• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡಿಕೆ ಬ್ರದರ್ಸ್‌ಗೆ ಎಚ್ಚರಿಕೆ ಕೊಟ್ಟ ಡಿಸಿಎಂ ಅಶ್ವತ್ಥ ನಾರಾಯಣ್

By ರಾಮನಗರ ಪ್ರತಿನಿಧಿ
|

ರಾಮನಗರ, ಡಿಸೆಂಬರ್ 01: ಇಷ್ಟು ದಿನ ಅಭಿವೃದ್ಧಿ ಕೆಲಸಗಳು ಕೇವಲ ಕಾಗದದ ಮೇಲಿದ್ದವು. ಈಗ ಅನುಷ್ಠಾನ ಆಗಿ ಕಣ್ಣಿಗೆ ಕಾಣುತ್ತಿವೆ. ಇದಕ್ಕೆ ಕಾರಣ ದೇಶ ಮತ್ತು ರಾಜ್ಯದಲ್ಲಿ ಆಗಿರುವ ರಾಜಕೀಯ ಬದಲಾವಣೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಮನಗರವೂ ಸೇರಿದಂತೆ ರಾಜ್ಯದ ಉದ್ದಗಲಕ್ಕೂ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಜೆ.ಬ್ಯಾಡರಹಳ್ಳಿಯ ಶಾಲೆ ಮೈದಾನದಲ್ಲಿ ಮಂಗಳವಾರ ಬಿಜೆಪಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಎಪ್ಪತ್ತು ವರ್ಷಗಳಿಂದ ದೇಶವನ್ನು ಕಾಂಗ್ರೆಸ್ ಆಳಿತು. ರಾಜ್ಯದಲ್ಲಿಯೂ ಕಾಂಗ್ರೆಸ್‌, ಜೆಡಿಎಸ್ ಪಕ್ಷಗಳು ಆಳ್ವಿಕೆ ನಡೆಸಿದವು. ಆದರೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶೌಚಾಲಯ ಕಟ್ಟಲಿಕ್ಕೂ ಆಗಲಿಲ್ಲ. ಒಟ್ಟಾರೆ, ಲೆಕ್ಕ ತೆಗೆದುಕೊಂಡರೆ ಶೌಚಾಲಯ ನಿರ್ಮಾಣದಲ್ಲಿ ಶೇ.30ರಷ್ಟು ಗುರಿಯನ್ನು ಸಾಧಿಸಿರಲಿಲ್ಲ. ಈಗ ಶೇ. 100ರಷ್ಟು ಗುರಿ ಸಾಧನೆ ಆಗಿದೆ ಎಂದರು. ಮುಂದೆ ಓದಿ...

ಹಳ್ಳಿಹಕ್ಕಿ ಮಾತಿಗೆ ತಿರುಗೇಟು ನೀಡಿದ ಸಿ.ಪಿ.ಯೋಗೇಶ್ವರ್

"ಇದುವರೆಗೂ ನಡೆದ ಕುಟುಂಬ ರಾಜಕಾರಣ ಸಾಕು"

ಜಿಲ್ಲೆಯಲ್ಲಿ ಇದುವರೆಗೂ ನಡೆದ ಅಬ್ಬರದ ರಾಜಕೀಯ ಸಾಕು, ಕೌಟುಂಬಿಕ ರಾಜಕಾರಣ ಸಾಕು. ಅಭಿವೃದ್ಧಿಯನ್ನು ಮರೆತು ಸ್ವಾರ್ಥ ರಾಜಕಾರಣ ಮಾಡಿದ ಪಕ್ಷಗಳು ಸಾಕು. ದೇಶ, ರಾಜ್ಯದಲ್ಲಿ ಈಗ ಎಲ್ಲವೂ ಬದಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಬದಲಾವಣೆ ಬರಬೇಕು. ಈ ಚುನಾವಣೆಯಲ್ಲಿ ಶೇ.80ರಷ್ಟು ಅಭ್ಯರ್ಥಿಗಳು ಬಿಜೆಪಿಯಿಂದಲೇ ಗೆಲ್ಲಬೇಕು. ಆ ಮೂಲಕ ಗ್ರಾಮ ಸ್ವರಾಜ್ಯ ಕನಸನ್ನು ನನಸು ಮಾಡಬೇಕು ಎಂದು ಡಿಸಿಎಂ ಕಾರ್ಯಕರ್ತರಿಗೆ ಕರೆ ನೀಡಿದರು.

"ಕಾರ್ಯಕರ್ತರಿಗೆ ತೊಂದ್ರೆ ಕೊಟ್ಟರೆ ಸಹಿಸಲ್ಲ"

ಡಿಸಿಎಂ ಭಾಷಣದ ನಡುವೆಯೇ ಮಧ್ಯ ಪ್ರವೇಶಿಸಿದ ಪಕ್ಷದ ಕಾರ್ಯಕರ್ತರು, ಕನಕಪುರದಲ್ಲಿ ಹಾಗೂ ಜಿಲ್ಲೆಯ ಅನೇಕ ಕಡೆ ಡಿ.ಕೆ.ಶಿವಕುಮಾರ್‌ ಮತ್ತು ಡಿ.ಕೆ.ಸುರೇಶ್‌ ಅವರ ಬೆಂಬಲಿಗರಿಂದ ಕಿರುಕುಳ ಹೆಚ್ಚಾಗಿದೆ ಎಂದು ಗಮನ ಸೆಳೆದರು. ಈ ಮಾತಿಗೆ ಪ್ರತಿಕ್ರಿಯಿಸಿದ ಅಶ್ವತ್ಥನಾರಾಣ್, ಜಿಲ್ಲೆ ಯಾರೊಬ್ಬರ ಸ್ವತ್ತೂ ಅಲ್ಲ. ಯಾರಪ್ಪನ ಆಸ್ತಿಯೂ ಅಲ್ಲ. ನಿಮ್ಮ ಕೆಲಸ ನೀವು ಮಾಡಿ, ನಿಮ್ಮ ಕರ್ತವ್ಯವನ್ನು ನೀವು ರಾಜಿ ಇಲ್ಲದೆ ಮಾಡಿ. ನಿಮಗೆ ಯಾರಾದರೂ ಅಡ್ಡಿಪಡಿಸಿದರೆ ನಮ್ಮ ಗಮನಕ್ಕೆ ತನ್ನಿ. ಅಂಥವರಿಗೆ ಹೇಗೆ ಪಾಠ ಕಲಿಸಬೇಕು ಎಂಬುದು ನಮಗೆ ಗೊತ್ತಿದೆ ಎಂದರು.

ಸಿಎಂ ಯಡಿಯೂರಪ್ಪ ಹೇಳಿಕೆಗೆ ಯೋಗೇಶ್ವರ್ ಮಹತ್ವದ ಪ್ರತಿಕ್ರಿಯೆ!

 ಎಚ್ಚರಿಕೆ ಕೊಟ್ಟ ಅಶ್ವತ್ಥ ನಾರಾಯಣ್

ಎಚ್ಚರಿಕೆ ಕೊಟ್ಟ ಅಶ್ವತ್ಥ ನಾರಾಯಣ್

ಇನ್ನು ಮುಂದೆ ಜಿಲ್ಲೆಯಲ್ಲಾಗಲಿ ಅಥವಾ ರಾಜ್ಯದಲ್ಲಿಯೇ ಆಗಲಿ ದಬ್ಬಾಳಿಕೆ ಮಾಡಿ ರಾಜಕಾರಣ ಮಾಡುತ್ತೇವೆ ಎನ್ನಲಾಗದು. ಆ ಕಾಲ ಹೋಯಿತು. ಅಭಿವೃದ್ಧಿಯ ಆಧಾರದಲ್ಲಿ ಚುನಾವಣೆ ನಡೆಯಬೇಕು. ಇಲ್ಲವಾದರೆ, ರಾಜರಾಜೇಶ್ವರಿ ನಗರ ಹಾಗೂ ಶಿರಾದಲ್ಲಿ ಆದ ಗತಿಯೇ ಇಲ್ಲಿಯೂ ಆಗುತ್ತದೆ ಎಂದು ಕಾಂಗ್ರೆಸ್‌, ಜೆಡಿಎಸ್ ಹೆಸರು ಹೇಳದೆಯೇ ಎಚ್ಚರಿಕೆ ನೀಡಿದರು.

 ಕಾರ್ಯಕರ್ತರಿಗೆ ಧೈರ್ಯ ಹೇಳಿದ ಡಿಸಿಎಂ

ಕಾರ್ಯಕರ್ತರಿಗೆ ಧೈರ್ಯ ಹೇಳಿದ ಡಿಸಿಎಂ

ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಕಾನೂನು, ನಿಯಮ ಎನ್ನುವುದು ಎಲ್ಲರಿಗೂ ಒಂದೇ. ಅದನ್ನು ಮರೆತು ವರ್ತಿಸಿದರೆ ತಕ್ಕ ಪಾಠ ಕಲಿಸಲಾಗುವುದು. ಯಾರಿಗೂ ಪಕ್ಷದ ಕಾರ್ಯಕರ್ತರು ಹೆದರಬೇಕಾಗಿಲ್ಲ. ಧೈರ್ಯವಾಗಿ ಮುನ್ನುಗ್ಗಿ ಎಂದು ಕಾರ್ಯಕರ್ತರಿಗೆ ಧೈರ್ಯ ಹೇಳಿದರು. ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೀಶ್ವರ್, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿದರು. ವಿಧಾನ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಅ.ದೇವೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ ಮುಂತಾದವರು ಉಪಸ್ಥಿತರಿದ್ದರು.

English summary
DCM Ashwatha narayan warned dk brothers in bjp gram swaraj programme at channapatna,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X