ರಾಮನಗರ ಜಿಲ್ಲಾ ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ: ಕೈದಿಗಳ ಬಳಿ ಮೊಬೈಲ್, ಸಿಗರೇಟ್, ಗಾಂಜಾ, ತಂಬಾಕು ಪತ್ತೆ
ರಾಮನಗರ ಜಿಲ್ಲಾ ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದು, ಜೈಲಿನ ಕೈದಿಗಳ ಬಳಿ ವಿವಿಧ ನಿಷೇಧಿತ ವಸ್ತುಗಳಿಗಾಗಿ ತಪಾಸಣೆ ಕಾರ್ಯವನ್ನು ಮುಂದುವರೆಸಿದ್ದಾರೆ.
ರಾಮನಗರ, ಮಾರ್ಚ್, 19: ಜಿಲ್ಲಾ ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದು, ಜೈಲಿನ ಕೈದಿಗಳ ಬಳಿ ವಿವಿಧ ನಿಷೇಧಿತ ವಸ್ತುಗಳಿಗಾಗಿ ತಪಾಸಣೆ ಕಾರ್ಯವನ್ನು ಮುಂದುವರೆಸಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿಯಿರುವ ಪೊಲೀಸರ ತಂಡ ಇಂದು ಬೆಳಗ್ಗೆ ಸುಮಾರು 6 ಗಂಟೆಯಿಂದ ಸತತವಾಗಿ ತಪಾಸಣೆ ನಡೆಸಿದ್ದಾರೆ.
ಜಿಲ್ಲಾ ಕಾರಾಗೃಹದಲ್ಲಿರುವ ಕೈದಿಗಳ ಬಳಿ ಮೊಬೈಲ್, ಗುಟ್ಕಾ, ಬೀಡಿ, ಸಿಗರೇಟ್, ಸಿಮ್ ಕಾರ್ಡ್, ಹಣ, ಚಾಕು ಸೇರಿದಂತೆ ಹಲವು ನಿರ್ಬಂಧಿತ ವಸ್ತುಗಳು ಇಲ್ಲಿನ ಸಿಬ್ಬಂದಿಗಳ ಸಹಕಾರದಿಂದ ಜೈಲಿನ ಒಳಗೆ ಬಳಕೆಯಾಗುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಆದೇಶದ ಮೇರೆಗೆ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಒಂದು ವರ್ಷದಿಂದ ಸತತ ದಾಳಿ
ಕಳೆದ ಒಂದು ವರ್ಷದಿಂದ ಸತತವಾಗಿ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ದಾಳಿ ಮಾಡುತ್ತಿದ್ದು, ಪ್ರತಿ ಬಾರಿ ದಾಳಿ ನಡೆಸಿದ ಸಮಯದಲ್ಲೂ ಕೈದಿಗಳ ಬಳಿ ಮೊಬೈಲ್, ಸಿಗರೇಟ್, ಗಾಂಜಾ, ತಂಬಾಕು ಪದಾರ್ಥಗಳು ಪತ್ತಯಾಗಿವೆ. ನಿರ್ಬಂಧಿತ ವಸ್ತುಗಳು ಜೈಲು ಸಿಬ್ಬಂದಿಗಳ ಸಹಕಾರದಿಂದಲೇ ಜೈಲಿನ ಒಳಗೆ ಪ್ರವೇಶ ಮಾಡುತ್ತಿವೆ ಎನ್ನುವ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿದೆ.
ಕೊಲೆ ಆರೋಪಿಯ ಹುಟ್ಟುಹಬ್ಬ ಆಚರಣೆ
ಕೊಲೆ ಕೇಸ್ ಒಂದರಲ್ಲಿ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದ ಆರೋಪಿ ತನ್ನ ಸಂಗಡಿಗರೊಂದಿಗೆ ಜೈಲ್ ಕೊಠಡಿಯಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡು, ಸಂಭ್ರಮಾಚರಣೆಯ ಫೋಟೋಗಳನ್ನು ಫೇಸ್‌ಬುಕ್‌ನಲ್ಲಿ ಫೋಟೊ ಪೋಸ್ಟ್ ಮಾಡಿಕೊಂಡಿದ್ದ. ಆಗ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಪೊಲೀಸರು ಈ ಜೈಲಿನ ಮೇಲೆ ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಎರಡು ಮೊಬೈಲ್ ಹಾಗೂ ಮೂರು ಸಿಮ್ ಕಾರ್ಡ್‌ಗಳು ಪತ್ತೆಯಾಗಿದ್ದವು.

ಆರೋಪಿಗಳ ವಿವರ ಇಲ್ಲಿದೆ
ಕೊಲೆ ಪ್ರಯತ್ನ ಕೇಸ್‌ನಲ್ಲಿ ಜೈಲಿನಲ್ಲಿರುವ ಮಹೇಶ್ ಗೌಡ, ಸೈಯ್ಯದ್ ಮಲ್ಲಿಕ್, ಸುಬ್ಬಯಾರ್, ದಿಲೀಪ್, ಯಶ್ವಂತ್, ಯೋಗೇಶ್ ಹಾಗೂ ಪೋಕ್ಸೋ ಪ್ರಕರಣದ ಆರೋಪಿ ಗಿರೀಶ್, 302 ಕೇಸ್‌ನಲ್ಲಿರುವ ಆರೋಪಿ ಚಂದ್ರು ಅವರನ್ನ ವಿಚಾರಣೆ ನಡೆಸಲಾಗಿದೆ. ಕೋರ್ಟ್‌ನಲ್ಲಿ ಅನುಮತಿ ಕೋರಿ ಈ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದರು.
ಕಾರಾಗೃಹಗಳು ಅಪರಾಧ ಎಸಗಿದ ವ್ಯಕ್ತಿಗಳ ಮನಃ ಪರಿವರ್ತನೆಯ ತಾಣಗಳಾಗಬೇಕು. ಆದರೆ ಹಣದಾಸೆ ಬಿದ್ದ ಜೈಲು ಸಿಬ್ಬಂದಿಗಳ ಅಕ್ರಮ ಸಹಕಾರದಿಂದ ಅಪರಾಧಿಗಳ ಮೋಜು ಮಸ್ತಿಯ ತಾಣಗಳಾಗುತ್ತಿವೆ ಎಂಬ ಆರೋಪಗಳು ಪದೇ ಪದೇ ಕೇಳಿಬತುತ್ತಿವೆ. ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ಪದೇ ಪದೇ ದಾಳಿ ನಡೆಸುತ್ತಿದ್ದಾರೆ. ಪ್ರತಿ ಬಾರಿಯ ದಾಳಿ ಸಮಯದಲ್ಲೂ ಜೈಲಿನನಲ್ಲಿನ ಕರ್ಮಕಾಂಡಗಳು ಬಯಲಾಗುತ್ತಲೇ ಇವೆ.
ಜೈಲಿನಲ್ಲಿನ ಕರ್ಮಕಾಂಡಗಳ ಬಯಲು
ಈ ಹಿಂದೆಯೂ ಸಹ ಬೆಳ್ಳಂಬೆಳಿಗ್ಗೆ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ನಿರ್ಬಂಧಿತ ವಸ್ತುಗಳನ್ನು ವಶಪಡಿಸಿಕೊಂಡಿರುವ ಘಟನೆ ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ನಡೆದಿತ್ತು. ರಾಮನಗರ ಎಸ್ಪಿ ಎಸ್.ಗಿರೀಶ್ ನೇತೃತ್ವದಲ್ಲಿ ಡಿವೈಎಸ್ಪಿ, ಸಿಪಿವೈ, ಪಿಎಸ್ಐಗಳು ಸೇರಿದಂತೆ 30ಕ್ಕೂ ಹೆಚ್ಚು ಪೊಲೀಸರ ತಂಡ ಜಿಲ್ಲಾ ಕಾರಾಗೃಹದ ಮೂಲೆ ಮೂಲೆಗಳನ್ನು ತಪಾಸಣೆ ನಡೆಸಿ, ವಿಚಾರಣಾಧೀನ ಕೈದಿಗಳಿಂದ ಹಣ, ಬೀಡಿ, ಸಿಗರೇಟ್, ಗುಟ್ಕಾ, ಬ್ಲೇಡ್, ಚಾಕು ಸೇರಿದಂತೆ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದರು.
ಕಾರಾಗೃಹದಲ್ಲಿ ಅಕ್ರಮಗಳು ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸ್ ಅಧಿಕಾರಿಗಳು, ಕಾರಾಗೃಹದಲ್ಲಿ 54 ಸಾವಿರ ಹಣ, 5 ಮೊಬೈಲ್ ಫೋನ್, 6 ಸಿಮ್ ಕಾರ್ಡುಗಳು, 70ಕ್ಕೂ ಹೆಚ್ಚು ಸಿಗರೇಟ್ ಮತ್ತು ಬೀಡಿ ಪ್ಯಾಕೇಟ್ ಗಳು, ಗುಟ್ಕಾ ಪ್ಯಾಕೇಟ್, ಬ್ಲೇಡ್, ಚಾಕು, ಸೀಜರ್ ಹಾಗೂ ಇತರೆ ವಸ್ತುಗಳು ಸಹ ಪರಿಶೀಲನೆ ವೇಳೆ ಸಿಕ್ಕಿದ್ದವು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications