ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು; 15-20 ದಿನ ಶಾಲಾ- ಕಾಲೇಜು ಮುಚ್ಚುವಂತೆ ಎಚ್‌ಡಿಕೆ ಆಗ್ರಹ

|
Google Oneindia Kannada News

ಚನ್ನಪಟ್ಟಣ, ಜನವರಿ 20: ಶಾಲೆ, ಕಾಲೇಜು ಹಾಗೂ ಹಾಸ್ಟೆಲ್‌ಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬರುತ್ತಿದ್ದು, ಸರಕಾರ ಕೂಡಲೇ ಶಾಲಾ- ಕಾಲೇಜುಗಳಿಗೆ ಕನಿಷ್ಠ 15ರಿಂದ 20 ದಿನ ರಜೆ ಘೋಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯ ಮಾಡಿದರು.

ರಾಮನಗರ ಜಿಲ್ಲೆ ಚನ್ನಪಟ್ಟಣದ ಹೊಂಗನೂರಿನಲ್ಲಿ ಗುರುವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ವಸತಿ ಶಾಲೆಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಸೋಂಕಿತರಾಗಿದ್ದಾರೆ. ಹೀಗಾಗಿ ಇಂಥ ಶಾಲೆಗಳನ್ನು ತಕ್ಷಣವೇ ಬಂದ್‌ ಮಾಡಿಸಬೇಕು ಎಂದರು.

ತಜ್ಞರಲ್ಲಿ ಕೆಲವರು ಶಾಲೆಗಳಿಗೆ ರಜೆ ಘೋಷಿಸುವುದಕ್ಕೆ ಪರ, ವಿರೋಧ ಇದ್ದಾರೆ ಎಂಬ ಬಗ್ಗೆ ಗಮನ ಸೆಳೆದಾಗ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಿಷ್ಟು.

covid-19 infection for students; hd kumaraswamy demands 15 to 20 days school and college closure

ತಜ್ಞರು ಪರ ಅಥವಾ ವಿರೋಧ ಎನ್ನುವ ಮಾತು ಬೇರೆ. ಆದರೆ, ಸರಕಾರದ ಮುಂದೆ ಕೋವಿಡ್ ಸ್ಥಿತಿಗತಿಗಳ ಬಗ್ಗೆ ವಾಸ್ತವಾಂಶಗಳಿವೆ. ಆ ಮಾಹಿತಿಗಳ ಆಧಾರದ ಮೇಲೆ ಸರಕಾರ ನಿರ್ಧಾರ ಕೈಗೊಳ್ಳಬೇಕು. ಮೊನ್ನೆಯಷ್ಟೇ ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ 163 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ. ತುಮಕೂರಿನಲ್ಲಿ ಒಂದೇ ಕಾಲೇಜಿನ 600 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಈ ಎಲ್ಲ ಅಂಕಿ ಅಂಶಗಳೇ ಎಲ್ಲವನ್ನೂ ಹೇಳುತ್ತಿವೆ ಎಂದರು.

ತಜ್ಞರ ವರದಿಗಿಂತ ಸರಕಾರದ ಜವಾಬ್ದಾರಿ ಹೆಚ್ಚು. ಸರ್ಕಾರವು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೆಲಸ ಮಾಡಲಿ. ಮಕ್ಕಳು, ಪೋಷಕರು ಆತಂಕಕ್ಕೆ ಒಳಗಾಗುವುದಕ್ಕೆ ಅವಕಾಶ ನೀಡಬಾರದು. ಸರಕಾರ ಈ ನಿಟ್ಟಿನಲ್ಲಿ ಚಿಂತಸಲಿ ಎಂದು ಎಚ್‌ಡಿಕೆ ಸಲಹೆ ನೀಡಿದರು.

ಬಿಜೆಪಿ ನಾಯಕರಲ್ಲೇ ಗೊಂದಲವಿದೆ
ವೀಕೆಂಡ್ ಕರ್ಫ್ಯೂ ವಿಚಾರದಲ್ಲಿ ಎಲ್ಲ ಕಡೆ ಗೊಂದಲವಿದೆ. ಅದರಲ್ಲೂ ಬಿಜೆಪಿ ಪಕ್ಷದ ನಾಯಕರಲ್ಲೇ ಗೊಂದಲಗಳಿವೆ. ಮೊದಲು ಇದನ್ನು ಅವರು ಸರಿಪಡಿಸಿಕೊಳ್ಳಲಿ. ಕೂಲಿ ಕಾರ್ಮಿಕರು, ಸಣ್ಣಪುಟ್ಟ ವ್ಯಾಪಾರಸ್ಥರು ಕಷ್ಟದಲ್ಲಿದ್ದಾರೆ. ವೀಕೆಂಡ್ ಕರ್ಫ್ಯೂನಿಂದ ಅವರಿಗೆ ಜೀವನ ನಿರ್ವಹಣೆ ಕಷ್ಟ. ದಿನನಿತ್ಯದ ಆದಾಯದಲ್ಲಿ ಕುಟುಂಬ ನಿರ್ವಹಿಸಬೇಕಿದೆ. ಇಂತಹ ಕುಟುಂಬಗಳ ಬದುಕು ಕಟ್ಟಿ ಕೊಡಬೇಕು. ಬದುಕು ಕಟ್ಟಿ ಕೊಡುವ ಜವಾಬ್ದಾರಿ ಸರ್ಕಾರದ್ದು. ವಿರೋಧ ಪಕ್ಷದವರು ಸುಲಭವಾಗಿ ಹೇಳುತ್ತಾರೆ ಅಂತಾರೆ ಅಂತ ಲಘುವಾಗಿ ಮಾತನಾಡುವುದು ಬೇಡ ಎಂದು ಕುಮಾರಸ್ವಾಮಿ ಕಿವಿಮಾತು ಹೇಳಿದರು.

covid-19 infection for students; hd kumaraswamy demands 15 to 20 days school and college closure

ನಾವು ಸರಕಾರ ನಡೆಸಿದ್ದೇವೆ. ಆ ಕಷ್ಟ ನಷ್ಟ ನನಗೂ ಗೊತ್ತಿದೆ. ಪ್ರತಿಯೊಬ್ಬ ನಾಗರಿಕರ ಹಿತ ಕಾಪಾಡುವುದು ಸರಕಾರದ ಜವಾಬ್ದಾರಿ. ಜನರ ಬದುಕು ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವುದು ಸರಕಾರದ ಕರ್ತವ್ಯ. ನಾನು ಸರಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲು ಹೀಗೆ ಹೇಳುತ್ತಿಲ್ಲ. ನಾಡಿನ ಜನರು ನೀಡುವ ತೆರಿಗೆ ಹಣವನ್ನೇ ಬಳಸಿ ಬಡ ವರ್ಗದ ಜನರ ನೆರವಿಗೆ ಸರಕಾರ ಧಾವಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ ಆಗ್ರಹಿಸಿದರು.

ರಾಮನಗರದಲ್ಲಿ ಹೆಚ್ಚಿದ ಸೋಂಕು
ರಾಮನಗರದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ ಎಂದ ಕುಮಾರಸ್ವಾಮಿ, ಇದು ಕಾಂಗ್ರೆಸ್ ಪಾದಯಾತ್ರೆಯಿಂದ ಹೆಚ್ಚಾಯಿತೋ ಅಥವಾ ಬೇರೆ ಯಾವುದೇ ಕಾರಣದಿಂದ ಹೆಚ್ಚಾಯಿತೋ ಎಂದು ನಾನು ಚರ್ಚೆ ಮಾಡಲ್ಲ. ಆದಾಗ್ಯೂ ಜಿಲ್ಲೆಯ ಅಧಿಕಾರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸವನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕಿದೆ ಎಂದರು.

ಚನ್ನಪಟ್ಟಣದ ಸಮಗ್ರ ಅಭಿವೃದ್ಧಿ
ಚನ್ನಪಟ್ಟಣ ಸಮಗ್ರ ಅಭಿವೃದ್ಧಿಗೆ ನನ್ನ ಎಲ್ಲ ಶ್ರಮ ಹಾಕುತ್ತಿದ್ದೇನೆ. ಇಲ್ಲಿಯವರೆಗೆ ಕೆರೆ ತುಂಬಿಸುವ ಕೆಲಸ ಆಯಿತು. ಈಗ ಸೇತುವೆ ಬೇಕು ಎಂಬ ಸಮಸ್ಯೆ ಶುರುವಾಗಿದೆ. ನಾನು ಸಿಎಂ ಆಗಿದ್ದಾಗ ಅನೇಕ ಅಭಿವೃದ್ಧಿ ಮಾಡಿದ್ದೇನೆ. ನಾನು ಮೂರೂವರೆ ವರ್ಷದಲ್ಲಿ ಏನು ಮಾಡಿದ್ದೇನೆ, 25 ವರ್ಷದಿಂದ ಬೇರೆಯವರು ಏನು ಮಾಡಿದ್ದಾರೆ ಎನ್ನುವುದನ್ನು ಜನ ಗಮನಿಸಬೇಕು. ಕಳೆದ ಮೂರೂವರೆ ವರ್ಷದಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ. ಕ್ಷೇತ್ರದ ಜನರಿಗೆ ನನ್ನ ಅಭಿವೃದ್ಧಿ ಕಾರ್ಯ ತಿಳಿದಿದೆ. ಕೆಲವರು ಚಿಲ್ಲರೆ ರಾಜಕಾರಣ ಮಾಡುವುದನ್ನು ಬಿಡಬೇಕು. ಜನರನ್ನು ತಪ್ಪು ದಾರಿಗೆಳೆಯಬೇಡಿ, ಇಷ್ಟೆಲ್ಲಾ ಕೆಲಸಗಳು ವ್ಯರ್ಥವಾಗುತ್ತದೆ ಎಂದು ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಟಾಂಗ್ ಕೊಟ್ಟರು.

English summary
Former CM HD Kumaraswamy demands 15 to 20 day school and college closure due to Covid-19 infection for students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X