Mekedatu: ಬೆಂಗಳೂರು ಮೂಲದ ಐವರು ವಿದ್ಯಾರ್ಥಿಗಳು ಸಂಗಮದಲ್ಲಿ ನೀರುಪಾಲು
ರಾಮನಗರ, ಏಪ್ರಿಲ್ 29: ಪ್ರವಾಸಕ್ಕೆಂದು ಬೆಂಗಳೂರಿನಿಂದ ಸಂಗಮಕ್ಕೆ ಬಂದು ಈಜಲು ತೆರಳಿದ್ದ ಮೂವರು ವಿದ್ಯಾರ್ಥಿನಿಯರು ಮತ್ತು ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ಬಳಿಯ ಮೇಕೆದಾಟು ಸಂಗಮದಲ್ಲಿ ಜರುಗಿದೆ.
ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನೀರುಪಾಲಾದ ಐವರು ವಿದ್ಯಾರ್ಥಿಗಳು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

ರಜೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ರಾಮನಗರ ಜಿಲ್ಲೆಗೆ ಪ್ರವಾಸಕ್ಕೆಂದು ಬಂದಿದ್ದರು. ಕಾವೇರಿ ನದಿ ಮೇಕೆದಾಟು ಸಂಗಮದಲ್ಲಿ ಮೂವರು ವಿದ್ಯಾರ್ಥಿನಿಯರು ಮತ್ತು ಇಬ್ಬರು ವಿದ್ಯಾರ್ಥಿಗಳು ಈಜಲು ನೀರಿಗಿಳಿದಿದ್ದರು. ಈ ವೇಳೆ ನೀರಿನ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಕೊನೆಯಲ್ಲಿ ಐವರು ವಿದ್ಯಾರ್ಥಿಗಳ ಮೃತದೇಹ ಹೊರತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಕನಕಪುರ ಗ್ರಾಮಾಂತರ ಠಾಣಾ ಪೊಲೀಸರು ಹಾಗೂ ಸಾತನೂರು ಠಾಣೆ ಪೋಲೀಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಗಳನ್ನು ದಯಾನಂದ ವಿದ್ಯಾಸಾಗರ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನಷ್ಟು ಓದಿ.
ಮೃತಪಟ್ಟ ವಿದ್ಯಾರ್ಥಿಗಳ ವಿವರ ಇಲ್ಲಿದೆ
1. ವರ್ಷ (20), ಕೆಎಲ್ಇ ಕಾಲೇಜು ರಾಜಾಜಿನಗರ 2ನೇ ಹಂತ.
2. ಅಭಿಷೇಕ್ (20) ಬಿಹಾರ ಮೂಲದವರಾಗಿದ್ದು, ಮಲ್ಲೇಶ್ವರ ಸರ್ಕಾರಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ.
3. ಹರ್ಷಿತಾ ಎನ್.ಎಲ್ (20) ಎಂಜಿನಿಯರಿಂಗ್ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದು, ಚಿಕ್ಕಬಾಣವಾರ ಆರ್.ಆರ್ ಕಾಲೇಜು (ಮಂಡ್ಯ ಮೂಲ)
4. ತೇಜಸ್ (21) ಬಿಸಿಎ ವಿಜಯನಗರ ಸರ್ಕಾರಿ ಕಾಲೇಜು (ಚಿತ್ರದುರ್ಗ ಮೂಲ)
5. ನೇಹಾ (19) ಕೆಮಿಸ್ಟ್ರಿ ಕೆಎಲ್ಇ ಕಾಲೇಜು ಆರ್.ಆರ್ ನಗರ (ಚಿತ್ರದುರ್ಗ ಮೂಲ)












Click it and Unblock the Notifications