ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ: ಅನಿತಾ ಕುಮಾರಸ್ವಾಮಿ
ರಾಮನಗರ, ಜುಲೈ 29: "ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 50 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೈಗಾರಿಕೆಗಳ ಸಿಎಸ್ಆರ್ ನಿಧಿಯಲ್ಲಿ ನಿರ್ಮಾಣ ಮಾಡಿಕೊಡಲು ಕೈಗಾರಿಕೋದ್ಯಮಿಗಳು ಒಪ್ಪಿದ್ದಾರೆಂದು,'' ಶಾಸಕಿ ಅನಿತಾ ಕುಮಾರಸ್ವಾಮಿ ತಿಳಿಸಿದರು.
ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾರೋಹಳ್ಳಿ ಕೈಗಾರಿಕಾ ವಲಯದಲ್ಲಿ ಕೈಗಾರಿಕೋದ್ಯಮಿಗಳ ಸಭೆ ನಡೆಸಿದ ನಂತರ ಮಾತನಾಡಿದ ಅವರು, "ಸಮಾಜಮುಖಿ ಕಾರ್ಯಕ್ರಮಗಳಿಗೆ ಸಿಎಸ್ಆರ್ ನಿಧಿಯನ್ನು ಕೈಗಾರಿಕೆಗಳು ನೀಡುತ್ತಿರುವುದು ಶ್ಲಾಘನೀಯ,'' ಎಂದು ಹೇಳಿದರು.
"ಸ್ಥಳೀಯ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ನೀಡುವಂತೆ ನಾನು ತಿಳಿಸಿದ್ದೇನೆ. ಕೈಗಾರಿಕೋದ್ಯಮಿಗಳು ಕೂಡ ಶೈಕ್ಷಣಿಕ ಅರ್ಹತೆ ಮೇರೆಗೆ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸುವುದಾಗಿ ಕೈಗಾರಿಕೋದ್ಯಮಿಗಳು ತಿಳಿಸಿದ್ದಾರೆಂದರು.

"ಶಾಲೆಗಳ ನಿರ್ಮಾಣ, ಆಸ್ಪತ್ರೆ ಕಟ್ಟಡಗಳ ನಿರ್ಮಾಣ ಸೇರಿದಂತೆ ಸಮಾಜಕ್ಕೆ ನೆರವಾಗುವಂತೆ ಕಾರ್ಯಕ್ರಮಗಳಿಗೆ ಸಿಎಸ್ಆರ್ ನಿಧಿಯನ್ನು ಬಳಸಲು ಕೈಗಾರಿಕೋದ್ಯಮಿಗಳಿಗೆ ತಿಳಿಸಿದ್ದೇನೆಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ತಿಳಿಸಿದರು.
"ಇಎಸ್ಐ ಆಸ್ಪತ್ರೆ ಮತ್ತು ಅಗ್ನಿಶಾಮಕ ದಳದ ಕಚೇರಿಯನ್ನು ಹಾರೋಹಳ್ಳಿ ವ್ಯಾಪ್ತಿಯಲ್ಲಿ ಆರಂಭಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು,'' ಎಂದು ಇದೇ ವೇಳೆ ಶಾಸಕಿ ಅನಿತಾ ಕುಮಾರಸ್ವಾಮಿ ಭರವಸೆ ನೀಡಿದರು.












Click it and Unblock the Notifications