• search
 • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕನಕಪುರದಲ್ಲಿ ಅಘೋಷಿತ ಬಂದ್, ಬಿಗಿ ಪೊಲೀಸ್ ಬಂದೋಬಸ್ತ್

|
   D K Shivakumar : ಕನಕಪುರದಲ್ಲಿ ಅಘೋಷಿತ ಬಂದ್ | Oneindia Kannada

   ರಾಮನಗರ, ಸೆಪ್ಟೆಂಬರ್ 04 : ಮಾಜಿ ಸಚಿವ, ಕನಕಪುರ ಶಾಸಕ ಡಿ. ಕೆ. ಶಿವಕುಮಾರ್ ಬಂಧನವಾಗಿದೆ. ಸ್ವ ಕ್ಷೇತ್ರ ಕನಕಪುರದಲ್ಲಿ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.

   ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಡಿ. ಕೆ. ಶಿವಕುಮಾರ್‌ರನ್ನು ಬಂಧಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಇದನ್ನು ತೀವ್ರವಾಗಿ ಖಂಡಿಸುತ್ತಿದೆ.

   ಡಿಕೆ ಶಿವಕುಮಾರ್ ಬಂಧನ: ಮಿತ್ರನ ಬೆಂಬಲಕ್ಕೆ ನಿಂತ ಎಚ್‌ಡಿಕೆ ಏನಂದರು?

   ಡಿ. ಕೆ. ಶಿವಕುಮಾರ್ ತವರು ಕ್ಷೇತ್ರ ರಾಮನಗರ ಜಿಲ್ಲೆಯ ಕನಕಪುರದಲ್ಲಿ ಅವರ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಸಹ ಇದಕ್ಕೆ ಬೆಂಬಲ ಸೂಚಿಸಿದ್ದು, ಅಘೋಷಿತ ಬಂದ್ ವಾತಾವರಣ ನಿರ್ಮಾಣಗೊಂಡಿದೆ.

   LIVE Updates: ಡಿ.ಕೆ.ಶಿವಕುಮಾರ್ ಇಂದು ಕೋರ್ಟ್‌ಗೆ ಹಾಜರು

   ಬಸ್ ಸಂಚಾರ ಸ್ಥಗಿತ : ಕನಕಪುರದಲ್ಲಿ 1 ಸರ್ಕಾರಿ ಬಸ್‌ಗೆ ಕಲ್ಲು ತೂರಾಟ ನಡೆಸಲಾಗಿದೆ. ಆದ್ದರಿಂದ, ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಚಾಲಕರು ಮತ್ತು ನಿರ್ವಾಹಕರು ಬಸ್‌ಗಳನ್ನು ಡಿಪೋದಿಂದ ಹೊರಗೆ ತೆಗೆದಿಲ್ಲ.

   ಬಿಜೆಪಿ ಗೆಳೆಯರಿಗೆ ಅಭಿನಂದನೆ ಹೇಳಿದ ಡಿ.ಕೆ.ಶಿವಕುಮಾರ್

   ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಿನ್ನಲೆಯಲ್ಲಿ ಕನಕಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪರಿಸ್ಥಿತಿ ಬಗ್ಗೆ ಕ್ಷಣ-ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ.

   ರಾಮನಗರದ ಅಚಲು ಗ್ರಾಮದಲ್ಲಿ ಗಣೇಶ ಮೂರ್ತಿಯನ್ನು ರಸ್ತೆಯಲ್ಲಿ ತಂದಿಟ್ಟು ಡಿ. ಕೆ. ಶಿವಕುಮಾರ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕನಕಪುರದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

   English summary
   Kanakapura MLA and Karnataka Congress leader D.K.Shivakumar has been arrested by Enforcement Directorate (ED) in connection with a money laundering case. His supporters called for Kanakapura bandh on September 4, 2019.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X