• search
 • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮನಗರ: ಕರ್ನಾಟಕ ಬಂದ್ ಗೆ ರೈತಸಂಘ ಬೆಂಬಲ: ತುಂಬೇನಹಳ್ಳಿ ಶಿವಕುಮಾರ್

By ರಾಮನಗರ ಪ್ರತಿನಿಧಿ
|

ರಾಮನಗರ, ಸೆಪ್ಟೆಂಬರ್ 25: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಪಿಎಂಸಿ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ರೈತ ಹಾಗೂ ಪ್ರಗತಿಪರ ಸಂಘಟನೆಗಳು ಸೆ.28 ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ರೈತಸಂಘ ಹಾಗೂ ಹಸಿರು ಸೇನೆ ಸಂಪೂರ್ಣ

ಬೆಂಬಲ ವ್ಯಕ್ತಪಡಿಸಿ, ಬಂದ್ ನಲ್ಲಿ ಭಾಗಿಯಾಗಲಿದೆ ಎಂದು ಸಂಘದ ಅಧ್ಯಕ್ಷ ತುಂಬೇನಹಳ್ಳಿ ಶಿವಕುಮಾರ್ ತಿಳಿಸಿದರು.

ಭಾರತ್ ಬಂದ್; ಕರ್ನಾಟಕದ ಎಲ್ಲೆಲ್ಲಿ ಪ್ರತಿಭಟನೆ ನಡೆಯುತ್ತಿದೆ?

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿ ಮಾಡಿರುವ ಹಾಗೂ ಮಾಡಲು ಹೊರಟಿರುವ ಮಸೂದೆಗಳು ದಲಿತ, ಕಾರ್ಮಿಕ ಮತ್ತು ರೈತರಿಗೆ ಮರಣ ಶಾಸನವಾಗಿವೆ ಎಂದು ಆರೋಪಿಸಿದರು.

ಕೃಷಿ ಸಮುದಾಯ ಹಾಗೂ ಕೃಷಿ ಅವಲಂಬಿತ ಕುಟುಂಬಗಳು ಹಾಗೂ ಕಾರ್ಮಿಕರಿಗೆ ಕಂಟಕವಾಗಿರುವ ಎಪಿಎಂಸಿ, ಭೂ ಸುಧಾರಣೆ ಮತ್ತು ಕಾರ್ಮಿಕ ತಿದ್ದುಪಡಿ ಮಸೂದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಸೆ. 28 ರಂದು ನಡೆಯಲಿರುವ 'ಕರ್ನಾಟಕ ಬಂದ್‍'ಗೆ 20ಕ್ಕೂ ಹೆಚ್ಚು ಪ್ರಗತಿಪರ ಸಂಘಟನೆಗಳು ಬೆಂಬಲಿಸಿವೆ.

ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ ಕೂಡ ಇದಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಸೆ.28 ರಂದು ರಾಮನಗರದ ಐಜೂರು ವೃತ್ತದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಿದೆ ಎಂದರು.

   ಸಿದ್ದು ಹೊಸ ತಂತ್ರಗಾರಿಕೆ | Siddaramaiah | Oneindia Kannada

   ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿದ್ದು, ಇದನ್ನು ಎಲ್ಲರೂ ವಿರೋಧಿಸಬೇಕಿದೆ ಎಂದು ಮನವಿ ಮಾಡಿದರು.

   ಸಂಘದ ಗೌರವಾಧ್ಯಕ್ಷ ಶಾನುಭೋಗನಹಳ್ಳಿ ದೇವರಾಜು, ತಾಲ್ಲೂಕು ಅಧ್ಯಕ್ಷ ಮೆಳೇಹಳ್ಳಿ ಶಿವಕುಮಾರ್, ಬಿಡದಿ ಹೋಬಳಿ ಅಧ್ಯಕ್ಷ ಜಯರಾಮ್, ಉಪಾಧ್ಯಕ್ಷ ರಂಗಸ್ವಾಮಿ, ಮಹಿಳಾ ಘಟಕದ ಚಿಕ್ಕಮ್ಮಣಿ, ಪದಾಧಿಕಾರಿಗಳಾದ ನರಸಿಂಹಮೂರ್ತಿ, ನಾರಾಯಣ, ತಿಮ್ಮಯ್ಯ, ಚಿಕ್ಕರಾಮಣ್ಣ, ಚಿಕ್ಕಣ್ಣ ಮತ್ತಿತರರು ಉಪಸ್ಥಿತರಿದ್ದರು.

   English summary
   Farmer and progressive organizations have called on September 28 to protest the APMC amendment bills of the central and state governments.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X