ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರದಲ್ಲೇ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆರಂಭ: ಡಿಸಿಎಂ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜೂನ್ 13: ರಾಮನಗರ ಜಿಲ್ಲೆಯಲ್ಲೇ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಪ್ರಾರಂಭಿಸುತ್ತಿದ್ದು, ಕೊರೊನಾ ವೈರಸ್ ಎದುರಿಸಲು ಸಮರ್ಥವಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವಥ್ ನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು.

Recommended Video

ಹೈಕೋರ್ಟ್ ನಲ್ಲಿ ವಾದ ಮಂಡಿಸಿದ್ರು ಸಂಸದ ತೇಜಸ್ವಿ ಸೂರ್ಯ | Tejasvi Surya | Karnataka High Court

ಶುಕ್ರವಾರ ಸಂಜೆ ಬಿಡದಿಯ ತಾಳಗಪ್ಪೆ ಗ್ರಾಮದಲ್ಲಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳನ್ನು ಗ್ರಾಮ ಪಂಚಾಯತಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿದ ಸಂವಾದದಲ್ಲಿ ಪಾಲ್ಗೊಂಡ ನಂತರ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಮಾಧ್ಯಮಗಳೊಂದಿಗೆ ಮಾತನಾಡಿದರು.

ಬೆಂಗಳೂರು-ಮಾಗಡಿ ನಾಲ್ಕು ಪಥದ ರಸ್ತೆ ಕಾಮಗಾರಿಗೆ ಜುಲೈನಲ್ಲಿ ಚಾಲನೆಬೆಂಗಳೂರು-ಮಾಗಡಿ ನಾಲ್ಕು ಪಥದ ರಸ್ತೆ ಕಾಮಗಾರಿಗೆ ಜುಲೈನಲ್ಲಿ ಚಾಲನೆ

ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಕೇಸ್ ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಅಶ್ವಥ್ ನಾರಾಯಣ್, ಲಾಕ್ ಡೌನ್ ಸಡಿಲಿಕೆ ಬಳಿಕ ಜನರ ಸಂಚಾರ ಹೆಚ್ಚಾಗಿದೆ ಹಾಗಾಗಿ ಕೊರೊನಾ ವೈರಸ್ ಕೇಸ್ ಗಳು ಹೆಚ್ಚಾಗಿ ಪತ್ತೆಯಾಗಿವೆ ಎಂದರು.

Covid-19 Testing Lab Start In Ramanagara: DCM Ashwath Narayana

ನಮ್ಮ ರಾಜ್ಯದಲ್ಲಿ ಕೊರೊನಾ ವೈರಸ್ ತಡೆಗಟ್ಟಲು ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ. ನಾವು ಕೂಡ ಕೊರೊನಾ ವೈರಸ್ ಸಮಸ್ಯೆ ಎದುರಿಸಲು ಸಮರ್ಥರಿದ್ದೇವೆ ಎಂದು ತಿಳಿಸಿದರು.

Covid-19 Testing Lab Start In Ramanagara: DCM Ashwath Narayana

ಮುಖ್ಯವಾಗಿ ಎಲ್ಲಾ ತಾಲೂಕು, ಜಿಲ್ಲಾಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡುಕೊಂಡಿದ್ದೇವೆ. ಯಾರು ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ ಅವರು, ಇನ್ನು ಮುಂದೆ ಜಿಲ್ಲೆಯಲ್ಲಿ ಅತ್ಯಾಧುನಿಕ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಕೂಡ ಮುಂದಿನ ವಾರ ಉದ್ಘಾಟನೆ ಮಾಡಲಿದ್ದು, ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಕೊರೊನಾ ವೈರಸ್ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಮಾಹಿತಿ ನೀಡಿದರು.

English summary
DCM Dr Ashwath Narayan expressed confidence that Covid-19 testing lab has been started in Ramanagar district and has been able to fight coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X