ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ: ಕೆಡಿಪಿ ಸಭೆಗೆ ಮುನ್ನ ಶ್ರೀರಾಮನ ದರ್ಶನ ಪಡೆದ ಡಿಸಿಎಂ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜೂನ್ 19: ಶತ ಶತಮಾನಗಳು ಕಳೆದರೂ ಶ್ರೀರಾಮನ ಮೇಲಿರುವ ಭಾರತೀಯರ ನಂಬಿಕೆ, ಭಕ್ತಿಯನ್ನು ಬದಲಾಯಿಸಲು ಸಾಧ್ಯವಿಲ್ಲ. ನಮ್ಮ ನರನಾಡಿಗಳಲ್ಲೂ ಆ ಸೀತಾರಾಮನೇ ತುಂಬಿಹೋಗಿದ್ದಾನೆ. ಪ್ರಸಕ್ತ ಕಾಲಘಟ್ಟದಲ್ಲಿ ನಾವು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೆ ರಾಮತತ್ವದಲ್ಲೇ ಪರಿಹಾರವಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವಥ್ ನಾರಾಯಣ ಅವರು ಪ್ರತಿಪಾದಿಸಿದರು.

Recommended Video

ಪಾಕಿಸ್ತಾನದ ಆರಂಭಿಕ ಆಟಗಾರನಿಗೆ ರೋಹಿತ್ ಶರ್ಮ ರೋಲ್ ಮಾಡೆಲ್ | Rohit Sharma | Oneindia Kannada

ರಾಮನಗರದಲ್ಲಿ ಶುಕ್ರವಾರ ಜಿಲ್ಲೆಯ ಮೊದಲ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸಮೀಪದ ರಾಮದೇವರ ಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಪಟ್ಟಾಭಿರಾಮನ ದರ್ಶನ ಪಡೆದ ನಂತರ ಮಾತನಾಡಿದ ಅವರು, ರಾಮನನ್ನು ನಾವೆಲ್ಲರೂ ಮತ್ತೆ ಮತ್ತೆ ಸ್ಮರಿಸುತ್ತೇವೆ, ನಿರಂತರವಾಗಿ ಪೂಜಿಸುತ್ತೇವೆ. ಭವಿಷ್ಯದಲ್ಲಿ ಇನ್ನೆಷ್ಟೇ ತಲೆಮಾರುಗಳು ಕಳೆದರೂ ಆ ಮರ್ಯಾದಾ ಪುರುಷೋತ್ತಮನ ಆದರ್ಶ, ಮೌಲ್ಯಗಳು ನಮ್ಮನ್ನು ಕೈಹಿಡಿದು ಸದಾ ನಡೆಸುತ್ತಲೇ ಇರುತ್ತವೆ ಎಂದು ಹೇಳಿದರು.

ಮೋದಿಗೆ ತಾಕತ್ತಿದ್ರೆ ಚೀನಾ ವಸ್ತುಗಳನ್ನು ಬ್ಯಾನ್ ಮಾಡಲಿ: ಡಿ.ಕೆ ಸುರೇಶ್ ಸವಾಲ್ಮೋದಿಗೆ ತಾಕತ್ತಿದ್ರೆ ಚೀನಾ ವಸ್ತುಗಳನ್ನು ಬ್ಯಾನ್ ಮಾಡಲಿ: ಡಿ.ಕೆ ಸುರೇಶ್ ಸವಾಲ್

ಅದೆಷ್ಟೋ ವರ್ಷಗಳಿಂದ ಇದ್ದ ಅಡ್ಡಿಗಳೆಲ್ಲ ನಿವಾರಣೆಯಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಬಿದ್ದ ಕೆಲ ದಿನಗಳಲ್ಲೇ, ಈ ರಾಮಗಿರಿಯಲ್ಲಿ ಪಟ್ಟಾಭಿರಾಮನ ದರ್ಶನ ಭಾಗ್ಯ ಸಿಕ್ಕಿದ್ದು ನನ್ನ ಪೂರ್ವಜನ್ಮದ ಫಲ. ಸಕಲ ಪ್ರಜೆಗಳ ಪಾಲಿನ ದೈವ ಈ ರಾಮ ಸನ್ನಿಧಿಯಿಂದ ನಾನು ನೇರವಾಗಿ ಕೆಡಿಪಿ ಸಭೆಗೆ ಹೋಗುತ್ತಿದ್ದೇನೆ. ಇಂದಿನಿಂದ ರಾಮನಗರ ಜಿಲ್ಲೆಯ ಅಭಿವೃದ್ಧಿಯಲ್ಲಿ ನವಶಕೆ ಆರಂಭವಾಗಲಿದೆ ಎಂದು ಡಿಸಿಎಂ ಹೇಳಿದರು.

Ramanagara: DCM Ashwath Narayana Who Received Srirama Darshan Before The KDP Meeting

ಜಾತಿ, ಧರ್ಮ ಬೇಧವಿಲ್ಲದೆ ಪ್ರತಿಯೊಬ್ಬರನ್ನು ಒಟ್ಟಿಗೆ ಕರೆದುಕೊಂಡು ಮುನ್ನಡೆಯುವುದು ನನ್ನ ಉದ್ದೇಶ. ರಾಮ ಹಾಕಿಕೊಟ್ಟ ಸನ್ಮಾರ್ಗದಲ್ಲಿಯೇ ಪ್ರಗತಿಯ ರಥಚಕ್ರಗಳು ಸಾಗಲಿವೆ. ಎಲ್ಲರ ಸಹಕಾರದಿಂದ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಸಾಧಿಸಬೇಕು ಎಂಬುದು ನನ್ನ ಇಚ್ಚೆಯಾಗಿದೆ. ಆ ಕಾರ್ಯಕ್ಕೆ ಈ ರಾಮ ಸನ್ನಿಧಿಯಿಂದಲೇ ಚಾಲನೆ ಸಿಕ್ಕಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ರಾಮನಗರ: ಚೀನಿ ವಸ್ತುಗಳನ್ನು ಮುರಿದು ಹಾಕಿ, ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿರಾಮನಗರ: ಚೀನಿ ವಸ್ತುಗಳನ್ನು ಮುರಿದು ಹಾಕಿ, ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಸುಮಾರು 400 ಮೆಟ್ಟಿಲುಗಳ ಎತ್ತರದ ರಾಮದೇವರ ಬೆಟ್ಟವನ್ನು ಡಿಸಿಎಂ ಅಶ್ವಥ್ ನಾರಾಯಣ ಅವರು ಎಲ್ಲಿಯೂ ನಿಲ್ಲದೇ ಕಾಲ್ನಡಿಗೆಯಲ್ಲಿಯೇ ಹತ್ತಿದರು. ಪುರಾಣ ಪ್ರಸಿದ್ಧವಾದ ಈ ತಾಣವನ್ನು ವೀಕ್ಷಿಸಿದರಲ್ಲದೆ, ಅಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದರು. ಬಳಿಕ ಬೆಟ್ಟದ ಮೇಲಿರುವ ಪಟ್ಟಾಭಿರಾಮಸ್ವಾಮಿ ಹಾಗೂ ಶಿವನಿಗೆ ಪೂಜೆ ಸಲ್ಲಿಸಿದರು.

Ramanagara: DCM Ashwath Narayana Who Received Srirama Darshan Before The KDP Meeting

ನಮ್ಮ ಪಾಲಿಗೆ ಈ ರಾಮಕ್ಷೇತ್ರ ಬಹಳ ವಿಶೇಷ. ಈ ಬೆಟ್ಟದಲ್ಲಿ ಶ್ರೀರಾಮಚಂದ್ರ, ಸೀತಾ ಸಮೇತರಾಗಿ 5 ರಿಂದ 6 ವರ್ಷ ತಂಗಿದ್ದರು. ಇಲ್ಲಿರುವ ಪಟ್ಟಾಭಿರಾಮ ದೇವರನ್ನು ವಾನರ ಅರಸ ಸುಗ್ರೀವನೇ ಸ್ಥಾಪಿಸಿದನೆಂದು ಹಾಗೂ ಇಲ್ಲಿರುವ ಶಿವಲಿಂಗವನ್ನು ಸಾಕ್ಷಾತ್ ಶ್ರೀರಾಮರೇ ಸ್ಥಾಪನೆ ಮಾಡಿದರೆಂದೂ ಪುರಾಣಗಳು ಹೇಳುತ್ತವೆ ಎಂದರು.

ರಾಮದೇವರ ಬೆಟ್ಟವು ರಣಹದ್ದು ಸಂರಕ್ಷಣಾ ಧಾಮವೂ ಆಗಿದೆ. ಹೀಗಾಗಿ ಸರ್ವರೀತಿಯಲ್ಲೂ ಈ ತಾಣವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು. ಕೆಡಿಪಿ ಸಭೆಯ ನಾಮಕರಣ ಸದಸ್ಯ ಎಂ.ರುದ್ರೇಶ ಹಾಜರಿದ್ದರು.

English summary
DCM Ashwath Narayana, who visited visited the nearby Ramadevara hill before attending the first KDP meeting in the Ramanagara district on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X