• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿ.ಪಿ ಯೋಗೇಶ್ವರ್

By ರಾಮನಗರ ಪ್ರತಿನಿಧಿ
|

ರಾಮನಗರ, ಜನವರಿ 11: ಯೋಗೇಶ್ವರ್ ಅವರು ಕ್ಷೇತ್ರದಲ್ಲಿ ವಸೂಲಿ ದಂಧೆ ಮಾಡುತ್ತಿದ್ದಾರೆಂಬ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಎಂಎಲ್ಸಿ ಸಿ.ಪಿ ಯೋಗೇಶ್ವರ್ ತಿರುಗೇಟು ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಸಿ.ಪಿ ಯೋಗೇಶ್ವರ್, ""ಸಮಯ ಬಂದಾಗ ಕುಮಾರಸ್ವಾಮಿ ಬಗ್ಗೆ ಮಾತನಾಡ್ತೇನೆ, ಮುಂದಿನ ದಿನಗಳಲ್ಲಿ ಇದಕ್ಕೆಲ್ಲ ಉತ್ತರ ಕೊಡ್ತೇನೆ'' ಎಂದು ಹೇಳಿದರು.

ಎಂಎಲ್ಸಿ ಯೋಗೇಶ್ವರ್‌ಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಕುಮಾರಸ್ವಾಮಿ

ಅವರ ಅಸ್ತಿತ್ವಕ್ಕೆ ಅವರು ಬಡಿದಾಡುತ್ತಿದ್ದಾರೆ, ನಾನು ಕ್ಷೇತ್ರ ಉಳಿಸಿಕೊಳ್ಳಲು ಹೋರಾಡುತ್ತಿದ್ದೇನೆ. ಹಾಗಾಗಿ ಅವರು ನನ್ನನ್ನು ಹೊಗಳೋಕೆ ಆಗುತ್ತಾ? ಇಂದ್ರ-ಚಂದ್ರ ಅನ್ನೋಕೆ ಆಗುತ್ತಾ? ಎಂದು ಪ್ರಶ್ನಿಸಿದರು.

ಹೀಗೆಲ್ಲ ಮಾತನಾಡುವುದು ಮಾಜಿ ಸಿಎಂ ಕುಮಾರಸ್ವಾಮಿಯವರ ಚಾಳಿ, ಅಚಾನಕ್ಕಾಗಿ ಎರಡು ಬಾರಿ ಸಿಎಂ ಆಗಿದ್ದವರು. ಹಾಗಾಗಿ ಹಗುರವಾಗಿ ಮಾತನಾಡೋದನ್ನು ಬಿಡಿ ಎಂದು ಕಿಡಿಕಾರಿದರು.

ನನಗೆ ಅವರಿಗಿಂತಲೂ ಚೆನ್ನಾಗಿ ಮಾತನಾಡಲು ಬರುತ್ತೆ, ಮುಂದೆ ಗಂಭೀರವಾಗಿ ಮಾತನಾಡಲು ಕಲಿತುಕೊಳ್ಳಲಿ. ಯಾರ್ಯಾರ ದಾಖಲೆ ಇಟ್ಟುಕೊಂಡಿದ್ದಾರೆಂದು ಅವರನ್ನೇ ಕೇಳಬೇಕು ಎಂದು ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಅವರು ಜೆಡಿಎಸ್ ನಾಯಕ ಎಚ್‌ಡಿಕೆಗೆ ಟಾಂಗ್ ನೀಡಿದರು.

ಇನ್ನು ಸಚಿವ ಸಂಪುಟ ವಿಸ್ತರಣೆ ಕುರಿತು ಮಾತಾಡಿದ ಎಂಎಲ್ಸಿ ಸಿ.ಪಿ ಯೋಗೀಶ್ವರ್, ನಾನು ಯಾವುದೇ ಊಹಾಪೋಹ ಸುದ್ದಿಗಳಿಗೆ ಪ್ರತಿಕ್ರಿಯಿಸುವುದಿಲ್ಲ. ಬಹಳಷ್ಟು ಸಾರಿ ಈ ರೀತಿ ನನ್ನ ಹೆಸರು ಬಂದು ಅವಕಾಶ ವಂಚಿತನಾಗಿದ್ದೇನೆ. ಈ ವಿಚಾರದಲ್ಲಿ ಅಧಿಕೃತವಾಗಿ ಯಾವುದೇ ಮಾಹಿತಿ ಇಲ್ಲವೆಂದು ಸ್ಪಷ್ಟಪಡಿಸಿದರು.

ಹೈಕಮಾಂಡ್ ಹಾಗೂ ಸಿಎಂ ಯಡಿಯೂರಪ್ಪ ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡೋಣ. ನಾನು ಈ‌ ಹಿಂದೆ ಸಚಿವನಾಗಿ ಕೆಲಸ ಮಾಡಿದ್ದೇನೆ, ನಾನು ಇದೀಗ ಶಾಸಕನಾಗಿಕೆಲಸ ಮಾಡುತ್ತಿದ್ದೇನೆ. ಸಚಿವ ಸ್ಥಾನ ಸಿಕ್ಕಿದರೆ ರಾಜ್ಯವ್ಯಾಪಿ ಕೆಲಸ ಮಾಡುತ್ತೇನೆ ಎಂದು ಹೇಳುವ ಮೂಲಕ ಸಿ.ಪಿ.ಯೋಗೀಶ್ವರ್ ಅವರು ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದರು.

English summary
"When the time comes, i will talk about Kumaraswamy, CP Yogeshwar said in Channapattana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X