ಜನತಾ ಕರ್ಫ್ಯೂಗೆ ವ್ಯಾಪಕ ಬೆಂಬಲ, ರಾಮನಗರ ಬಂದ್
ರಾಮನಗರ, ಮಾರ್ಚ್ 22: ಕೊರೊನಾ ವೈರಸ್ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿರವರು ಕರೆ ನೀಡಿರುವ ಜನತಾ ಕರ್ಫ್ಯೂಗೆ ರಾಮನಗರ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಜಿಲ್ಲೆಯಾದ್ಯಂತ ಸಾರಿಗೆ ಸಂಚಾರ ಸ್ಥಗಿತ, ಅಂಗಡಿಗಳು, ಹೊಟೇಲ್ ಗಳು ಬಂದ್ ಆಗಿದ್ದು, ಏಷ್ಯಾದ ಅತಿದೊಡ್ಡ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗೆ ರಜೆ ಘೋಷಣೆ ಮಾಡಲಾಗಿದೆ.
ಎಪಿಎಂಸಿ ಮಾರುಕಟ್ಟೆ ಬಂದ್ ಮಾಡಲಾಗಿದೆ. ಮನೆಯಿಂದ ಹೊರಬರದೆ ಜನತಾ ಕರ್ಫ್ಯೂಗೆ ಸಾರ್ವಜನಿಕರ ಬೆಂಬಲ ನೀಡಿರುವುದರಿಂದ ರಸ್ತೆಗಳು ಬಿಕೋ ಎನ್ನುತ್ತಿವೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ವಾಹನ, ಜನರಿಲ್ಲದೆ ರಸ್ತೆಗಳು ಖಾಲಿ ಖಾಲಿ ಇವೆ.

ರೈಲ್ವೆ ಸಂಚಾರ ಸ್ಥಗಿತಗೊಂಡಿದ್ದು, ಜಿಲ್ಲೆಯ ಪುರಾಣ ಪ್ರಸಿದ್ದ ದೇವಾಲಯಗಳು, ಮಂದಿರ, ಮಸಿದಿಗಳಿಗೆ ಬೀಗ ಹಾಕಿ ಜನತಾ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ.












Click it and Unblock the Notifications