ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಸಮಾವೇಶದಲ್ಲಿ ಕಾಣೆಯಾದ ಪರಮೇಶ್ವರ್ ಪೋಟೋ: ಸಭೆ ಬಹಿಷ್ಕಾರ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಡಿಸೆಂಬರ್ 09: ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಲು ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಶನಿವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರ ಫೋಟೊ ಇಲ್ಲದ ಕಾರಣ, ಸಭೆಯನ್ನು ಬಹಿಷ್ಕರಿಸಲಾಗಿದೆ.

ಜೆಡಿಎಸ್ ಬಂಡಾಯ ಶಾಸಕರು ಬಿಜೆಪಿಗೆ ಸೇರುವ ಸುದ್ದಿಗೆ ತೆರೆ!ಜೆಡಿಎಸ್ ಬಂಡಾಯ ಶಾಸಕರು ಬಿಜೆಪಿಗೆ ಸೇರುವ ಸುದ್ದಿಗೆ ತೆರೆ!

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿರುವ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ತಾಲ್ಲೂಕಿನ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರ ಸಭೆಗಳನ್ನು ಹಮ್ಮಿದ್ದಾರೆ. ಅದರ ಮೂಲಕ ತಮ್ಮ ಬೆಂಬಲಿಗರನ್ನು ಕಾಂಗ್ರೆಸ್ಗೆ ಸೇರ್ಪಡೆ ಮಾಡುತ್ತಿದ್ದಾರೆ ಆದರೆ ದರೆ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬಾವಚಿತ್ರ ಬಳಸದೆ ಕಡೆಗಣಿಸಿದ್ದಾರೆ ಎಂದು ದಲಿತ ಸಂಘಟನೆಗಳು ಆರೋಪಿಸಿವೆ

Dalit Organisations boycotts MLA Balakrishna rally

ತಿಪ್ಪಸಂದ್ರ ಹೋಬಳಿಯ ಕಾರ್ಯಕರ್ತರ ಸೇರ್ಪಡೆ ಮತ್ತು ಕಾಂಗ್ರೆಸ್ ಸಮಾವೇಶದ ಯಾವುದೇ ಪ್ಲೆಕ್ಸ್ ಹಾಗೂ ಬ್ಯಾನರ್‌ಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ರವರ ಭಾವಚಿತ್ರವನ್ನ ಹಾಕಿಲ್ಲ ಎಂದು ದಲಿತ ಸಂಘಟನೆಗಳು ಸಮಾವೇಶವನ್ನು ಬಹಿಷ್ಕಾರ ಮಾಡಿದ ಘಟನೆ ಮಾಗಡಿಯಲ್ಲಿ ನಡೆದಿದೆ.

ತಾಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ಜೆಡಿಎಸ್ ಬಂಡಾಯ ಶಾಸಕ ಹೆಚ್.ಸಿ.ಬಾಲಕೃಷ್ಣ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಕಾಂಗ್ರೆಸ್ ಸಮಾವೇಶದ ಬ್ಯಾನರ್‌ಗಳಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ರಾಜ್ಯ ನಾಯಕರ ಭಾವಚಿತ್ರಗಳನ್ನ ಹಾಕಿದ್ದಾರೆ ಅದರೆ ಕೆಪಿಸಿಸಿ ಅಧ್ಯಕ್ಷರ ಭಾವಚಿತ್ರವನ್ನ ಹಾಕದಿರುವುದಕ್ಕೆ ದಲಿತ ಸಂಘಟನೆಯ ಕಾರ್ಯಕರ್ತರು ಕಿಡಿಕಾರಿದ್ರು. ಈಗಲೇ ಬಾಲಕೃಷ್ಣ ದಲಿತರನ್ನ ದೂರವಿಡುವ ಕೆಲಸವನ್ನ ಮಾಡುತ್ತಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸಿದರು.

Dalit Organisations boycotts MLA Balakrishna rally

ಶಾಸಕರು ಇನ್ನು ಅಧಿಕೃತವಾಗಿ ಕಾಂಗ್ರೆಸ್ ಸೇರುವ ಮಾದಲೇ ಕೆಪಿಸಿಸಿ ಅಧ್ಯಕ್ಷರನ್ನು ಕಡೆಗಣಿಸಿದ್ದಾರೆ. ಕಾರ್ಯಕ್ರಮದಲ್ಲಿ ಬ್ಯಾನರ್ ಮತ್ತು ಪ್ಲೆಕ್ಸ್ ಗಳಲ್ಲಿ ಡಾ,ಪರಮೇಶ್ವರ್ ರವರ ಬಾವಚಿತ್ರ ಬಳಸದಿರುವುದು ದಲಿತ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಕಿಡಿಕಾರಿದರು.

Dalit Organisations boycotts MLA Balakrishna rally

ಚುನಾವಣೆ ಹತ್ತಿರವಿರುವ ಸಂದರ್ಭದಲ್ಲಿ ಶಾಸಕರ ವರ್ತನೆ ಕಾರ್ಯಕರ್ತರಲ್ಲಿ ಗೊಂದಲ ಮೂಡುತ್ತಿದೆ. ಈ ಬಗ್ಗೆ ಕೆಪಿಸಿಸಿಗೆ ದೂರು ನೀಡುವುದಾಗಿ ದಲಿತ ಮುಖಂಡರು ತಿಳಿಸಿದರು.

English summary
Alleging that Magadi MLA of Ramanagar district. HC Balakrishna avoiding banners of KPCC pRESIDENT Dr. Parameshwar photos, Dalit organisations have decided to boycott rally which will be held by the MLA.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X