ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ: ತುರ್ತು ಸಭೆ ನಡೆಸಿದ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

|
Google Oneindia Kannada News

ರಾಮನಗರ, ಮಾರ್ಚ್ 31: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತು ಮಾಗಡಿ ಶಾಸಕ ಎ.ಮಂಜುನಾಥ್ ಇಂದು ಕೊರೊನಾ ಕುರಿತು ತುರ್ತು ಸಭೆ ನಡೆಸಿದರು.

ಈ ಸಭೆಯಲ್ಲಿ ಡಿಸಿ ಅರ್ಚನಾ, ಎಸ್.ಪಿ ಅನೂಪ್ ಶೆಟ್ಟಿ, ಡಿ.ಎಚ್.ಓ ನಿರಂಜನ್, ಎಡಿಸಿ ವಿಜಯ್ ಕುಮಾರ್, ತಹಸೀಲ್ದಾರ್ ಟಿ.ಎನ್.ನರಸಿಂಹ ಮೂರ್ತಿ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್-19: 50 ಲಕ್ಷ ದೇಣಿಗೆ ನೀಡಿದ ಪುನೀತ್ ರಾಜ್ ಕುಮಾರ್ಕೋವಿಡ್-19: 50 ಲಕ್ಷ ದೇಣಿಗೆ ನೀಡಿದ ಪುನೀತ್ ರಾಜ್ ಕುಮಾರ್

ಕೊರೊನಾ ತುರ್ತು ಸಂದರ್ಭದಲ್ಲಿ ಜನತೆಗೆ ಅನಾನುಕೂಲವಾಗದಂತೆ ಯಾವ್ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಹಾಗೂ ಆರೋಗ್ಯ ಇಲಾಖೆಯಲ್ಲಿರುವ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದು, ''ಜಿಲ್ಲೆಯಲ್ಲಿ ಈವರೆಗೆ 200ಕ್ಕೂ ಹೆಚ್ಚು ಜನರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಸದ್ಯ ಒಟ್ಟು 26 ಮಂದಿ ವೈದ್ಯಾಧಿಕಾರಿಗಳು ಇದ್ದು, 4 ಜನ ವೈದ್ಯರ ಕೊರತೆ ಇದೆ. ವೈದ್ಯರ ಮೂರು ಬ್ಯಾಚ್ ಗಳನ್ನು ಮಾಡಿ ಕೆಲಸ ಮಾಡಿಸಲಾಗ್ತಿದೆ. ಜಿಲ್ಲಾಧಿಕಾರಿಗಳು ಕೋವಿಡ್- 19 ವಿರುದ್ಧ ಹೋರಾಟಕ್ಕೆ ಒಳ್ಳೆಯ ಕ್ರಮ ತೆಗೆದುಕೊಂಡಿದ್ದಾರೆ'' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.

Coronavirus: HD Kumaraswamy Meeting In Ramanagar

ಲಾಕ್ ಡೌನ್ ವಿಚಾರದ ಬಗ್ಗೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ''ಜನಪ್ರತಿನಿಧಿಗಳಿಂದ ಕೂಲಿ ಕಾರ್ಮಿಕರಿಗೆ ನೆರವು ನೀಡಲು ಸಭೆ ಕರೆಯಲಾಗಿದೆ. ಇಂಡಸ್ಟ್ರಿಯಲ್ ಏರಿಯಾದಲ್ಲಿನ ನಿರ್ಗತಿಕರಿಗೆ ಎನ್.ಜಿ.ಓ ಮೂಲಕ ಸಹಾಯವಾಗ್ತಿದೆ. ಎಪಿಎಂಸಿಯಲ್ಲಿ ರೈತರಿಗೆ ಸಮಸ್ಯೆ ಆಗದಂತೆ ಕ್ರಮ ಜರುಗಿಸಲು ಸೂಚಿಸಿದ್ದೇನೆ. ಈಗಾಗಲೇ ಬೆಳಗಾವಿ ಚಿಂಚೊಳ್ಳಿಯಲ್ಲಿ ಕಲ್ಲಂಗಡಿ ಬೆಳೆದ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಸಹ ನಾನು ಮಾಹಿತಿ ಕಲೆ ಹಾಕಿದ್ದೇನೆ. ಕೊರೊನಾ ವಿಚಾರದಲ್ಲಿ ರಾಮನಗರ ಜಿಲ್ಲೆಯಲ್ಲಿ ಈವರೆಗೆ ಅಂತಹ ಯಾವುದೇ ಒಂದು ಗಂಭೀರ ಪ್ರಕರಣಗಳಾಗಿಲ್ಲ. ರೇಷ್ಮೆ ಗೂಡು ಬೆಳೆಗಾರರ ಬಗ್ಗೆ ಈಗಾಗಲೇ ಸಿಎಂ ಜತೆ ಚರ್ಚೆ ಮಾಡಿದ್ದೇನೆ. ರೈತರಿಗೆ ಅನುಕೂಲವಾಗುವಂತೆ ಕ್ರಮಕ್ಕೆ ಅನುವು ಮಾಡಿಕೊಳ್ಳಲು‌ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಮಾನವಿ ಮಾಡಿದ್ದೇನೆ'' ಎಂದು ತಿಳಿಸಿದರು.

ಇನ್ನು ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಕೆಲ ಸಾರ್ವಜನಿಕರು ಒತ್ತಾಯ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್.ಡಿ.ಕುಮಾರಸ್ವಾಮಿ, ''ಕೆಲವರು ಮದ್ಯ ವ್ಯಸನಿಗಳಿದ್ದಾರೆ. ಏಕಾಏಕಿ ಮದ್ಯ ನಿಲ್ಲಿಸಿದ್ದರಿಂದ ಅವರ ದೇಹದ ಮೇಲೆ ಪರಿಣಾಮ ಬೀರುತ್ತದೆ. ಈ ಬಗ್ಗೆ ಸರ್ಕಾರ ಸೂಕ್ತ ತೀರ್ಮಾನಕ್ಕೆ ಮುಂದಾಗಿದೆ. ಮದ್ಯವ್ಯಸನಿಗಳಿಗೆ ಕೌನ್ಸಿಲಿಂಗ್ ಮಾಡಲು ವ್ಯವಸ್ಥೆ ಮಾಡ್ತಿದ್ದಾರೆ'' ಎಂದರು.

English summary
Coronavirus: HD Kumaraswamy meeting in Ramanagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X