ಮಂಚನಬೆಲೆ ಜಲಾಶಯಕ್ಕೆ ಆ.28ಕ್ಕೆ ಅಶ್ವಥ್ ನಾರಾಯಣ್ ಬಾಗಿನ ಸಮರ್ಪಣೆ

ರಾಮನಗರ, ಆಗಸ್ಟ್ 27: ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಂಚನಬೆಲೆ ಜಲಾಶಯವು ತುಂಬಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ಆ.28ರ ಶುಕ್ರವಾರ ಜಲಾಶಯಕ್ಕೆ ಬಾಗಿನ ಸಮರ್ಪಿಸಲಿದ್ದಾರೆ.

Recommended Video

      ಇವರು ಬಂದ್ರೆ ಎದುರಾಳಿ ಕಥೆ ಫಿನಿಷ್ | Oneindia Kannada

      ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರು ಹಮ್ಮಿಕೊಂಡಿರುವ ಪ್ರಥಮ ಬಾಗಿನ ಸಮರ್ಪಣೆ ಕಾರ್ಯಕ್ರಮ ಇದಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎಸ್ .ಅಶ್ವಥ್ ನಾರಾಯಣ್ ರವರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಾಥ್ ನೀಡಲಿದ್ದಾರೆ.

      Ramanagar: DCM Ashwath Narayan Will Offer Bagina To Manchanabele Dam On August 28

      ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕ ಎ. ಮಂಜುನಾಥ್ ಅವರು ಅಧ್ಯಕ್ಷತೆ ವಹಿಸುವರು. ರಾಮನಗರ ಜಿಲ್ಲಾ ಪಂಚಾಯತಿ ಅಧ್ಯಕ್ಷ ಎಚ್. ಬಸಪ್ಪ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯ ಡಿ.ಕೆ. ಸುರೇಶ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯ ಬಿ.ಎನ್. ಬಚ್ಚೇಗೌಡ, ವಿಧಾನಸಭೆ ಶಾಸಕ ಎಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ಶ್ರೀಮತಿ ಅನಿತಾ ಕುಮಾರಸ್ವಾಮಿ, ಡಾ. ಕೆ. ಶ್ರೀನಿವಾಸ ಮೂರ್ತಿ, ವಿಧಾನ ಪರಿಷತ್ ಶಾಸಕರಾದ ಎಸ್. ರವಿ, ಸಿ.ಎಂ. ಲಿಂಗಪ್ಪ, ವಿಧಾನ ಪರಿಷತ್ ಶಾಸಕರಾದ ಅ. ದೇವೇಗೌಡ, ಸಿ.ಪಿ. ಯೋಗೇಶ್ವರ ಸೇರಿದಂತೆ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+