• search
 • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋವಿಡ್-19 ನಿಭಾಯಿಸಲು ಡಿಸಿಎಂ ಅಶ್ವಥ್ ನಾರಾಯಣ್ ವಿಫಲ: ಕಾಂಗ್ರೆಸ್ ಆರೋಪ

By ರಾಮನಗರ ಪ್ರತಿನಿಧಿ
|

ರಾಮನಗರ, ಜುಲೈ 29: ರಾಮನಗರ ಜಿಲ್ಲೆಯಲ್ಲಿ ಮಿತಿ ಮೀರುತ್ತಿರುವ ಕೊರೊನಾ ಆರ್ಭಟವನ್ನು ನಿಯಂತ್ರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಮಾಜಿ ಶಾಸಕ ಎಚ್‌.ಸಿ ಬಾಲಕೃಷ್ಣ ಆರೋಪಿಸಿದ್ದಾರೆ.

   North Korea Kim Jong un ಯುದ್ಧದ ಬಗ್ಗೆ ಹೇಳಿದ್ದೇನೆ | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ರಾಮನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕರಾದ ಎಂಎಲ್ಸಿ ಎಸ್.ರವಿ ಹಾಗೂ ಮಾಗಡಿಯ ಮಾಜಿ ಶಾಸಕ ಎಚ್.ಸಿ ಬಾಲಕೃಷ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಹರಿಹಾಯ್ದರು.

   ರಾಜ್ಯ ಸರ್ಕಾರಕ್ಕೆ ಒಂದು ವರ್ಷ: ಕರಾಳ ದಿನ ಆಚರಿಸಿದ ವಾಟಾಳ್ ನಾಗರಾಜ್

   ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಉಡಾಫೆ, ಉದಾಸೀನದ ಮನುಷ್ಯ, ಜಿಲ್ಲೆಯ ಬಗ್ಗೆ ಅವರಿಗೆ ಕಾಳಜಿಯೇ ಇಲ್ಲ, ಇಂತಹವರನ್ನು ನಾವು ನೋಡೆ ಇಲ್ಲ, ಜಿಲ್ಲೆಯ ಪ್ರವಾಸ ಮಾಡುವ ಮನಸ್ಸು ಅವರಿಗಿಲ್ಲ ಎಂದು ಕಿಡಿಕಾರಿದರು.

   ಈವರೆಗೂ ಜಿಲ್ಲೆಯಲ್ಲಿ ಜನ ಮೆಚ್ಚುವ ಯಾವುದೇ ಕೆಲಸ ಅವರು ಮಾಡಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ಟೀಕಿಸಿದರು. ಇನ್ನು ಜಿಲ್ಲೆಯ ಜನರನ್ನು ಇನ್ನಿಲ್ಲದಂತೆ ಕಾಡುತ್ತಿರುವ ಕೋವಿಡ್-19 ವೈರಸ್ ಸೋಂಕಿತ ರೋಗಿಗಳ ಕಷ್ಟಗಳಿಗೆ ಸ್ಪಂದಿಸುವಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ಸಂಪೂರ್ಣ ವಿಫಲರಾಗಿದ್ದಾರೆ ಎಂದರು.

   RR ನಗರದ ಆಸ್ಪತ್ರೆಯಲ್ಲಿರುವ ಸೋಂಕಿತರ ಬಗ್ಗೆ ಕಾಳಜಿಯೇ ಇಲ್ಲ, ಇನ್ನು ನಗರದ ಕಂದಾಯ ಭವನದಲ್ಲಿನ ಕೋವಿಡ್-19 ರೆಫೆರಲ್ ಅಸ್ಪತ್ರೆಯಲ್ಲಿ ವ್ಯವಸ್ಥೆ ಸರಿಯಿಲ್ಲ. ಅಲ್ಲಿನ ರೋಗಿಗಳಿಗೆ ಮೂಲಭೂತ ಸೌಕರ್ಯವೇ ಇಲ್ಲ, ಉತ್ತಮವಾದ ಊಟ ಕೊಡಲಾಗಿಲ್ಲ. ಆದರೆ ಇವರಿಗೆ ಡಿಕೆಎಸ್ ಟ್ರಸ್ಟ್ ನಿಂದ ಸೋಂಕಿತರಿಗೆ ಉತ್ತಮ ಊಟ ಕೊಡಲಾಗುತ್ತಿದೆ ಎಂದು ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ಡಿಸಿಎಂ ಅಶ್ವಥ್ ನಾರಾಯಣ್ ವಿರುದ್ಧ ವಾಗ್ದಾಳಿ ನಡೆಸಿದರು.

   English summary
   Former MLA, HC Balakrishna, has accused the district Incharge minister and DCM Dr Ashwath Narayan for failing to control the coronavirus in Ramanagara district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X