ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಸಿಬಿ ಪೊಲೀಸರ ವಶದಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಅಕ್ಟೋಬರ್ 6: ಡ್ರಗ್ಸ್ ಪೆಡ್ಲರ್ ಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ದಿ.ಮುತ್ತಪ್ಪ ರೈ ಮಗ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಹೆಚ್ಚಿನ ವಿಚಾರಣೆಗೆಂದು ರಿಕ್ಕಿ ರೈನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Recommended Video

Muttappa Rai ಪುತ್ರ Ricky Rai ಮನೆ ಮೇಲೆ CCB ದಾಳಿ | Oneindia kannada

ಸ್ಯಾಂಡಲ್​ವುಡ್​ ಡ್ರಗ್ ಕೇಸ್​ನಲ್ಲಿ ಬಂಧಿತರಾಗಿರುವ ಡ್ರಗ್ ಪೆಡ್ಲರ್​ಗಳ ಜೊತೆ ಸಂಪರ್ಕ ಹೊಂದಿದ್ದ ಮತ್ತು ಡ್ರಗ್ ಕೇಸ್​ನಲ್ಲಿ ತಲೆ ಮರೆಸಿಕೊಂಡಿರುವ ಆದಿತ್ಯ ಆಳ್ವ ಜೊತೆ ನಿಕಟ ಒಡನಾಟ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಸಿಸಿಬಿ ದಾಳಿ ಮಾಡಿದೆ. ರಾಮನಗರ ಬಿಡದಿಯ ಮನೆಯಲ್ಲಿ ಎಸಿಬಿ ವೇಣುಗೋಪಾಲ್ ನೇತೃತ್ವದಲ್ಲಿ ರೇಡ್ ಮಾಡಲಾಗಿತ್ತು. ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವಾ ಜೊತೆ ರಿಕ್ಕಿ ರೈ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ಮುತ್ತಪ್ಪ ರೈ ಪುತ್ರನಿಗೆ CCB ನೋಟೀಸ್; ಬಿಡದಿ ಮನೆ ಮೇಲೆ ದಾಳಿಮುತ್ತಪ್ಪ ರೈ ಪುತ್ರನಿಗೆ CCB ನೋಟೀಸ್; ಬಿಡದಿ ಮನೆ ಮೇಲೆ ದಾಳಿ

ಬಂಧನಕ್ಕೆ ಪಡೆದಿರುವ ರಿಕ್ಕಿ ರೈನನ್ನು ಪೊಲೀಸರು ಮೈಸೂರಿನ ಮಾರ್ಗವಾಗಿ ಕರೆದುಕೊಂಡು ಹೋಗುತ್ತಿದ್ದಾರೆ. ಬಿಡದಿಯಲ್ಲಿ ಇವರ ತೋಟದ ಮನೆ ಇದ್ದು, ತೋಟದ ಮನೆಯಲ್ಲಿ ಶೋಧ ಕಾರ್ಯ ನಡೆಸಲು ಪೊಲೀಸರು ಕರೆದುಕೊಂಡು ಹೋಗುತ್ತಿರುವುದಾಗಿ ತಿಳಿದುಬಂದಿದೆ.

Drug Case: CCB Arrested Muthappa Rais Son Ricky Rai

ಮುತ್ತಪ್ಪ ರೈಗೆ ಸೇರಿದ ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

English summary
CCB arrested muttappa rai son ricky rai in allegation regarding drug peddling case
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X