• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಗೂ ಮುನ್ನ ಕಬ್ಬಾಳಮ್ಮಗೆ ಪೂಜೆ ಸಲ್ಲಿಸಿದ ಡಿಕೆಶಿ ತಾಯಿ

By ರಾಮನಗರ ಪ್ರತಿನಿಧಿ
|

ರಾಮನಗರ, ಜನವರಿ 17: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೆಸರು ಅಂತಿಮಗೊಂಡಿದ್ದು, ಅಧಿಕೃತ ಆದೇಶವನ್ನು ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸಬೇಕಿದೆ.

ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮ ಅವರು ಇಂದು ಬೆಳಗ್ಗೆಯೇ ಕಬ್ಬಾಳಮ್ಮನ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಮಗ ರಾಜ್ಯ ಕಾಂಗ್ರೆಸ್ ಅಧ್ಯಕ್ಷನಾಗುವ ಕಾಲ ಸನ್ನಿಹಿತವಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೆಸರಲ್ಲಿ ವಿ‍ಶೇಷ ಪೂಜೆ ಮಾಡಿಸಿದ್ದಾರೆ.

ಡಿಕೆಶಿಗೆ ಕೆಪಿಸಿಸಿ ಯೋಗ, ಹೈಕಮಾಂಡ್ ಎದುರು ಸಿದ್ದು ಹೊಸರಾಗ!

ಹೈಕಮಾಂಡ್ ನಿಂದ ಅಧಿಕೃತ ಆದೇಶ ಹೊರಬೀಳುವ ಮುನ್ನವೇ ಶಿವಕುಮಾರ್ ತಾಯಿ ಗೌರಮ್ಮ ಕಬ್ಬಾಳಮ್ಮನ ಮೊರೆ ಹೋಗಿದ್ದಾರೆ.

ಬಳಿಕ ಕನಕಪುರದ ಕೆಂಕೆರಮ್ಮ ದೇವಾಲಯಕ್ಕೆ ತೆರಳಿದರು. ಐಟಿ ದಾಳಿ ಹಾಗೂ ಜೈಲಿನಿಂದ ಬಿಡುಗಡೆಯಾದ ನಂತರ ಡಿ.ಕೆ.ಶಿವಕುಮಾರ್ ಅವರ ಆರಾಧ್ಯ ದೈವೆ ಎನ್ನಲಾದ ಕಬ್ಬಾಳಮ್ಮಗೆ ಪೂಜೆ ಸಲ್ಲಿಸಿರುವುದು ಇದೇ ಮೊದಲು ಎನ್ನಲಾಗಿದೆ.

ಸಡನ್ U-Turn: ಡಿಕೆಶಿಗೆ ಸಿಕ್ಕಿತಾ ಕೆಪಿಸಿಸಿ ಪಟ್ಟ 'ಕೈ' ತಪ್ಪುವ ಸುಳಿವು?

ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ಹೈಕಮಾಂಡ್ ಒಲವು ತೋರಿದ್ದು, ಕಾರ್ಯಾಧ್ಯಕ್ಷರ ಹೆಸರು ಅಂತಿಮಗೊಂಡಿಲ್ಲವಾದ್ದರಿಂದ ಇನ್ನು ಅಧಿಕೃತವಾಗಿ ಘೋಷಿಸಿಲ್ಲ.

English summary
Former minister DK Shivakumars name for the Karnataka Pradesh Congress Committee (KPCC) chairman finalized.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X