Nikhil Kumaraswamy: ರಾಮನಗರದಲ್ಲಿ ಸೋತ ನಿಖಿಲ್ ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಡಿಕೆಶಿ
ಮೇ 13ರಂದು ಪ್ರಕಟವಾದ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. 223 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನಗಳನ್ನು ನೀಡಿ ಸುಭದ್ರ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.
ಇನ್ನು 2018ರ ಚುನಾವಣೆಯಲ್ಲಿ 104 ಸ್ಥಾನಗಳಲ್ಲಿ ಗೆಲುವು ಸಾಧಿಸಿ 2019ರಲ್ಲಿ ಆಪರೇಷನ್ ಕಮಲದ ಮೂಲಕ ಸರ್ಕಾರ ರಚಿಸಿದ್ದ ಬಿಜೆಪಿ ಪಕ್ಷವನ್ನು ರಾಜ್ಯದ ಮತದಾರರು ಸಂಪೂರ್ಣವಾಗಿ ತಿರಸ್ಕರಿಸಿ, ಈ ಬಾರಿ ಬಿಜೆಪಿ 66 ಸ್ಥಾನಗಳಲ್ಲಿ ಗೆಲ್ಲಿಸಿದ್ದಾರೆ.

ಇನ್ನು ಅತಂತ್ರ ವಿಧಾನಸಭೆಯ ನಿರೀಕ್ಷೆಯಲ್ಲಿದ್ದ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷ ಕೇವಲ 19 ಸ್ಥಾನಗಳಲ್ಲಿ ಗೆಲುವು ಕಂಡು ತೃಪ್ತಿಪಟ್ಟಿದೆ. ಗಂಗಾವತಿ, ಮೇಲುಕೋಟೆ, ಗೌರಿಬಿದನೂರು ಮತ್ತು ಹರಪನಹಳ್ಳಿ ಕ್ಷೇತ್ರಗಳಲ್ಲಿ 4 ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಈ ಬಾರಿಯ ವಿಧಾನಸಭೆ ಚುನಾವಣೆಯ ಅನಿರೀಕ್ಷಿತ ಫಲಿತಾಂಶಗಳಲ್ಲಿ ರಾಮನಗರ ಕ್ಷೇತ್ರದ ಫಲಿತಾಂಶವೂ ಒಂದು. ಗೆಲ್ಲುವ ನೆಚ್ಚಿನ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದ ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿಯನ್ನು ರಾಮನಗರ ಮತದಾರರು ಸೋಲಿಸಿದ್ದಾರೆ.
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರನಾಗಿರುವ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷರೂ ಹೌದು. 2018ರ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ತಾಯಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿ ಗೆದ್ದಿದ್ದರು. ಈ ಬಾರಿ ಮಗನಿಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ಧ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು 10,715 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಮೊದಲ ಬಾರಿಗೆ ವಿಧಾನಸಭೆ ಪ್ರವೇಶದ ಆಸೆಯಲ್ಲಿದ್ದ ನಿಖಿಲ್‌ಗೆ ಮತ್ತೆ ನಿರಾಸೆ ಮೂಡಿದೆ.
ನಿಖಿಲ್ ಕುಮಾರಸ್ವಾಮಿಗೆ ಸಮಾಧಾನ ಹೇಳಿದ ಡಿಕೆ ಶಿವಕುಮಾರ್
ರಾಮನಗರ ಕ್ಷೇತ್ರದಲ್ಲಿ ಸೋತ ನಿಖಿಲ್ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಸಿಎಂ ಆಕಾಂಕ್ಷಿ ಡಿ.ಕೆ. ಶಿವಕುಮಾರ್ ಕರೆ ಮಾಡಿ ಸಮಾಧಾನ ಹೇಳಿದ್ದಾರೆ. "ಎರಡು ಚುನಾವಣೆಗಳಲ್ಲಿ ಸೋತಿದ್ದೀಯಾ, ನಿನಗೆ ರಾಜಕೀಯ ಕುಟುಂಬದ ಹಿನ್ನೆಲೆ ಇದೆ. ಈ ಸೋಲಿನಿಂದ ಕಂಗೆಡಬೇಡ. ಕ್ಷೇತ್ರದಲ್ಲಿ ಓಡಾಡು, ಜನರೊಂದಿಗೆ ಇರು, ಭವಿಷ್ಯದಲ್ಲಿ ಉತ್ತಮ ಅವಕಾಶಗಳಿವೆ," ಎಂದಿದ್ದಾರೆ.

"ನನಗೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೆ ಈ ಮಟ್ಟಕ್ಕೆ ಬೆಳೆದಿದ್ದೇನೆ. ಆದರೆ ನೀನು ಎರಡು ಸೋಲಿನಿಂದ ಹತಾಶನಾಗಬೇಡ, ರಾಜಕೀಯದಲ್ಲಿ ಏಳು-ಬೀಳು ಸಹಜ. ನಿನಗೆ ರಾಜಕೀಯದಲ್ಲಿ ಭವಿಷ್ಯವಿದೆ," ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದ ನಿಖಿಲ್
2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅನಿರೀಕ್ಷಿತ ಸೋಲು ಕಂಡಿದ್ದರು. ಆದರೆ, ಈ ಬಾರಿ ರಾಮನಗರ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ಎಲ್ಲರಲ್ಲೂ ಇತ್ತು. ಆದರೆ, ಅಲ್ಲಿನ ಮತದಾರರು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮಣೆ ಹಾಕಿದ್ದಾರೆ.
ರಾಮನಗರ ಜನತೆಗೆ ಭಾವುಕ ಪತ್ರ ಬರೆದ ನಿಖಿಲ್ ಕುಮಾರಸ್ವಾಮಿ
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ರಾಮನಗರ ಜನತೆಗೆ ಭಾವುಕ ಪತ್ರ ಬರೆದಿದ್ದಾರೆ. "ನನ್ನನ್ನು ಅತ್ಯಂತ ಪ್ರೀತಿಯಿಂದ ಬೆಂಬಲಿಸಿ ಆಶೀರ್ವದಿಸಿದ ರಾಮನಗರ ಕ್ಷೇತ್ರದ ಮಹಾಜನತೆಗೆ ನನ್ನ ಶಿರಸಾಷ್ಟಾಂಗ ನಮನಗಳು. ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜೊತೆಯಲ್ಲೇ ಇರುತ್ತೇನೆ. ನಿಮಗಾಗಿ ಜೀವಿಸುತ್ತೇನೆ," ಎಂದು ಬರೆದಿದ್ದಾರೆ.
"ಸೋಲನ್ನು ಸಮಚಿತ್ತದಿಂದ ಸ್ವೀಕರಿಸಿ ಮುನ್ನಡೆಯುತ್ತೇನೆ. ಅದು ನಾನು ನನ್ನ ಪೂಜ್ಯ ತಾತ ಎಚ್.ಡಿ. ದೇವೇಗೌಡ ಸಾಹೇಬರಿಂದ, ತಂದೆ ಎಚ್.ಡಿ. ಕುಮಾರಸ್ವಾಮಿ ಅವರಿಂದ ಕಲಿತ ಪಾಠ. ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ. ಬಿದ್ದ ಮಗುವನ್ನು ಮೇಲೆತ್ತುವ ನಿಮ್ಮ ಪ್ರೀತಿ, ವಾತ್ಸಲ್ಯವನ್ನು ನಾನು ಬಲ್ಲೆ," ಎಂದಿದ್ದಾರೆ.
"ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷವನ್ನು ಹರಸಿದ ಸಾರ್ವಜನಿಕ ಬಂಧುಗಳನ್ನು ಇಲ್ಲಿ ಸ್ಮರಿಸುತ್ತೇನೆ. ಸೋಲಿನಿಂದ ಕಂಗೆಟ್ಟು ಜನರಿಂದ ದೂರ ಸರಿಯುವ ಜಾಯಮಾನ ನಮ್ಮದಲ್ಲ. ಸೋಲಿನಿಂದ ಪಾಠ ಕಲಿಯುತ್ತೇವೆ. ಮತ್ತೆ ಪುಟಿದೆದ್ದು ಬರುತ್ತೇವೆ. ಎಲ್ಲರಿಗೂ ಪ್ರಣಾಮಗಳು," ಎಂದು ಬರೆದುಕೊಂಡಿದ್ದಾರೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications