Bengaluru-Mysuru Expressway: ವಾಹನ ಸವಾರರಿಗೆ ಅರಣ್ಯ ಇಲಾಖೆಯಿಂದ ಮಹತ್ವದ ಸೂಚನೆ, ಇಲ್ಲಿದೆ ವಿವರ
ರಾಮನಗರ, ಮೇ, 03: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇ ಆದಾಗಿನಿಂದ ಇಲ್ಲಿ ಅಪಘಾತಗಳ ಸಂಖ್ಯೆಯೂ ಹೆಚ್ಚಾಗಿದೆ. ಸರಣಿ ಅಪಘಾತಗಳಾದರೂ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎನ್ನುವ ಕೂಗುಗಳು ಕೂಡ ಎದ್ದಿದ್ದವು. ಮತ್ತೊಂದೆಡೆ ಇದೀಗ ಇಲ್ಲಿ ವನ್ಯಜೀವಿಗಳು ದಾಟುವುದರಿಂದ ವಾಹನಗಳನ್ನು ನಿಧಾನವಾಗಿ ಚಲಿಸಿ ಎಂದು ವಾಹನ ಸವಾರರಿಗೆ ಅರಣ್ಯ ಇಲಾಖೆ ಸೂಚನೆ ನೀಡಿದೆ.
ಎಕ್ಸ್‌ಪ್ರೆಸ್ ವೇ ಸುತ್ತಲೂ 6 ಅಡಿ ಎತ್ತರದ ಫೆನ್ಸಿಂಗ್ ಅಳವಡಿಸಲಾಗಿದ್ದು, ಇಡೀ ರಸ್ತೆಯನ್ನು ಒಂದು ಕಡೆಯಿಂದ ಮತ್ತೊಂದು ಕಡೆಯಿಂದ ಯಾರೊಬ್ಬರೂ ದಾಟಲು ಸಾಧ್ಯ ಇಲ್ಲದಂತಾಗಿದೆ. ಹೀಗೆ ಇದ್ದರೂ ಕೂಡ ಪ್ರಾದೇಶಿಕ ಅರಣ್ಯ ಇಲಾಖೆಯಿಂದ ವಾಹಣಗಳನ್ನು ನಿಧಾನವಾಗಿ ಚಲಿಸಿ, ವನ್ಯಜೀವಿಗಳು ರಸ್ತೆ ದಾಟುತ್ತಿವೆ ಎಂದು ಅಲ್ಲಲ್ಲಿ ಸೂಚನ ಫಲಕಗಳನ್ನು ಹಾಕಿರುವುದು ವಿಪರ್ಯಾಸದ ಸಂಗತಿಯಾಗಿದೆ.

ಈ ಹಿಂದೆ ರಾಮದೇವರ ಬೆಟ್ಟದ ಅರಣ್ಯದಂಚಿಗೆ ಸೇರಿದ ಎಕ್ಸ್‌ಪ್ರೆಸ್ ವೇ ಬಳಿ ಎರಡು ಚಿರತೆಗಳು ಫೆನ್ಸಿಂಗ್ ದಾಟಿ ಹೆದ್ದಾರಿಗೆ ಬಂದಿದ್ದವು. ಇದನ್ನು ಹೊರತುಪಡಿಸಿದರೆ ಯಾವುದೇ ರೀತಿಯ ಇಂತಹ ಘಟನೆಗಳು ಸಂಭವಿಸಿಲ್ಲ. ಆದರೆ, ರಸ್ತೆ ಅಪಘಾತಗಳು ಸಂಭವಿಸಿ ಇಲ್ಲಿ ಹಲವರು ದುರ್ಮಣ ಹೊಂದಿದ್ದಾರೆ. ಇದೀಗ ರಸ್ತೆಯಲ್ಲಿ ವನ್ಯಜೀವಿಗಳ ರಕ್ಷಣೆಗಾಗಿ ಇಂತಹ ಸೂಚನಾ ಫಲಕಗಳನ್ನು ಹಾಕಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಇದಕ್ಕೂ ಮೊದಲು ಅಂದರೆ ಬೆಂಗಳೂರು-ಮೈಸೂರು ಹೆದ್ದಾರಿಯ ಚತುಷ್ಪಥ ರಸ್ತೆಯಲ್ಲಿ ಎಲ್ಲಿಯೂ ಇಂತಹ ಸೂಚನಾ ಫಲಕಗಳನ್ನು ಅಳವಡಿಸಿರಲಿಲ್ಲ. ಆಗ ಇಲ್ಲಿ ಕೆಲ ಚಿರತೆಗಳು ಅಪಘಾತಕ್ಕೊಳಗಾಗಿ ಮೃತಪಟ್ಟ ಉದಾಹರಣೆಗಳು ಇವೆ. ಜೊತೆಗೆ ಅರಣ್ಯ ಪ್ರದೇಶದ ನಡುವೆಯೇ ರಸ್ತೆ ಹಾದು ಹೋಗಿತ್ತು. ಆದರೆ, ಎಕ್ಸ್‌ಪ್ರೆಸ್‌ವೇ ನಿರ್ಮಾಣದ ವೇಳೆ ಆನೆ ಕಾರಿಡಾರ್‌ಗಾಗಿ ಅಂಡರ್‌ಪಾಸ್ ನಿರ್ಮಿಸಲಾಗಿದೆ. ಜನರೇ ದಾಟಲು ಸಾಧ್ಯವಾಗದ ಎಕ್ಸ್‌ಪ್ರೆಸ್‌ವೇ ರಸ್ತೆಯ ಪಕ್ಕದಲ್ಲಿ ಪ್ರಾಣಿಗಳಿಗಾಗಿ ಸೂಚನಾ ಫಳಕಗಳನ್ನು ಅಳವಡಿಸಿರುವುದು ವಿಶೇಷವಾಗಿದೆ.
ಇನ್ನು ರಾಮನಗರದ ಮಾಯಗಾನಹಳ್ಳಿ ಮುಂದೆ ಆನೆ ಸೇರಿದಂತೆ ವನ್ಯಜೀವಿಗಳು ರಸ್ತೆ ದಾಟಲು ಓವರ್‌ಪಾಸ್, ಅಂಡರ್ ಪಾಸ್ ನೀಡಲಾಗಿದೆ. ಹೀಗಿದ್ದರೂ ಸಹ ಹೆದ್ದಾರಿಯ ಪಕ್ಕದಲ್ಲಿ ವಾಹನ ಸವಾರರಿಗೆ ವನ್ಯಜೀವಿಗಳಿವೆ, ನಿಧಾನವಾಗಿ ಚಲಿಸಿ ಎಂದು ಸೂಚನ ಫಲಕ ಹಾಕಿರುವುದು ವಿಪರ್ಯಾಸವಾಗಿದೆ.
ಸೂಚನಾ ಫಲಕ ಅಳವಡಿಕೆ ಸ್ಥಳಗಳು
ರಾಮನಗರ ಜಿಲ್ಲೆಯ ಕೊಂಕಣಿದೊಡ್ಡಿ, ಮಾಯಗಾನಹಳ್ಳಿ, ಕೆಂಪನಹಳ್ಳಿ, ಕೆಂಪೇಗೌಡನದೊಡ್ಡಿ ಸೇರಿ ಆಯಕಟ್ಟಿನ ಪ್ರದೇಶಗಳಲ್ಲಿ ಪ್ರಾದೇಶಿಕ ಅರಣ್ಯ ಇಲಾಖೆ ಹೆಸರಿನಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಅರಣ್ಯ ಇಲಾಖೆಗೆ ಈ ಬಗ್ಗೆ ಕೇಳಿದರೆ, ಈ ಹಿಂದೆ ಚಿರತೆಗಳು ಮೃತಪಟ್ಟ ಕಾರಣದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಹೇಳುತ್ತಿದೆ.
ಹಂದಿಗುಂದಿ ಅರಣ್ಯದಿಂದ ಕರಡಿ, ಹಂದಿ, ಆನೆಗಳ ಸಂಚಾರ ಇದೆ. ನಮ್ಮ ಲಿಟಿಗೇಷನ್ ಪ್ಲ್ಯಾನ್ ಅಪ್ರೂವಲ್ ಆದ ಬಳಿಕ ವನ್ಯಜೀವಿಗಳು ರಸ್ತೆ ದಾಟಲು ಅಂಡರ್ ಪಾಸ್, ಬೈಪಾಸ್ ನೀಡಿದ್ದೇವೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೇಳಿದೆ. ಈ ಹಿಂದೆ ಚಿರತೆಗಳು ಮೃತಪಟ್ಟ ಕಾರಣಕ್ಕೆ ಹೀಗೆ ಬೋರ್ಡ್‌ಗಳನ್ನು ಅಳವಡಿಸಿದ್ದೇವೆ. ವಾಹನ ಸವಾರರು ವನ್ಯಜೀವಿ ಸ್ನೇಹಿಯಾಗಿ ನಡೆದುಕೊಳ್ಳಲಿ ಎಂಬುದು ನಮ್ಮ ಉದ್ದೇಶ ಆಗಿದೆ ಎಂದು ಡಿಸಿಎಫ್ ದೇವರಾಜ್ ತಿಳಿಸಿದ್ದಾರೆ.
ಅಪಘಾತಗಳ ವಿವರ ಇಲ್ಲಿದೆ
ಇನ್ನು ಮೊನ್ನೆಯಷ್ಟೇ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದರು. ಹಾಗೆಯೇ ಉದ್ಘಾಟನೆಗೂ ಮುನ್ನವೇ ಈ ಹೆದ್ದಾರಿಯಲ್ಲಿ ಹಲವು ಅಪಘಾತಗಳು ಸಂಭವಿಸಿರುವ ಬಗ್ಗೆ ವರದಿಯಾಗಿದ್ದವು. ಅಪಘಾತದಲ್ಲಿ ಸಾವು, ನೋವುಗಳು ಸಂಭವಿಸಿರುವ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ವಾಹನ ಸಂಚಾರ ಆರಂಭವಾಗಿ ಆರು ತಿಂಗಳಿನೊಳಗೆ ಅಪಘಾತಗಳ ಸಂಖ್ಯೆ ಏರಿಕೆ ಆಗಿದೆ. ಒಟ್ಟು 84ಕ್ಕೂ ಹೆಚ್ಚು ಮಂದಿ ಸಾವನ್ನಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 2022ರ ಸೆಪ್ಟೆಂಬರ್‌ನಿಂದ ನೂತನ ಹೆದ್ದಾರಿಯಲ್ಲಿ ವಾಹನ ಸಂಚಾರ ಆರಂಭವಾಗಿದ್ದು, ಅಲ್ಲಿಂದ ಇಲ್ಲಿಯವರೆಗೂ 335ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಎಕ್ಸ್‌ಪ್ರೆಸ್ ವೇ ಕಾಮಗಾರಿ ಅಂತಿಮ ಹಂತದ ಡಿಸೆಂಬರ್ ಮತ್ತು ಜನವರಿ ತಿಂಗಳಿನಲ್ಲಿ ಹೆಚ್ಚು ಅಪಘಾತಗಳು ಸಂಭವಿಸಿವೆ ಎನ್ನುವ ಮಾಹಿತಿ ದೊರೆತಿದೆ.
ಕಂಬಳಗೋಡಿನಿಂದ ನಿಡಘಟ್ಟದವರೆಗಿನ ರಾಮನಗರ ಜಿಲ್ಲೆ ವ್ಯಾಪ್ತಿಯ ಹೆದ್ದಾರಿಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ 110ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 41ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೆಯೇ 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 51 ಕಿಲೋ ಮೀಟರ್‌ನಷ್ಟು ಈ ಹೆದ್ದಾರಿ ಹಾದುಹೋಗುತ್ತದೆ. ಬಿಡದಿ, ರಾಮನಗರ-ಚನ್ನಪಟ್ಟಣ ಬೈಪಾಸ್‌ಗಳಲ್ಲಿ ವಾಹನಗಳ ಸಂಚಾರ ತುಂಬಾ ವೇಗವಾಗಿರುತ್ತದೆ.
ಗಂಟೆಗೆ 120ರಿಂದ 140 ಕಿಲೋ ಮೀಟರ್ ವೇಗದಲ್ಲಿ ವಾಹನಗಳು ಸಂಚರಿಸುತ್ತವೆ. ಅಲ್ಲದೇ ಸರ್ವೀಸ್ ರಸ್ತೆಗಳಲ್ಲೂ ಸಹ ವಾಹನಗಳ ಸಂಚಾರ ಹೆಚ್ಚಾಗುತ್ತದೆ ಇದೆ. ಇನ್ನು ಸಕ್ಕರೆ ನಾಡು ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ 225 ಅಪಘಾತ ಸಂಭವಿಸಿದ್ದು, 43 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲಾ ವ್ಯಾಪ್ತಿಯ ಲಕ್ಷ್ಮೀಪುರ ಗೇಟ್‌ನಿಂದ ಮಣಿಪಾಲ್ ಆಸ್ಪತ್ರೆವರೆಗೆ 5 ಕಿಲೋ ಮೀಟರ್ ವ್ಯಾಪ್ತಿಯ ಹೆದ್ದಾರಿಯಲ್ಲಿ 6 ತಿಂಗಳಿಂದ 30 ಅಪಘಾತ ಪ್ರಕರಣಗಳು ವರದಿಯಾಗಿವೆ. ಹಾಗೆಯೇ 8 ಜನ ಮೃತಪಟ್ಟಿದ್ದಾರೆ.
ಡಿಸೆಂಬರ್ ತಿಂಗಳಿನಲ್ಲಿ ಸಂಭವಿಸಿದ 40 ಅಪಘಾತಗಳಲ್ಲಿ 9 ಮಂದಿ ಮೃತಪಟ್ಟಿದ್ದರೆ, ಜನವರಿ ತಿಂಗಳಿನಲ್ಲಿ ನಡೆದ 55 ಅಪಘಾತಗಳಲ್ಲಿ 10 ಜನರನ್ನು ಜವರಾಯ ಬಲಿ ತೆಗೆದುಕೊಂಡಿದ್ದಾನೆ. ಇನ್ನು ಎರಡು ತಿಂಗಳಿನಿಂದ ಈಚೆಗೆ 150ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications