ರಾಮನಗರ; ವಿದ್ಯುತ್ ಸ್ಪರ್ಶದಿಂದ ಆನೆ ಸಾವು
ರಾಮನಗರ, ಫೆಬ್ರವರಿ 26: ಆಹಾರ ಅರಸಿಕೊಂಡು ಬಂದ ಆನೆ ವಿದ್ಯುತ್ ಪರಿವರ್ತಕಕ್ಕೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಗುರುವಾರ ತಡರಾತ್ರಿ ಆಹಾರ ಹುಡುಕಿಕೊಂಡು ಬಂದ ಆನೆ ರಾಮನಗರದ ತುಂಬೇನಹಳ್ಳಿ ಗ್ರಾಮದಲ್ಲಿ ಟಿಸಿಗೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಸ್ಪರ್ಶದಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದೆ. ಕಳೆದ ಒಂದು ತಿಂಗಳಿನಿಂದ ಗ್ರಾಮದ ಸುತ್ತಮುತ್ತ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಸ್ಥಳೀಯರು ಹೇಳಿದ್ದಾರೆ.
ಚಿರತೆ, ಹುಲಿ, ಆನೆ ದಾಳಿ; ಹೆಚ್ಚಾಗುತ್ತಿದೆ ಮಾನವ, ಪ್ರಾಣಿ ಸಂಘರ್ಷ
ಆನೆಗಳು ಹೊಲದಲ್ಲಿರುವ ಟೋಮ್ಯಾಟೋ, ಬಾಳೆ ಬೆಳೆಗಳನ್ನು ನಾಶ ಮಾಡುತ್ತಿದೆ. ಈ ಬಗ್ಗೆ ಎಷ್ಟು ದೂರು ನೀಡಿದರೂ ಸಹ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಜನರು ಆರೋಪಿಸಿದ್ದಾರೆ. ಅರಣ್ಯಾಧಿಕಾರಿಗಳು ಆನೆ ಸತ್ತು ಹೋಗಿರುವ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.
ಚಾಮರಾಜನಗರ; ಆನೆ ದಂತ ಹಿಡಿದು ಆಟವಾಡಿದ ಹಾಡಿಯ ಮಕ್ಕಳು
ಆನೆ ದಾಳಿಗೆ ಯುವಕ ಬಲಿ; ಕಾಡಾನೆ ದಾಳಿಯಿಂದಾಗಿ ಯುವಕ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಬಿಟಿಕಾಡು ಕಾಫಿ ತೋಟದಲ್ಲಿ ನಡೆದಿದೆ. ಆನಂದಪುರ ನಿವಾಸಿ ಏಳುಮಲೈ ಎಂಬುವವರ ಪುತ್ರ ಸಂದೀಪ್ (21) ಮೃತ ದುರ್ದೈವಿ.
ಭಯಾನಕ ವಿಡಿಯೋ: ಸುಡುವ ಟೈರ್ ಎಸೆದ ತಮಿಳುನಾಡು ರೆಸಾರ್ಟ್ ಕಾರ್ಮಿಕರು: ಆನೆ ಸಾವು
ಬಿಬಿಟಿಸಿ ಸಂಸ್ಥೆಗೆ ಸೇರಿದ ಬಿಟಿಕಾಡು ಕಾಫಿ ತೋಟದ ಕಣದಲ್ಲಿ ರಾತ್ರಿ ಪಾಳಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಧರ್ಭ 2.30 ವೇಳೆ ಕಾಡಾನೆ ದಾಳಿ ನಡೆಸಿ ತಲೆಯ ಭಾಗಕ್ಕೆ ತಿವಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸಂದೀಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಭಾಗದಲ್ಲಿ ಕಾಡಾನೆ ದಾಳಿಗೆ ಇದು ಎರಡನೇ ಬಲಿಯಾಗಿದ್ದು, ಐದಕ್ಕೂ ಹೆಚ್ಚು ಮಂದಿ ಆನೆ ದಾಳಿಯಿಂದಾಗಿ ಶಾಶ್ವತ ಅಂಗ ವೈಫಲ್ಯದಿಂದ ಬಳಲುತ್ತಿದ್ದಾರೆ.