ರಾಮನಗರ ಜಿಲ್ಲೆಗೆ ಗುಡ್‌ನ್ಯೂಸ್: ಶಾಶ್ವತ ಕುಡಿಯುವ ನೀರಿನ ಯೋಜನೆಗಳಿಗೆ ಡಿಸಿಎಂ ಚಾಲನೆ
ರಾಮನಗರ ಜಿಲ್ಲೆಯ ಜನರಿಗೆ ಡಿಸಿಎಂ ಡಿಕೆ ಶಿವಕುಮಾರ್ ಗುಡ್‌ನ್ಯೂಸ್ ನೀಡಿದ್ದಾರೆ. ರಾಮನಗರ ಜಿಲ್ಲೆಯ ನಾನಾ ಕಡೆಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ಭೂಮಿ ಪೂಜೆ ನೆರವೇರಿಸಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಸಮೀಪದ ಸತ್ತೇಗಾಲ ಕಾವೇರಿ ನದಿ ಅಣೆಕಟ್ಟಿನಿಂದ ರಾಮನಗರ ಜಿಲ್ಲೆಯ ಹಲವು ಕಡೆಗೆ ನಾನಾ ಕಡೆಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ಇಂದು ಚಾಲನೆ ಸಿಕ್ಕಿದೆ.
ರಾಮನಗರ ಜಿಲ್ಲೆಯಲ್ಲಿ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಸಲುವಾಗಿ ಸುಮಾರು 540 ಕೋಟಿ ರೂಪಾಯಿ ವೆಚ್ಚದಲ್ಲಿ, ಕಾವೇರಿ ನದಿ ಸತ್ತೇಗಾಲ ಸಮೀಪದ ಅಣೆಕಟ್ಟಿನಿಂದ ಗುರುತ್ವಾಕರ್ಷಣೆಯ ಮೂಲಕ ಇಗ್ಗಲೂರಿನಲ್ಲಿರುವ ಬ್ಯಾರೇಜ್‌ಗೆ ನೀರು ಹರಿಸಲಾಗುವುದು. ಈಗ ಇರುವ ಕೆರೆ ತುಂಬಿಸುವ ಯೋಜನೆಗಳಿಗೆ ನೀರಿನ ಲಭ್ಯತೆಯನ್ನು ಹೆಚ್ಚಿಸಲಾಗುವುದು. ಅಲ್ಲಿಂದ ನೀರನ್ನು ಮೇಲಕ್ಕೆತ್ತಿ ಮಂಚನಬೆಲೆ ಮತ್ತು ವೈ.ಜಿ. ಗುಡ್ಡ ಜಲಾಶಯಗಳಿಗೆ ಕುಡಿಯುವ ನೀರನ್ನು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಡಿಕೆ ಶಿವಕುಮಾರ್ ವಿವರಿಸಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಶ್ರೀಕ್ಷೇತ್ರ ಕೆಂಗಲ್ ಅಯ್ಯನಗುಡಿಯಲ್ಲಿ ಮೇ 15ರಿಂದ 18ರವರೆಗೆ ನಡೆಯಲಿರುವ ವಿಶ್ವ ಸಂರಕ್ಷಣ ಮಹಾಯಜ್ಞಕ್ಕೆ ದೇಗುಲದ ಅರ್ಚಕರು ಹಾಗೂ ಶಾಸಕರಾದ ಸಿ.ಪಿ.ಯೋಗೇಶ್ವರ್ ಅವರು ಡಿಕೆ ಶಿವಕುಮಾರ್ ಅವರನ್ನು ಆಹ್ವಾನಿಸಿದ್ದಾರೆ. ಲೋಕಕಲ್ಯಾಣಕ್ಕಾಗಿ ಕೈಗೊಂಡಿರುವ ಈ ಪುಣ್ಯದ ಕಾರ್ಯವು ಫಲಪ್ರದವಾಗಲಿ ಎಂದು ಶಿವಕುಮಾರ್ ಶುಭಕೋರಿದ್ದಾರೆ.
ಮೇ 11ಕ್ಕೆ ಯುವ ಕಾಂಗ್ರೆಸ್ ಸಮಾವೇಶ
ಇದೇ ಮೇ 11ರಂದು ರಾಮನಗರದಲ್ಲಿ ಬೃಹತ್ ಯುವ ಕಾಂಗ್ರೆಸ್ ಸಮಾವೇಶ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಡಿಕೆ ಸುರೇಶ್, ಯುವ ಕಾಂಗ್ರೆಸ್ ನಾಯಕತ್ವ, ದೇಶದ ಹಿತರಕ್ಷಣೆಗೆ ಮುಂದಾಳತ್ವ ಎಂದಿದ್ದಾರೆ. ನಮ್ಮ ಒಗ್ಗಟ್ಟು ಹಾಗೂ ಪಕ್ಷನಿಷ್ಠೆಯನ್ನು ಪ್ರಚುರಪಡಿಸಲು ಇದೊಂದು ಸದಾವಕಾಶ. ಈ ಕಾರ್ಯಕ್ರಮದಲ್ಲಿ ನಾನೂ ಹೆಮ್ಮೆಯಿಂದ ಪಾಲ್ಗೊಳ್ಳುತ್ತಿದ್ದೇನೆ. ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೆಲ್ಲಾ ಒಟ್ಟಾಗಿ ಬಂದು ಈ ಕಾರ್ಯಕ್ರಮ ಯಶಸ್ವಿಗೊಳಿಸೋಣ ಎಂದು ಕರೆ ನೀಡಿದ್ದಾರೆ.

ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ಜೀವಾಳ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮೂಲಕ ಪಕ್ಷಕ್ಕೆ ಶಕ್ತಿಯನ್ನು ತುಂಬಬೇಕು. ರಾಜ್ಯದಲ್ಲಿ ನಮ್ಮ ಸರ್ಕಾರ ಜನಪರ ಆಡಳಿತವನ್ನು ನೀಡುತ್ತಿದೆ. ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಬೇಕೆಂದು ತಿಳಿಸಿದ್ದಾರೆ.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications