ಹೋಂ ಕ್ವಾರಂಟೈನ್ ಉಲ್ಲಂಘನೆ; ರಾಮನಗರದಲ್ಲಿ 8 ಮಂದಿ ಮೇಲೆ FIR

ರಾಮನಗರ, ಜೂನ್ 29: ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿ ಹೊರಗೆ ಓಡಾಡುತ್ತಿದ್ದ ಜಿಲ್ಲೆಯ ಎಂಟು ಮಂದಿಯ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Recommended Video

      ಕಾರ್ ಬಿಟ್ಟು ಸೈಕಲ್ ನಲ್ಲಿ ಹೊರಟ ಸಿದ್ದರಾಮಯ್ಯ | Siddaramaiah | Oneindia Kannada

      ಸರ್ಕಾರ ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸಿದ ರಾಮನಗರ ತಾಲ್ಲೂಕಿನ 4 ಮಂದಿ ಮತ್ತು ಕನಕಪುರ ತಾಲ್ಲೂಕಿನ 4 ಮಂದಿಯ ವಿರುದ್ಧ ಎರಡು ತಾಲ್ಲೂಕಿನ ದಂಡಾಧಿಕಾರಿಗಳು ಅವರ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

      ಹೋಂ ಕ್ವಾರಂಟೈನ್ ಗೆ ಒಳಗಾದವರು ನಿಯಮಗಳನ್ನು ಉಲ್ಲಂಘಿಸಿ ಹೊರಗಡೆ ಓಡಾಡುವುದು ಮತ್ತು ಮನೆಯಲ್ಲಿ ಮೊಬೈಲ್ ಬಿಟ್ಟು ಹೋಗುವುದು ಇಲ್ಲವೇ ಇನ್ನಾರಿಗಾದರೂ ಮೊಬೈಲ್ ಕೊಟ್ಟ ಸಂದರ್ಭಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊರಡಿಸಲಾದ ಮಾದರಿ ಮಾರ್ಗಸೂಚಿಗಳ ಅನ್ವಯ ಎಫ್.ಐ.ಆರ್ ದಾಖಲಿಸಲಾಗುವುದು ಎಂದು ತಿಳಿಸಲಾಗಿತ್ತು.

      FIR On 8 People For Violating Home Quarantine Rules In Ramanagar

      ಜೊತೆಗೆ ಕ್ವಾರಂಟೈನ್ ನಿಯಮ ಉಲ್ಲಂಘಿಸುವವರನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟಿನ್ ಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷ ಎಂ.ಎಸ್. ಅರ್ಚನಾ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+