ಕನಕಪುರ- ಬೆಂಗಳೂರು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ
ಕನಕಪುರ (ರಾಮನಗರ), ಅಕ್ಟೋಬರ್ 27: ಕೆಎಸ್ಅರ್ ಟಿಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಭಾನುವಾರ ನಡೆದಿದೆ. ಆದರೆ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾ ಹುತ ತಪ್ಪಿದೆ. ಕನಕಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಅರ್ ಟಿಸಿ ಬಸ್ ನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತು.
ಹಾರೋಹಳ್ಳಿ ನಿಲ್ದಾಣಕ್ಕೆ ಬರುವಷ್ಟರಲ್ಲಿ ಹೊಗೆಯಾಡುತ್ತಿರುವುದನ್ನು ಗಮನಿಸಿದ ಚಾಲಕ ಕೂಡಲೇ ಬಸ್ ನಿಲ್ಲಿಸಿದರು. ಸಾರ್ವಜನಿಕರ ಸಹಕಾರದಿಂದ ಬೆಂಕಿಯನ್ನು ನಂದಿಸಲಾಗಿದೆ. ಬಸ್ ನಲ್ಲಿ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಈ ಘಟನೆಯಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರು ಕೆಲ ಕಾಲ ಆತಂಕಕ್ಕೆ ಒಳಗಾದರು.

ಆದರೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ಅವಘಡಯೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಒಂದು ವೇಳೆ ಅನಾಹುತ ಸಂಭವಿಸಿದ್ದರೆ ದೀಪಾವಳಿ ಹಬ್ಬವು ಹಲವು ಕುಟುಂಬಗಳ ಪಾಲಿಗೆ ಸೂತಕವಾಗಿ ಪರಿಣಮಿಸುತ್ತಿತ್ತು ಎಂದು ಸಾರ್ವಜನಿಕರು ಮಾತನಾಡುತ್ತಿದ್ದುದು ಕಂಡುಬಂತು.












Click it and Unblock the Notifications