ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಕಂಟ್ರೋಲ್ ಮಾಡಲು ಹೊಸ ಯೋಜನೆ

|
Google Oneindia Kannada News

ಬೆಂಗಳೂರು, ಆ. 10: ರಾಮನಗರ ಜಿಲ್ಲೆಗೆ ನಿಗದಿಯಾಗಿರುವ ಗುರಿಗೆ ಮಾತ್ರ ಕೋವಿಡ್ ಪರೀಕ್ಷೆಗೆ ಸೀಮಿತಗೊಳಿಸದೆ ಅವಶ್ಯಕತೆ ಇರುವ ಕಡೆ ಹೆಚ್ಚಿನ ಕೋವಿಡ್-19 ಪರೀಕ್ಷೆ ನಡೆಸುವಂತೆ ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.

Recommended Video

SSLC Results : Chikkaballapura ರಾಜ್ಯಕ್ಕೆ ಫರ್ಸ್ಟ್ | Oneindia Kannada

ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ ರಾಮನಗರ ಜಿಲ್ಲೆಯಲ್ಲಿ ILI ಹಾಗೂ SARI ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸಿ. ಜಿಲ್ಲೆಯಲ್ಲಿ ಮಧುಮೇಹ, ರಕ್ತದ ಒತ್ತಡ ಸೇರಿದಂತೆ ಇತರೆ ಕಾಯಿಲೆಯಿಂದ ಬಳಲುತ್ತಿರುವವರ ಬಗ್ಗೆ ಹೆಚ್ಚಿನ ನಿಗಾವಹಿಸಿ, ಪ್ರಾಥಮಿಕ ಹಂತದಲ್ಲೇ ಕೋವಿಡ್ ಕಾಯಿಲೆಯನ್ನು ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸಿ. ಕೋವಿಡ್ ಸಂಬಂಧಿಸಿದಂತೆ ಸಾರ್ವಜನಿಕರು ಸಂಪರ್ಕಿಸಲು ತೆರೆಯಲಾಗಿರುವ ಸಹಾಯವಾಣಿಯ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ರಾಮನಗರ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಕೊರೊನಾಗಿಂತ ಭಯದಿಂದ ಸತ್ತವರೇ ಹೆಚ್ಚು: ಡಾ. ಮಂಜುನಾಥ್ಕೊರೊನಾಗಿಂತ ಭಯದಿಂದ ಸತ್ತವರೇ ಹೆಚ್ಚು: ಡಾ. ಮಂಜುನಾಥ್

ಆ್ಯಂಟಿಜೆನ್ ಕಿಟ್

ಆ್ಯಂಟಿಜೆನ್ ಕಿಟ್

ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಅವರು ಮಾತನಾಡಿ ಜಿಲ್ಲೆಯಲ್ಲಿ 19,480 ಸ್ಯಾಂಪಲ್‌ಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 1,670 ಪಾಸಿಟಿವ್ ಕಂಡುಬಂದಿರುತ್ತದೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಕೋವಿಡ್ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲೆಗೆ 6,000 ಆ್ಯಂಟಿಜೆನ್ ಕಿಟ್ ನೀಡಲಾಗಿದ್ದು 5,462 ಬಳಸಿಕೊಳ್ಳಲಾಗಿದೆ. ಇದರಲ್ಲಿ 469 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ ಎಂದರು.

40 ಲಕ್ಷ ಮಾನವ ದಿನ: ಜಿಲ್ಲೆಯಲ್ಲಿರುವ 122 ಗ್ರಾಮ ಪಂಚಾಯಿತಿಗಳಿಂದ 2020ರ ಆಗಸ್ಟ್ 10ರ ಅಂತ್ಯಕ್ಕೆ ದಾಖಲೆಯಾದ 40 ಲಕ್ಷ ಮಾನವ ದಿನಗಳನ್ನು ನರೇಗಾ ಯೋಜನೆಯಡಿ ಸೃಜಿಸಲಾಗಿದೆ. ವಾರ್ಷಿಕವಾಗಿ ನೀಡಲಾಗಿರುವ 50 ಲಕ್ಷ ಮಾನವ ದಿನಗಳ ಗುರಿಯ ಪೈಕಿ ಈಗಾಗಲೇ 21 ಲಕ್ಷ ಮಾನವ ದಿನಗಳಿಗಿಂತ ಅಧಿಕ ಸಾಧನೆಯನ್ನು ಜಿಲ್ಲೆಯಲ್ಲಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಅವರು ಡಿಸಿಎಂಗೆ ಮಾಹಿತಿ ನೀಡಿದರು.

ಆಟದ ಮೈದಾನ

ಆಟದ ಮೈದಾನ

ಜಿಲ್ಲೆಯಲ್ಲಿ 1400 ಕ್ಕೂ ಹೆಚ್ಚು ಪ್ರಾಥಮಿಕ, ಪ್ರೌಢಶಾಲೆಗಳಿವೆ. ಈ ಪೈಕಿ ಆಯ್ದ 500 ಶಾಲೆಗಳನ್ನು ಗುರುತಿಸಿ ಅಲ್ಲಿ ಆಟದ ಮೈದಾನವನ್ನು ನಿರ್ಮಿಸಲಾಗುತ್ತಿದೆ. ಸುಮಾರು ಒಂದು ಎಕರೆಯಷ್ಟು ಕನಿಷ್ಠ ಜಾಗವನ್ನು ಹೊಂದಿರುವ ಶಾಲೆಗಳಲ್ಲಿ ಮಕ್ಕಳಿಗೆ ಆಟದ ಮೈದಾನವನ್ನು ನಿರ್ಮಿಸಲಾಗುತ್ತಿದೆ. ಇಲ್ಲಿ, ಓಟದ ಟ್ರ್ಯಾಕ್ , ಕಬಡ್ಡಿ, ವಾಲಿಬಾಲ್ ಮತ್ತು ಬಾಸ್ಕೆಟ್ ಬಾಲ್ ಕೋರ್ಟ್, ಹೈಜಂಪ್ ಮತ್ತು ಲಾಂಗ್ ಜಂಪ್ ಗೆ ಅನುಕೂಲವಾಗುವಂತೆ ಮರಳು ಗುಂಡಿಗಳ ನಿರ್ಮಾಣ ಸೇರಿದಂತೆ ಐದು ಇಲ್ಲವೆ ಆರು ಬಗೆಯ ಆಟಗಳನ್ನು ಮಕ್ಕಳು ಆಡಲು ಅನುವಾಗುವಂತೆ ಮೈದಾನವನ್ನು ನಿರ್ಮಿಸಲಾಗುವುದು ಎಂದು ಸಿಇಒ ಇಕ್ರಂ ಅವರು ಉಸ್ತುವಾರಿ ಸಚಿವ ಡಾ. ಅಶ್ವಥ್ ನಾರಾಯಣ ಅವರಿಗೆ ವಿವರಿಸಿದರು.

ಕೊರೊನಾ ವಾರಿಯರ್ಸ್‌ಗೆ ಶ್ರೀರಾಮುಲು ಗೌರವ ಸಲ್ಲಿಸಿದ್ದು ಹೇಗೆ?ಕೊರೊನಾ ವಾರಿಯರ್ಸ್‌ಗೆ ಶ್ರೀರಾಮುಲು ಗೌರವ ಸಲ್ಲಿಸಿದ್ದು ಹೇಗೆ?

'ಎ' ಗ್ರೇಡ್ ಸಾಧನೆ

'ಎ' ಗ್ರೇಡ್ ಸಾಧನೆ

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ನೂತನವಾಗಿ ರೂಪಿಸಿರುವ ಜಿಲ್ಲಾವಾರು ಶ್ರೇಯಾಂಕ ವ್ಯವಸ್ಥೆಯಲ್ಲಿ ರಾಮನಗರ ಜಿಲ್ಲೆ 'ಎ' ಗ್ರೇಡ್ ಸಾಧನೆ ಮಾಡಿದೆ. ಇದಕ್ಕಾಗಿ ಜಿಲ್ಲೆಗೆ ಹೆಸರು ತಂದುಕೊಟ್ಟ ವಿದ್ಯಾರ್ಥಿಗಳು, ಅಧಿಕಾರಿಗಳು ಮತ್ತು ಶಿಕ್ಷಕರನ್ನು ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಅಭಿನಂದಿಸಿದರು.

ಕೋವಿಡ್ ಕೇರ್ ಸೆಂಟರ್

ಕೋವಿಡ್ ಕೇರ್ ಸೆಂಟರ್

ರಾಮನಗರದಲ್ಲಿರುವ ಕೋವಿಡ್-19 ಆಸ್ಪತ್ರೆಯು ಬಹುತೇಕ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕುಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನೆರವಿನಿಂದ ಪ್ರತಿ ತಾಲ್ಲೂಕಿನಲ್ಲೂ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸಲಾಗುತ್ತಿದೆ. ಮೊದಲ ಹಂತದಲ್ಲಿ ದೊಡ್ಡ ಮರಳವಾಡಿಯಲ್ಲಿ 118 ಹಾಸಿಗೆಗಳ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ. ಇನ್ನು ಮುಂದೆ ಈ ಭಾಗದಲ್ಲಿನ ಕೋವಿಡ್ ಸೋಂಕಿತರಿಗೆ ಇಲ್ಲೇ ಚಿಕಿತ್ಸೆ ನೀಡಲಾಗುವುದು. ಅದೇ ರೀತಿ ಮಾಗಡಿಯಲ್ಲೂ 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಅನ್ನು ಇನ್ನೆರಡು ದಿನಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಮಾಹಿತಿ ನೀಡಿದರು.

ವರ್ಚುವಲ್ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ, ಡಿಎಚ್ಒ ಡಾ. ನಿರಂಜನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

English summary
District Incharge Minister Dr. Ashwath Narayana said that more Covid-19 tests should be conducted wherever necessary, without limiting the covid test to the target set for the Ramanagar district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X