ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ವೈರಸ್ ಭೀತಿಗೆ ರಾಮನಗರ ಜಿಲ್ಲಾ ಎಸ್ಪಿ ಕಚೇರಿ ಸೀಲ್ ಡೌನ್

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜುಲೈ 7: ಕೋಡಿಹಳ್ಳಿ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅವರಿಗೆ ಕೊರೊನಾ ವೈರಸ್ ಕಾಣಿಸಿಕೊಂಡ ಬೆನ್ನಲೇ ರಾಮನಗರ ಜಿಲ್ಲಾ ಪೊಲೀಸ್ ಭವನದ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುದ ರಾಮನಗರ ಎಸ್ಪಿ ಅನೂಪ್ ಶೆಟ್ಟಿ ಅವರು, ಜಿಲ್ಲಾ ಪೊಲೀಸ್ ಭವನದ ಸಿಬ್ಬಂದಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಚೇರಿಯನ್ನು ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಎರಡು ದಿನಗಳ ಕಾಲ ಕಚೇರಿಯನ್ನು ಮುಚ್ಚಲಾಗಿದೆ, ಸಾರ್ವಜನಿಕರು ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಕೊರೊನಾ ಸಾವಿನ ಕೂಪವಾಗುತ್ತಿರುವ ರಾಮನಗರವನ್ನು ರಕ್ಷಿಸಿ ಎಂದ ನೆಟ್ಟಿಗರುಕೊರೊನಾ ಸಾವಿನ ಕೂಪವಾಗುತ್ತಿರುವ ರಾಮನಗರವನ್ನು ರಕ್ಷಿಸಿ ಎಂದ ನೆಟ್ಟಿಗರು

ರಾಮನಗರ ಜಿಲ್ಲೆಯಲ್ಲಿ ಒಟ್ಟು 6 ಮಂದಿ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದ್ದು, ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್ಪಿ ಅನೂಪ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

Ramanagara District SP Office Sealdown For Coronavirus Fear

ಜಿಲ್ಲೆಯಲ್ಲಿ ಸೋಮವಾರ 29 ಕೋವಿಡ್ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 262 ಕ್ಕೆ ಏರಿಕೆಯಾಗಿದೆ. ಮಾಗಡಿಯಲ್ಲಿ-11, ರಾಮನಗರದಲ್ಲಿ-11, ಕನಕಪುರದಲ್ಲಿ- 4 ಹಾಗೂ ಚನ್ನಪಟ್ಟಣದಲ್ಲಿ-3 ಕೋವಿಡ್ ಸೋಂಕಿತ ಪ್ರಕರಣ ಪತ್ತೆಯಾಗಿವೆ. ಜಿಲ್ಲಾಡಳಿತವು ಎಲ್ಲ ಸೋಂಕಿತರನ್ನು ಚಿಕಿತ್ಸೆಗಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಿದೆ.

English summary
Coronavirus infecting Ramanagara District Police Station staff Against this backdrop, the district police superintendent's office has been sealdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X