ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್; ವೈದ್ಯಕೀಯ ಉಪಕರಣ ಕೊಡುಗೆ ಕೊಟ್ಟ ಟೊಯೋಟಾ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಮೇ 24; ಏಷ್ಯಾದ ಅತಿ ದೊಡ್ಡ ಕಾರು ತಯಾರಿಕಾ ಕಂಪನಿ ಟೊಯೋಟಾ ಕಿರ್ಲೋಸ್ಕರ್ ಬಿಡದಿ ಘಟಕ ರಾಮನಗರ ಜಿಲ್ಲೆಗೆ ಸುಮಾರು 3.5 ಕೋಟಿ ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ಕೊಡುಗೆಯಾಗಿ ನೀಡಿದೆ.

ಈಗಾಗಲೇ ಜಿಲ್ಲೆಗೆ ವಿವಿಧ ರೀತಿಯಲ್ಲಿ ನೆರವಾಗುತ್ತಿರುವ ಟೊಯೊಟಾ ಕಂಪನಿ ಮತ್ತಷ್ಟು ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ‌ಅಶ್ವತ್ಥ ನಾರಾಯಣಗೆ ಹಸ್ತಾಂತರ ಮಾಡಿದೆ.

ಕೋವಿಡ್ ಲಸಿಕೆ ಕೇಂದ್ರ ಆರಂಭಿಸಿದ ಬಿಡದಿ ಟೊಯೋಟಾ ಘಟಕ ಕೋವಿಡ್ ಲಸಿಕೆ ಕೇಂದ್ರ ಆರಂಭಿಸಿದ ಬಿಡದಿ ಟೊಯೋಟಾ ಘಟಕ

ಬೆಂಗಳೂರಿನಲ್ಲಿ ಕಂಪನಿಯ ಪ್ರಧಾನ ವ್ಯವಸ್ಥಾಪಕ ರಾಜೇಂದ್ರ ಹೆಗ್ಡೆ ಹಾಗೂ ಹಿರಿಯ ವ್ಯವಸ್ಥಾಪಕ ಕಿರಣ್ 3.5 ಕೋಟಿ ರೂ. ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಕೊಡುಗೆಯಾಗಿ ನೀಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ ಜಿಲ್ಲಾಡಳಿತದ ಪರವಾಗಿ ವೈದ್ಯಕೀಯ ಸಲಕರಣೆಗಳನ್ನು ಸ್ವೀಕರಿಸಿದರು.

ಕೋವಿಡ್ ಪರಿಸ್ಥಿತಿ ಮಹತ್ವದ ಘೋಷಣೆ ಮಾಡಿದ ಟೊಯೋಟಾ ಕೋವಿಡ್ ಪರಿಸ್ಥಿತಿ ಮಹತ್ವದ ಘೋಷಣೆ ಮಾಡಿದ ಟೊಯೋಟಾ

 Covid Fight Toyota Donates Medical Equipment Worth 3.5 Crore

8 ನೆಬಲೈಸರ್‌ಗಳು, 20 ಗ್ಲೂಕೋ ಮೀಟರ್‌ಗಳು, 5 ಆಂಬೂ ಬ್ಯಾಗ್‌, 48 ಪಲ್ಸ್‌ ಆಕ್ಸಿ ಮೀಟರ್‌, 200 ನೋಸಲ್‌ ಪ್ರಾಂಗ್ಸ್‌, 250 ಆಕ್ಸಿಜನ್‌ ಮಾಸ್ಕ್‌, 20 ಆಮ್ಲಜನಕ ಸಾಂದ್ರಕ ಹಾಗೂ 5 ಮಲ್ಟಿ ಪ್ಯಾರಾ ಬೆಡ್‌ ಸೈಡ್‌ ಮಾನೀಟರ್‌ಗಳನ್ನು ಟೊಯೋಟಾ ಕಂಪನಿ ಪ್ರತಿನಿಧಿಗಳು ಹಸ್ತಾಂತರ ಮಾಡಿದರು.

ಟೊಯೋಟಾ ಕಾರ್ಮಿಕರಿಗೆ ಶುಭ ಸುದ್ದಿ ನೀಡಿದ ಸಚಿವರು ಟೊಯೋಟಾ ಕಾರ್ಮಿಕರಿಗೆ ಶುಭ ಸುದ್ದಿ ನೀಡಿದ ಸಚಿವರು

Recommended Video

ಬ್ಲಾಕ್ ಫಂಗಸ್ ಕಾಯಿಲೆ ಹೇಗೆಲ್ಲಾ ಹರಡುತ್ತೆ ಗೊತ್ತಾ? | Oneindia Kannada

ಈ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿಗಳು, "ಈಗಾಗಲೇ ಜಿಲ್ಲೆಗೆ ಹಲವಾರು ರೀತಿಯಲ್ಲಿ ಟೊಯೋಟಾ ಕಿರ್ಲೋಸ್ಕರ್‌ ಕಂಪನಿ ನೆರವಾಗಿದೆ. ಈಗ ಕೋವಿಡ್‌ ಸಂಕಷ್ಟದಲ್ಲಿ ಅಗತ್ಯವಾದ ವಿವಿಧ ವೈದ್ಯಕೀಯ ಸಲಕರಣೆಗಳನ್ನು ನೀಡಿದೆ. ಇನ್ನೊಂದು ವಾರದಲ್ಲಿ 30 ಆಮ್ಲಜನಕ‌ ಸಾಂದ್ರಕ ಸರಬರಾಜು ಮಾಡಲಿದ್ದಾರೆ" ಎಂದರು.

English summary
Toyota's Bidadi plant donates medical equipment worth of 3.5 crore to fight against Covid of Ramanagara district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X