ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ವೈರಸ್ ಸೋಂಕಿಗೆ ರಾಮನಗರದಲ್ಲಿ ಮೊದಲ ಬಲಿ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜೂನ್ 15: ಕೊರೊನಾ ವೈರಸ್ ಸೋಂಕಿಗೆ ರಾಮನಗರ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ರಾಮನಗರ ತಾಲೂಕಿನ ಬಿಡದಿ ಮೂಲದ 45 ವರ್ಷದ ವ್ಯಕ್ತಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

Recommended Video

Eating Garlic During Pregnancy – Benefits, Risks | Oneindia Kannada

ಬಿಡದಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಈ ವ್ಯಕ್ತಿಯು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಸತ್ತ ನಂತರ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ರಾಮನಗರದಲ್ಲೇ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆರಂಭ: ಡಿಸಿಎಂರಾಮನಗರದಲ್ಲೇ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆರಂಭ: ಡಿಸಿಎಂ

ಇದೀಗ ಮೃತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯನ್ನು ಪತ್ತೆ ಹಚ್ಚುವಲ್ಲಿ ಜಿಲ್ಲಾಡಳಿತ ನಿರತವಾಗಿದೆ. ಜಿಲ್ಲೆಯಲ್ಲಿ ಇಂದು ಎರಡು ಹೊಸ ಪ್ರಕರಣಗಳು ಕಂಡುಬಂದಿದ್ದು, ರಾಮನಗರ ಟೌನ್ ನ ಟಿಪ್ಪು ನಗರದಲ್ಲಿ ತಾಯಿ ಹಾಗೂ ಮಗನಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. 28 ವರ್ಷದ ಮಗ ಹಾಗೂ 48 ವರ್ಷದ ತಾಯಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

First Coronavirus Death Reported Today In Ramanagar District

ಈ ಯುವಕ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದಲೇ ಸೋಂಕು ಹರಡಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇಬ್ಬರನ್ನೂ ರಾಮನಗರ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22 ಆಗಿದೆ.

English summary
First coronavirus death reported today in ramanagar district. Bidadi based 45 year old vegetable merchant died today,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X