗಿ 5252 ಹೆಕ್ಟೇರ್ ಪ್ರದೇಶದ ಅವಶ್ಯಕತೆ ಇದೆ. ಇದರಲ್ಲಿ 3181 ಹೆಕ್ಟೇರ್ (ಶೇ. 63ರಷ್ಟು) ವನ್ಯಜೀವಿ ಪ್ರದೇಶವಾಗಿದೆ. 1870 ಹೆ. (ಶೇ. 37) ಮೀಸಲು ಅರಣ್ಯ ಪ್ರದೇಶವಾಗಿದ್ದರೆ, 201 ಹೆಕ್ಟೇರ್ ಕಂದಾಯ ಪ್ರದೇಶವಾಗಿರುತ್ತದೆ. ಈ ಪೈಕಿ ಶೇ. 63ರಷ್ಟು ಪ್ರದೇಶ ವನ್ಯಜೀವಿ ಪ್ರದೇಶವಾಗಿರುವುದರಿಂದ ಕೇಂದ್ರದ ಪರಿಸರ ಸಚಿವಾಲಯದಿಂದ ಅನುಮತಿ ಪಡೆದುಕೊಳ್ಳವುದು ಅಗತ್ಯವಾಗಿದೆ ಎಂದು ವಿವರಿಸಿದರು.

 ತಮಿಳುನಾಡಿಗೂ ನೀರು

ತಮಿಳುನಾಡಿಗೂ ನೀರು

ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪು ಹಾಗೂ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಸಾಮಾನ್ಯ ಮಳೆ ವರ್ಷದಲ್ಲಿ 177.25 ಟಿಎಂಸಿ ನೀರನ್ನು ಮಾಸಿಕವಾಗಿ ಹರಿಸಲಾಗುವುದು. ಅದೇ ರೀತಿ ಬೆಂಗಳೂರಿಗೆ ಹಂಚಿಕೆಯಾಗಿರುವ 4.75 ಟಿಎಂಸಿ ನೀರನ್ನು ಉಪಯೋಗಿಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

 ಯೋಜನಾ ಸ್ಥಳ

ಯೋಜನಾ ಸ್ಥಳ

ಮುಗ್ಗೂರು ಮತ್ತು ಹನೂರು ಅರಣ್ಯ ವಲಯದ ನಡುವಿನ ಒಂಟಿ ಗುಂಡ್ಲು ಬಳಿ ಪ್ರಸ್ತಾಪಿತ ಮೇಕೆದಾಟು ಅಣೆಕಟ್ಟನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ. 9000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಸುಮಾರು 441.20 ಮೀಟರ್ ಎತ್ತರ ಹಾಗೂ ಸರಿಸುಮಾರು 674.5 ಮೀಟರ್ ನಷ್ಟು ಅಗಲವಿರುವ ಈ ಉದ್ದೇಶಿತ ಅಣೆಕಟ್ಟೆಯಲ್ಲಿ 67.16 ಟಿಎಂಸಿ ನೀರನ್ನು ಶೇಖರಿಸಿಟ್ಟುಕೊಳ್ಳುವ ಸಾಮರ್ಥ್ಯ ಹೊಂದಿರುತ್ತದೆ. 17 ಕ್ರಸ್ಟ್ ಗೇಟ್ ಹೊಂದಿರುವ ಜಲಾಶಯದಲ್ಲಿ 7.7 ಟಿಎಂಸಿಯಷ್ಟು ನೀರು ಡೆಡ್ ಸ್ಟೋರೇಜ್ ನಲ್ಲಿ ಸಂಗ್ರಹವಾಗಿರುತ್ತದೆ ಎಂದು ಮಾಹಿತಿ ನೀಡಿದರು.

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ

 ವಿದ್ಯುತ್ ಘಟಕ

ವಿದ್ಯುತ್ ಘಟಕ

ಒಂಟಿಗುಂಡ್ಲುವಿನಿಂದ 3.5.ಕಿ.ಮೀ ದೂರದಲ್ಲಿ ತಮಿಳುನಾಡಿಗೆ ಬಿಡುವ ನೀರಿನಿಂದ ಸುಮಾರು 400 ಮೆಗಾ ವಾಟ್ ವಿದ್ಯುತ್ ಉತ್ಪಾದಿಸುವ ಉದ್ದೇಶವಿದೆ. ಇಂಧನ ಇಲಾಖೆಯ ವತಿಯಿಂದ ಇಲ್ಲಿ ವಿದ್ಯುತ್ ಘಟಕವನ್ನು ಸ್ಥಾಪಿಸಲಾಗುವುದು ಎಂದು ಸಚಿವರು ಯೋಜನೆಯ ರೂಪುರೇಷೆಗಳನ್ನು ವಿವರಿಸಿದರು.

Recommended Video

ದಂಗೆ ಏಳುವ ಮೊದಲು Hindi Diwas ಆಚರಣೆ ನಿಲ್ಬೇಕು!! | Oneindia Kannada
 ಗೈರಾದ ಜಿಲ್ಲಾಧಿಕಾರಿ

ಗೈರಾದ ಜಿಲ್ಲಾಧಿಕಾರಿ

ಉದ್ದೇಶಿತ ಅಣೆಕಟ್ಟು ನಿರ್ಮಾಣ ಸ್ಥಳ ಪರಿಶೀಲನೆ ಸಮಯದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ಗೈರು ಎದ್ದು ಕಾಣುತ್ತಿತ್ತು. ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಜಿಲ್ಲಾ ಪಂಚಾಯ್ತಿತಿ ಸಿಇಓ ಇಕ್ರಂ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಗೈರಾಗಿದ್ದರು.

ಇನ್ನು ಸಚಿವರಿಗೆ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್, ಮುಖ್ಯ ಇಂಜಿನಿಯರ್ ಶಂಕ್ರರೇಗೌಡ, ಸೂಪರಿಂಟೆಂಡ್ ಇಂಜಿನಿಯರ್ ವಿಜಯ್ ಕುಮಾರ್, ಮತ್ತು ಕಾರ್ಯನಿರ್ವಾಹಕ ಇಂಜಿನಿಯರ್ ವಂಕಟೇಗೌಡ ಸೇರಿದಂತೆ ಹಲವರು ಸಾಥ್ ನೀಡಿದರು.

English summary
Mekedadu Dam will be constructed after getting approval from the central government said minister Ramesh Jarkiholi in ramanagar today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X