ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ: ರೋಗಿಗಳೊಂದಿಗೆ ಡಿಸಿಎಂ ಅಶ್ವಥ್ ನಾರಾಯಣ ಸಂವಾದ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜೂನ್ 28: ರಾಮನಗರದ ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಅವರು ಕೋವಿಡ್ ರೋಗಿಗಳ ಜೊತೆ ವಿಡಿಯೋ ಸಂವಾದ ನಡೆಸಿ ಧೈರ್ಯ ತುಂಬಿದರು.

ಅಡ್ಮಿನ್ ಬ್ಲಾಕಿನಲ್ಲಿ ಕೂತು ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಬ್ಬ ಪುರುಷ ಮತ್ತು ಒಬ್ಬ ಮಹಿಳೆಯ ಜೊತೆ ಮಾತನಾಡಿದ ಅವರು, ""ರೋಗಕ್ಕೆ ಹೆದರಬೇಡಿ, ನಿಮಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗುವುದು, ಸರಕಾರ ನಿಮ್ಮೊಂದಿಗಿದೆ'' ಎಂದು ಭರವಸೆ ನೀಡಿದರು.

ರಾಮನಗರ: ಕೊರೊನಾ ವೈರಸ್ ಸೋಂಕು ಗೆದ್ದ 11 ಜನರಿಗೆ ಪುಷ್ಪವೃಷ್ಟಿರಾಮನಗರ: ಕೊರೊನಾ ವೈರಸ್ ಸೋಂಕು ಗೆದ್ದ 11 ಜನರಿಗೆ ಪುಷ್ಪವೃಷ್ಟಿ

ಕನಕಪುರದ ಸೋಂಕಿತ ಮಹಿಳೆಯು ಮಾತನಾಡಿ, ""ನಾನು 7 ತಿಂಗಳ ಗರ್ಭಿಣಿಯಾಗಿದ್ದು, ತಮಗಿಲ್ಲಿ ಉತ್ತಮವಾದ ಚಿಕಿತ್ಸೆ ದೊರೆಯುತ್ತಿದೆ. ವೈದ್ಯರು ಮತ್ತು ನರ್ಸ್ ಗಳು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆಂದು ಡಿಸಿಎಂ ಅವರಿಗೆ ತಿಳಿಸಿದರು. ಹಾಗೆಯೇ ಪುರುಷ ಸೋಂಕಿತನು ಕೂಡ ಚಿಕಿತ್ಸೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರಲ್ಲದೆ, ತಮ್ಮ ಆರೋಗ್ಯ ಸುಧಾರಿಸುತ್ತಿದೆ ಎಂದು ತಿಳಿಸಿದರು.

Ramanagara: DCM Ashwath Narayana Conversation With Coronavirus Infected

ಇದೊಂದು ಸೋಂಕಿನ ಕಾಯಿಲೆಯಾಗಿದ್ದು, ಆದರೆ ಗಂಭೀರವಾಗಿದೆ. ಯಾವುದೇ ಕಾರಣಕ್ಕೂ ಎದೆಗುಂದಬಾರದು. ವೈದ್ಯರು ಹೇಳುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಆಸ್ಪತ್ರೆಯಿಂದ ಬಿಡುಗಡೆಯಾದ ಮೇಲೆ ಹೆಚ್ಚು ಎಚ್ಚರಿಕೆಯಿಂದ ಇರಬೇಕು.

Ramanagara: DCM Ashwath Narayana Conversation With Coronavirus Infected

ಜನರಿಗೂ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಹಿತವಚನ ಹೇಳಿದರು.

English summary
DCM Dr. Ashwath Narayana had a video Conversation with Covid patients, In Dayananda Sagar Hospital, Ramanagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X