• search
 • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮನಗರ ಜಿಲ್ಲಾ ಪ್ರಧಾನ ನ್ಯಾಯಾಧೀಶರಿಂದ ಕೊರೊನಾ ಜಾಗೃತಿ

By ರಾಮನಗರ ಪ್ರತಿನಿಧಿ
|

ರಾಮನಗರ, ಡಿಸೆಂಬರ್ 3: ಮಾಸ್ಕ್ ಧರಿಸುವುದರಿಂದ ಕೋವಿಡ್-19 ಮಹಾಮಾರಿಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಎಂದು ರಾಮನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ ರಮಾ ಅವರು ತಿಳಿಸಿದರು.

ಸಾರ್ವಜನಿಕರಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಮನಗರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಪ್ರಚಾರಾಂದೋಲನಕ್ಕೆ ಜಿಲ್ಲಾ ನ್ಯಾಯಾಧೀಶರು ಚಾಲನೆ ನೀಡಿದರು.

ರಾಜ್ಯದ ಮೊದಲ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ಶಂಕುಸ್ಥಾಪನೆ

ರಾಮನಗರದ ವಿವಿಧ ವಾರ್ಡ್ ಗಳಲ್ಲಿ ಸಂಚರಿಸಿ ಮಾಸ್ಕ್ ವಿತರಿಸುವ ಮೂಲಕ, ಸಾರ್ವಜನಿಕರು ಮಾಸ್ಕ್ ಧರಿಸುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿಕೊಟ್ಟರು.

ಇದೇ ಸಂದರ್ಭದಲ್ಲಿ ಕೋವಿಡ್ ಲಸಿಕೆ ಲಭ್ಯವಾಗುವವರೆಗೂ ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಹೊರಗೆ ಹೋಗುವಾಗ ತಪ್ಪದೇ ಮಾಸ್ಕ್ ನ್ನು ಧರಿಸಿ ಹೋಗುವುದು ಸೂಕ್ತ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ವೆಂಕಟಪ್ಪ ಅವರು ಸಾರ್ವಜನಿಕರಲ್ಲಿ ವಿನಂತಿಸಿದರು.

   ಶಿವಮೊಗ್ಗದಲ್ಲಿ IGP Ravi ಎದುರು ಚಾಕು ಪ್ರದರ್ಶಿಸಿದ ಯುವಕ | Oneindia Kannada

   English summary
   "We can protect ourselves from the Covid-19 by wearing a mask," said Ramanagar district chief judge BG Rama.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X