ಕೆಪಿಸಿಸಿ ಅಧ್ಯಕ್ಷನಾಗಿ ಡಿಕೆಶಿ; ಹುಟ್ಟೂರು ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಸಂಭ್ರಮ

ರಾಮನಗರ, ಮಾರ್ಚ್ 11: ಟ್ರಬಲ್ ಶೂಟರ್ ಎಂದೇ ಹೆಸರಾದ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಗಾದಿ ಅಲಂಕರಿಸಿದ ಹಿನ್ನೆಲೆಯಲ್ಲಿ ಡಿಕೆಶಿ ಹುಟ್ಟೂರು ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ಡಿಕೆಶಿ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಸುದ್ದಿ ಹೊರಬಿದ್ದ ಬೆನ್ನಲ್ಲೇ ಡಿಕೆಶಿ ಹುಟ್ಟೂರು ದೊಡ್ಡಾಲಳ್ಳಿ ಗ್ರಾಮದಲ್ಲಿ ಡಿಕೆಶಿ ಅಭಿಮಾನಿಗಳು, ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು.

DK Shivakumar Appointed As New Kpcc President People Celebrated In Channapattana

ಡಿಕೆಶಿ ಸ್ವಕ್ಷೇತ್ರ ಕನಕಪುರದ ಚನ್ನಬಸಪ್ಪ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಚನ್ನಪಟ್ಟಣದ ಕಾವೇರಿ ಸರ್ಕಲ್ ನಲ್ಲಿ ಜಮಾವಣೆಗೊಂಡ ನೂರಾರು ಕಾರ್ಯಕರ್ತರು ಡಿಕೆಶಿಯವರಿಗೆ ಜೈಕಾರ ಹಾಕಿ, ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಪಟಾಕಿ ಸಿಡಿಸಿ ಸಿಹಿ ವಿತರಿಸಿದರು. ಜಿಲ್ಲಾ ಕೇಂದ್ರ ರಾಮನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ, ಡಿಕೆಶಿ ಭಾವಚಿತ್ರ ಹಿಡಿದು ಜೈಕಾರ ಹಾಕಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+