ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ ಜಿಲ್ಲೆಯಲ್ಲಿ ಮಾ.8ರಿಂದ 75 ಲಸಿಕಾ ಕೇಂದ್ರಗಳಲ್ಲಿ 3ನೇ ಹಂತದ ಕೋವಿಡ್ ಲಸಿಕೆ ಲಭ್ಯ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಮಾರ್ಚ್ 6: ರಾಮನಗರ ಜಿಲ್ಲೆಯಲ್ಲಿ 60 ವರ್ಷ ಮತ್ತು 60 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ 3ನೇ ಹಂತದ ಕಾರ್ಯಕ್ರಮ ಮಾರ್ಚ್ 8 ರಿಂದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ನಗರ ಆರೋಗ್ಯ ಕೇಂದ್ರಗಳು ಸೇರಿದಂತೆ ಒಟ್ಟು 73 ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮತ್ತು 2 ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 75 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್.ಕೆ ಅವರು ತಿಳಿಸಿದರು.

ಶನಿವಾರ ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. 60 ವರ್ಷ ಮೇಲ್ಪಟ್ಟ ಎಲ್ಲರಿಗೂ 45ರಿಂದ 50 ವರ್ಷದೊಳಗಿನ ವ್ಯಕ್ತಿಗಳು ರಕ್ತದೊತ್ತಡ, ಸಕ್ಕರೆ ಖಾಯಿಲೆ, ಹೃದಯ, ಮೂತ್ರಪಿಂಡ, ಲಿವರ್‌ಗಳಿಗೆ ಸಂಬಂಧಿಸಿದ ತೊಂದರೆಗಳಿದ್ದರೆ ಹಾಗೂ ಕ್ಯಾನ್ಸರ್, ಎಚ್.ಐ.ವಿ/ಏಡ್ಸ್ ಸೋಂಕಿನಿಂದ ಬಳಲುತ್ತಿರುವವರಿಗೆ ಅಂತವರನ್ನು ವಿಶೇಷ ಪ್ರಕರಣಗಳೆಂದು ಪರಿಗಣಿಸಿ ಲಸಿಕೆ ನೀಡಲಾಗುವುದು ಎಂದರು.

ಖಾಸಗಿ ಆಸ್ಪತ್ರೆಯಲ್ಲಿ 250 ರೂ. ಪಾವತಿಸಿ ಲಸಿಕೆ

ಖಾಸಗಿ ಆಸ್ಪತ್ರೆಯಲ್ಲಿ 250 ರೂ. ಪಾವತಿಸಿ ಲಸಿಕೆ

ಲಸಿಕೆ ಪಡೆಯುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಹನ ಪರವಾನಗಿ, ಪಾಸ್‌ಪೋರ್ಟ್ ಇವುಗಳಲ್ಲಿ ಯಾವುದಾದರೂ ಒಂದನ್ನು ಕಡ್ಡಾಯವಾಗಿ ಲಸಿಕೆ ಪಡೆಯುವ ಸಂದರ್ಭದಲ್ಲಿ ಹಾಜರುಪಡಿಸಬೇಕು. 45 ವರ್ಷ ಮೇಲ್ಪಟ್ಟವರು 59 ವರ್ಷದೊಳಗಿನ ಕೊಮೊರ್ಬಿಡಿಟಿ ಕಾಯಿಲೆಯಿಂದ ಬಳಲುತ್ತಿರುವ ಬಗ್ಗೆ ಆರ್.ಎಂ.ಪಿ ವೈದ್ಯರಿಂದ ಕಾಯಿಲೆ ಇರುವ ಬಗ್ಗೆ ದೃಢೀಕರಣ ಪತ್ರವನ್ನು ಹಾಜರಿಪಡಿಸಬೇಕು ಎಂದರು.

ಕೊರೊನಾ ಹೆಚ್ಚಾದ ಪ್ರದೇಶಗಳಲ್ಲಿ ಲಸಿಕಾ ಕಾರ್ಯಕ್ರಮ ಚುರುಕುಗೊಳಿಸಲು ಸೂಚನೆಕೊರೊನಾ ಹೆಚ್ಚಾದ ಪ್ರದೇಶಗಳಲ್ಲಿ ಲಸಿಕಾ ಕಾರ್ಯಕ್ರಮ ಚುರುಕುಗೊಳಿಸಲು ಸೂಚನೆ

ರಾಮನಗರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ನಗರ ಆರೋಗ್ಯ ಕೇಂದ್ರಗಳು ಉಚಿತವಾಗಿ ಲಸಿಕೆ ಪಡೆದುಕೊಳ್ಳಬಹುದು. ಖಾಸಗಿ ಆಸ್ಪತ್ರೆಗಳಾದ ರಾಮಕೃಷ್ಣ ಆಸ್ಪತ್ರೆ ಹಾಗೂ ಚಂದ್ರಮ್ಮ ದಯಾನಂದ ಸಾಗರ ಆಸ್ಪತ್ರೆಯಲ್ಲಿ ಪ್ರತಿ ಡೋಸ್ ಗೆ 250 ರೂ. ಪಾವತಿಸಿ ಲಸಿಕೆ ಪಡೆಯಬಹುದಾಗಿದೆ ಎಂದರು.

ಕೋವಿಡ್ ಲಸಿಕೆ ಸುರಕ್ಷಿತ

ಕೋವಿಡ್ ಲಸಿಕೆ ಸುರಕ್ಷಿತ

ಕೋವಿಡ್ ಲಸಿಕೆ ಸುರಕ್ಷಿತವಾಗಿದ್ದು ಯಾವುದೇ ಅಡ್ಡ ಪರಿಣಾಮವಿಲ್ಲ. ಜಿಲ್ಲೆಯಲ್ಲಿ ಈಗಾಗಲೇ ಹೆಲ್ತ್ ಕೇರ್ ವರ್ಕರ್ಸ್ ಹಾಗೂ ಫ್ರಂಟ್ ಲೈನ್ ವರ್ಕರ್ಸ್ ಲಸಿಕೆ ಪಡೆದಿರುತ್ತಾರೆ. ಇವರಲ್ಲಿ ಯಾರಿಗೂ ಸಹ ಅಡ್ಡ ಪರಿಣಾಮ ಉಂಟಾಗಿಲ್ಲ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೇ ಕೋವಿಡ್ ಲಸಿಕೆ ಪಡೆದುಕೊಂಡು ಕೋವಿಡ್ ಹೋರಾಟದಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು. 8163 ಹೆಲ್ತ್ ಕೇರ್ ವರ್ಕರ್ಸ್ ಗಳಲ್ಲಿ 6662 ಜನರು ಮೊದಲ ಡೋಸ್ ಲಸಿಕೆ ಪಡೆದು ಶೇ.81ಹಾಗೂ ಎರಡನೇ ಡೋಸ್‌ನಲ್ಲಿ 6459 ಜನರಲ್ಲಿ 4605 ಜನರು ಎರಡನೇ ಡೋಸ್ ಲಸಿಕೆ ಪಡೆದು ಶೇ.79 ಸಾಧನೆಯಾಗಿರುತ್ತದೆ.

ಪೊಲೀಸ್ ಇಲಾಖೆಯಲ್ಲಿ 1072 ಜನರಿಗೆ ಲಸಿಕೆ

ಪೊಲೀಸ್ ಇಲಾಖೆಯಲ್ಲಿ 1072 ಜನರಿಗೆ ಲಸಿಕೆ

ಫ್ರಂಟ್ ಲೈನ್ ವರ್ಕರ್ಸ್ ನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಕಂದಾಯ ಇಲಾಖೆಯಲ್ಲಿ 2331 ಜನರಲ್ಲಿ 2138 ಜನರು, ಪೊಲೀಸ್ ಇಲಾಖೆಯಲ್ಲಿ 1363 ಜನರಲ್ಲಿ 1072 ಜನರು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ 727 ಜನರಲ್ಲಿ 572 ಜನರು ಲಸಿಕೆ ಪಡೆದಿರುತ್ತಾರೆ. ಒಟ್ಟಾರೆ 4421 ಜನರಲ್ಲಿ 3782 ಜನರು ಲಸಿಕೆ ಪಡೆದು ಶೇ.86 ಸಾಧನೆಯಾಗಿರುತ್ತದೆ. ಲಸಿಕೆ ಪಡೆದವರಿಗೆ ಯಾವುದೇ ರೀತಿಯ ತೊಂದರೆ ಯಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಸ್ಪಷ್ಟಪಡಿಸಿದರು.

ಆನ್‌ಲೈನ್ ನಲ್ಲಿ ಹೆಸರು ನೋಂದಣಿ

ಆನ್‌ಲೈನ್ ನಲ್ಲಿ ಹೆಸರು ನೋಂದಣಿ

ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದೊಳಗಿನ ಕೊಮೊರ್ಬಿಡಿಟಿ ಹೊಂದಿರುವವರು 28,148 ಜನರು ಹಾಗೂ 60 ವರ್ಷ ಮೇಲ್ಪಟ್ಟವರು 84445 ಜನರು ಇದ್ದು ಇಲ್ಲಿಯವರೆಗೆ 411 ಜನ ಮಾತ್ರ ಲಸಿಕೆ ಪಡೆದುಕೊಂಡಿದ್ದಾರೆ.

ಕೋವಿಡ್ ಪ್ರಕರಣಗಳು ಬೇರೆ ರಾಜ್ಯಗಳಲ್ಲಿ ಹೆಚ್ಚಾಗುತ್ತಿದೆ. ಇದರ ಬಗ್ಗೆ ಜನರು ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವುದರ ಜೊತೆಗೆ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳಬೇಕು. ಆನ್‌ಲೈನ್ ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಲು ತೊಂದರೆಯಾಗುತ್ತಿದ್ದಲ್ಲಿ, ಸಾರ್ವಜನಿಕರು ಲಸಿಕೆ ನೀಡುವ ಕೇಂದ್ರಗಳಿಗೆ ಭೇಟಿ ನೀಡಿದರೆ ಸ್ಥಳದಲ್ಲೇ ಹೆಸರು ನೋಂದಾಯಿಸಿಕೊಂಡು ಲಸಿಕೆ ನೀಡಲಾಗುವುದು ಎಂದರು.

ಸಾಮಾಜಿಕ ಅಂತರ ಕಾಯ್ದುಕೊಳ್ಳಿ

ಸಾಮಾಜಿಕ ಅಂತರ ಕಾಯ್ದುಕೊಳ್ಳಿ

ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗುತ್ತಿದೆ. ಆದರೆ ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು ಎಂದು ಜನರಲ್ಲಿ ಜಿಲ್ಲಾಧಿಕಾರಿಗಳಿ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಪದ್ಮ, ಡಿಎಲ್‌ಒ ಡಾ.ಮಂಜುನಾಥ್, ಡಿ.ಎಸ್.ಒ ಡಾ.ಕಿರಣ್ ಶಂಕರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗಂಗಾಧರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

English summary
The third phase of vaccination program in Ramanagara district will commence from March 8.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X