ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನಕಪುರದಲ್ಲಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಸಿಎಂಗೆ ಡಿಕೆಶಿ ಪತ್ರ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಡಿಸೆಂಬರ್ 7: ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವ ಆದೇಶವನ್ನು ಹಿಂತೆಗೆದುಕೊಂಡು ಕನಕಪುರದಲ್ಲೇ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮರು ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿದ್ದಾರೆ.

ಕಳೆದ ಕೈ-ದಳ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಬಿಜೆಪಿ ಸರ್ಕಾರ ಬಂದ ನಂತರ ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಿ ಶಂಕುಸ್ಥಾಪನೆ ಮಾಡಲಾಗಿದೆ. ಈ ಮೆಡಿಕಲ್ ಕಾಲೇಜು ವಿಚಾರವೇ ಉಪ ಚುನಾವಾಣೆಯಲ್ಲಿ ಆರೋಪ ಮತ್ತು ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು.

ಕನಕಪುರ, ಚಿಕ್ಕಬಳ್ಳಾಪುರ ಎರಡಕ್ಕೂ ಮೆಡಿಕಲ್ ಕಾಲೇಜು ಕೊಡಲಿ: ಎಚ್‌ಡಿಕೆ ಕನಕಪುರ, ಚಿಕ್ಕಬಳ್ಳಾಪುರ ಎರಡಕ್ಕೂ ಮೆಡಿಕಲ್ ಕಾಲೇಜು ಕೊಡಲಿ: ಎಚ್‌ಡಿಕೆ

DK Shivakumar Writes Letter To Cm Demanding Medical College In Kanakapura

ಉಪ ಚುನಾವಣೆ ಮುಗಿದ ತಕ್ಷಣವೇ ಸಕ್ರಿಯವಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಆಗ್ರಹಿಸಿ ಹೋರಾಟದ ಎಚ್ಚರಿಕೆಯ ಅಂಶವನ್ನೂ ಪ್ರಸ್ತಾಪಿಸಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಟ್ಟಿರುವುದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಕನಕಪುರಕ್ಕೆ ಮಂಜೂರಾಗಿದ್ದನ್ನು ರದ್ದುಮಾಡಿರುವುದಕ್ಕೆ ಆಕ್ಷೇಪವಿದೆ. ಕೂಡಲೇ ಕನಕಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರು ಮಾಡಬೇಕು" ಎಂದು ಕೇಳಿದ್ದಾರೆ.

ಅನರ್ಹ ಶಾಸಕರು ಬಿಜೆಪಿ ಸೇರಲು ಮುಹೂರ್ತ ನಿಗದಿ ಅನರ್ಹ ಶಾಸಕರು ಬಿಜೆಪಿ ಸೇರಲು ಮುಹೂರ್ತ ನಿಗದಿ

ಒಂದು ವೇಳೆ ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡದಿದ್ದರೆ ನನ್ನದೇ ಹಾದಿಯಲ್ಲಿ ಗಂಭೀರ ಹೋರಾಟ ಮಾಡುವೆ. ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದುಕೊಂಡಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

English summary
Former Minister DK Shivakumar has demanded that the Medical College in Kanakapura district by writing letter to cm Yediyurappa,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X