ಕಾರು ಅಪಘಾತ ಪ್ರಕರಣ: ಸಿಟಿ ರವಿ ಕಾರಿನ ಚಾಲಕ ಅರೆಸ್ಟ್

ಕುಣಿಗಲ್, ಫೆಬ್ರವರಿ 20: ಶಾಸಕ ಸಿಟಿ ರವಿ ಅವರಿದ್ದ ಕಾರು ಇಬ್ಬರ ಮೇಲೆ ಹರಿದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ಬೆಳಗಿನ ಜಾವ ಚಿಕ್ಕಮಗಳೂರಿನಿಂದ ಹಿಂದಿರುಗಬೇಕಾದರೆ ಸಿಟಿ ರವಿ ಕುಳಿತಿದ್ದ ಕಾರು ರಸ್ತೆಯ ಪಕ್ಕದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದ ಇಬ್ಬರು ಯುವಕರ ಮೇಲೆ ಹರಿದು ಆ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದರು.

ಸಿಟಿ ರವಿ ಹಾಗೂ ಚಾಲಕ ಆಕಾಶ್‌ಗೂ ಸಣ್ಣ ಪುಟ್ಟ ಗಾಯಗಳಾಗಿದ್ದವು. ಆಕಾಶ್‌ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಅವರನ್ನು ಪೊಲೀಸರು ಬಂಧಿಸಿದ್ದಾರೆ.

ct ravi car accident, driver arrest

ಚಿಕ್ಕಮಗಳೂರು ಕಡೆಯಿಂದ ತೆರಳುತ್ತಿದ್ದ ಶಾಸಕ ಸಿ.ಟಿ.ರವಿ ಅವರಿದ್ದ ಕಾರು ರಾ.ಹೆ.75ರ ಟರ್ಕೇನಹಳ್ಳಿ ಗೇಟ್ ಬಳಿ ನೋಡನೋಡುತ್ತಿದ್ದಂತೆ ರಸ್ತೆ ಬದಿಯಿದ್ದ ಇಬ್ಬರು ಯುವಕರ ಮೇಲೆ ಹರಿದಿದ್ದರಿಂದ ಇಬ್ಬರೂ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದರು.

ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾತ್ರಿ ಕಾರು ಚಾಲಕನನ್ನು ಪಟ್ಟಣ ಪೊಲೀಸರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+